ನವದೆಹಲಿ, (ಆಗಸ್ಟ್ 09): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ. ಅಲ್ಲದೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ. ವಿದ್ಯಾರ್ಥಿಗಳ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆಗಳನ್ನು ಆಲಿಸಬೇಕು. ಇದರ ಜೊತೆಗೆ ಪಾರದರ್ಶಕ ಮತ್ತು ವಿಶ್ವಾಸಾರ್ಹತೆ ಮತ್ತಷ್ಟು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.