
ಹಣದ ಪರ್ಸ್ನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಚಕ್ಕೆಯನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಮೇಲಿರುವ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ. ಹಣಕಾಸಿನ ಹರಿವು ಸರಾಗ ಆಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಅವರು ನಿಮಗೆ ಅಚ್ಚರಿ ಮೂಡಿಸುವಂತೆ ಕೆಲವು ಉಡುಗೊರೆಗಳನ್ನು ನೀಡಬಹುದು ಅಥವಾ ಪ್ರವಾಸಕ್ಕೆ ಕರೆದೊಯ್ಯುವುದಕ್ಕೆ ಪ್ಲಾನ್ ಮಾಡಬಹುದು.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಮುಕ್ತ ಮನಸ್ಸಿನಿಂದ ವರ್ತಿಸಲಿದ್ದೀರಿ. ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಆಗಲಿವೆ. ತುಂಬ ಆಪ್ತರು ಹಾಗೂ ಬಂಧುಗಳು ನೀಡುವ ಕೆಲವು ಸಲಹೆ- ಸೂಚನೆಗಳಿಂದಾಗಿ ಬಹಳ ಬದಲಾವಣೆಗಳನ್ನು ನೀವು ಮಾಡಿಕೊಳ್ಳಲಿದ್ದೀರಿ. ನೀವು ಈಗಾಗಲೇ ತೆಗೆದುಕೊಂಡಿದ್ದ ತೀರ್ಮಾನಗಳನ್ನು ತಕ್ಷಣಕ್ಕೆ ತಿಳಿಸದೆ ಮುಂದಕ್ಕೆ ಹಾಕುವ ಸಾಧ್ಯತೆಗಳಿವೆ. ಬಹಳ ಸಮಯದಿಂದ ಮಾಡಬೇಕು ಎಂದಿದ್ದ ಕೆಲವು ಕೆಲಸ ಈ ದಿನ ಮಾಡಲಿದ್ದೀರಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಪ್ರೀತಿ- ಪ್ರೇಮದ ವಿಚಾರದಲ್ಲಿ ಗಟ್ಟಿ ತೀರ್ಮಾನವನ್ನು ಕೈಗೊಳ್ಳಲೇ ಬೇಕಾದ ಸ್ಥಿತಿ ಉದ್ಭವ ಆಗಲಿದೆ. ಇನ್ನು ಪ್ರಮುಖವಾದ ವ್ಯಕ್ತಿಯೊಬ್ಬರನ್ನು ಈ ದಿನ ಭೇಟಿ ಆಗುವ ಯೋಗ ನಿಮಗೆ ಇದೆ. ಅವರ ಜತೆಗಿನ ಒಡನಾಟದಿಂದ ನಿಮ್ಮ ಆಲೋಚನಾ ಕ್ರಮದಲ್ಲಿ ಬದಲಾವಣೆ ಆಗಲಿದೆ. ಅಷ್ಟೇ ಅಲ್ಲ, ದೀರ್ಘಾವಧಿಯಲ್ಲಿ ಆದಾಯ ತರುವಂಥ ಸಾಧ್ಯತೆಗಳು ಸಹ ಇವೆ.
ಲೇಖನ- ಸ್ವಾತಿ ಎನ್.ಕೆ.