Headlines

NMPA Recruitment 2026: ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | NMPA Recruitment 2026: 12 Manager Posts at New Mangaluru Port Authority – Apply Now!

ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ನೇಮಕಾತಿImage Credit source: Ai generated

ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPA) ಇದೀಗ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ಬಂದರು ನಗರದಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ.

ಹುದ್ದೆಗಳ ವಿವರ ಮತ್ತು ವಿವಿಧ ವಿಭಾಗಗಳು:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಸಂಸ್ಥೆಯ ಪ್ರಮುಖ ಕಾರ್ಯಾಚರಣಾ ವಿಭಾಗಗಳಲ್ಲಿ ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ (ICT) ವಿಭಾಗದಲ್ಲಿ 4 ಹುದ್ದೆಗಳು, ಕಾರ್ಪೊರೇಟ್ ಲೀಗಲ್ ವಿಭಾಗದಲ್ಲಿ 3 ಹುದ್ದೆಗಳು, ಪರಿಸರ ಮತ್ತು ಸುರಕ್ಷತೆ ವಿಭಾಗದಲ್ಲಿ 2 ಹುದ್ದೆಗಳು ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಮತ್ತು ಟ್ರೇಡ್ ಪ್ರೊಮೋಷನ್ ವಿಭಾಗದಲ್ಲಿ 3 ಹುದ್ದೆಗಳು ಸೇರಿ ಒಟ್ಟು 12 ಅವಕಾಶಗಳು ಲಭ್ಯವಿವೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ನೇಮಕಾತಿ ನಿಯಮದಂತೆ ಪ್ರತಿ ಹುದ್ದೆಗೂ ಪ್ರತ್ಯೇಕ ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ನಿಗದಿಪಡಿಸಲಾಗಿದೆ. ICT ವಿಭಾಗಕ್ಕೆ ಬಿ.ಇ/ಬಿ.ಟೆಕ್ ಪದವಿ, ಲೀಗಲ್ ವಿಭಾಗಕ್ಕೆ ಕಾನೂನು ಪದವಿ, ಪರಿಸರ ವಿಭಾಗಕ್ಕೆ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ವಿಭಾಗಕ್ಕೆ ಎಂಬಿಎ ಪದವಿ ಕಡ್ಡಾಯವಾಗಿದೆ. ವಯೋಮಿತಿಯ ವಿಷಯದಲ್ಲಿ, ಚೀಫ್ ಮ್ಯಾನೇಜರ್‌ಗೆ ಗರಿಷ್ಠ 55 ವರ್ಷ, ಸೀನಿಯರ್ ಮ್ಯಾನೇಜರ್‌ಗೆ 45 ವರ್ಷ ಹಾಗೂ ಮ್ಯಾನೇಜರ್ ಹುದ್ದೆಗೆ 40 ವರ್ಷ ನಿಗದಿಪಡಿಸಲಾಗಿದ್ದು, ಮೀಸಲಾತಿ ವರ್ಗದವರಿಗೆ ಸರ್ಕಾರದ ನಿಯಮದಂತೆ ವಯೋ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ ಮತ್ತು ಆಯ್ಕೆ ವಿಧಾನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಮಾನದಂಡದಂತೆ ಅತ್ಯಂತ ಆಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ. ಚೀಫ್ ಮ್ಯಾನೇಜರ್ ಹುದ್ದೆಗೆ ಮಾಸಿಕ ಸುಮಾರು 2 ಲಕ್ಷ ರೂಪಾಯಿ, ಸೀನಿಯರ್ ಮ್ಯಾನೇಜರ್‌ಗೆ 1.60 ಲಕ್ಷ ರೂಪಾಯಿ ಹಾಗೂ ಮ್ಯಾನೇಜರ್ ಹುದ್ದೆಗೆ 1.20 ಲಕ್ಷ ರೂಪಾಯಿ ನಿಶ್ಚಿತ ವೇತನ ಸಿಗಲಿದೆ. ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲು ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ, ನಂತರ ಅರ್ಹ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಆಸಕ್ತರು NMPA ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ: 

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *