
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ ಬರಲಾರದು ಎಂದೆನಿಸಿದ್ದನ್ನು ನಿಲ್ಲಿಸಿಬಿಡುವುದು ಒಳ್ಳೆಯದು. ಆಯುರ್ವೇದ ಔಷಧಗಳ ವಿತರಣೆ ಮಾಡುವಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ. ನೀವು ಸಹ ಇಂಥ ಮಾತುಗಳಿಗೆ ಅಲ್ಲಿಂದ ಅಲ್ಲಿಗೆ ಎಂಬಂತೆ ಉತ್ತರವನ್ನು ಸಹ ನೀಡುತ್ತೀರಿ. ದೊಡ್ಡ ಅಳತೆಯ ಸೈಟು ಇರುವವರು ಅದನ್ನು ಮಾರಾಟ ಮಾಡಿ, ಕಟ್ಟಿರುವ ಮನೆ ಖರೀದಿ ಮಾಡುವ ಬಗ್ಗೆ ಆಲೋಚಿಸುತ್ತೀರಿ. ಅದರಲ್ಲೂ ತಿಂಗಳಾ ತಿಂಗಳು ಬಾಡಿಗೆ ರೂಪದಲ್ಲಿ ನಿಗದಿತ ಆದಾಯ ಮಾಡಿಕೊಳ್ಳುವ ಕಡೆಗೆ ಗಮನ ಇರಲಿದೆ.
ಸ್ವಾತಿ ಎನ್ಕೆ