
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ. ಬಾಯಿರುಚಿಗೆ ಬಿದ್ದು, ಅಧಿಕ ಪ್ರಮಾಣದ ಆಹಾರ ಸೇವನೆ ಮಾಡುವುದಕ್ಕೆ ಹೋಗಬೇಡಿ. ದೇಹದ ತೂಕ ಮತ್ತು ನಿಮ್ಮ ಆರೋಗ್ಯ ಪರಿಸ್ಥಿತಿಯ ಕಡೆಗೂ ಲಕ್ಷ್ಯವನ್ನು ನೀಡಿ. ಅಧ್ಯಾತ್ಮದ ಕಡೆಗೆ ಮನಸ್ಸು ವಾಲಲಿದೆ. ಮೌನ- ಧ್ಯಾನಕ್ಕೆ ಒತ್ತು ನೀಡಲಿದ್ದೀರಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುವಂಥ ಹಾಗೂ ಒಳಿತು ಆಗುವಂಥ ಹೊಸ ವಿಚಾರಗಳನ್ನು ಹೊಸ ಜನರು ತೆಗೆದುಕೊಂಡು ಬರಲಿದ್ದಾರೆ. ಇಷ್ಟು ಸಮಯ ನಿಮ್ಮ ಮಾತನ್ನು ಯಾರು ಕೇಳಿಸಿಕೊಳ್ಳುತ್ತಾರೆ ಅಂತೇನಾದರೂ ನೀವು ಅಂದುಕೊಳ್ಳುತ್ತಾ ಇದ್ದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ. ಇಂಥ ಸಂದರ್ಭದಲ್ಲಿ ನೀವು ಮಾತನಾಡುವ ವಿಷಯ ಹಾಗೂ ಬಳಸುವ ಪದಗಳ ಕಡೆಗೆ ಗಮನವನ್ನು ನೀಡಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಕೆಲಸಗಳು ನಿಧಾನ ಗತಿಯಲ್ಲಿಯೇ ಸಾಗಿದರೂ ಫಲಗಳು ಉತ್ತಮ ರೀತಿಯಲ್ಲಿ ದೊರೆಯಲಿದೆ. ಆರ್ಥಿಕ ವಿಷಯಗಳಲ್ಲಿ ನಿಮ್ಮ ಬುದ್ಧಿವಂತಿಕೆ ನಿರ್ಧಾರಗಳು ಭವಿಷ್ಯದಲ್ಲಿ ದೊಡ್ಡ ಅನುಕೂಲಕ್ಕೆ- ಲಾಭಕ್ಕೆ ಕಾರಣ ಆಗಲಿವೆ. ನಿಮ್ಮ ಸಹನೆ ಹಾಗೂ ಎಷ್ಟು ಮಾತನಾಡಬೇಕೋ ಅಷ್ಟನ್ನು ಮಾತ್ರ ಮಾತನಾಡುವ ರೀತಿಯಿಂದಾಗಿ ಕುಟುಂಬದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಎಲ್ಲರ ಬಗ್ಗೆ ನೀವು ತೋರುವ ಗೌರವ ಹಾಗೂ ತೆಗೆದುಕೊಳ್ಳುವ ಕಾಳಜಿಯಿಂದ ಇತರರಿಗೆ ನಿಮ್ಮ ಮೇಲೆ ಪ್ರೀತಿ- ಗೌರವ ಹೆಚ್ಚಿಸುತ್ತದೆ.
ಲೇಖನ- ಸ್ವಾತಿ ಎನ್.ಕೆ.