ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಪತಿಯಿಂದಲೇ ದಾರುಣವಾಗಿ ಪತ್ನಿಯ ಹತ್ಯೆ
ಬೆಂಗಳೂರು, ಏಪ್ರಿಲ್ 02: ಹಣಕಾಸಿನ ವಿಚಾರಕ್ಕೆ ಪತ್ನಿ ಮತ್ತು ಗಂಡನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯಾ (34) ಮೃತಳಾಗಿದ್ದು, ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಪತಿ ದರಿಯಪ್ಪ ಎಂಬಾತ ಹತ್ಯೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕೆ ದಂಪತಿ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ನಿನ್ನೆ ಎರಡು ಲಕ್ಷ ಹಣವನ್ನು ಮನೆಯಲ್ಲಿ ತಂದು ಗಂಡ ದರಿಯಪ್ಪಇಟ್ಟಿದ್ದ. ಆ ಹಣವನ್ನು ತನ್ನ ಅಣ್ಣನಿಗೆ…