ಅಪಘಾತದಲ್ಲಿ ಯುವಕ-ಯುವತಿ ದುರ್ಮರಣ: ಆದಿಯೋಗಿ ದರ್ಶನ ಪಡೆದು ಮರಳುತ್ತಿದ್ದವರು ಮಸಣಕ್ಕೆ – Kannada News | Young Man and Woman Die in Road Accident While Returning from Adiyogi Visit
ಚಿಕ್ಕಬಳ್ಳಾಪುರ, ಆಗಸ್ಟ್ 16: ಲಾರಿ ಡಿಕ್ಕಿಯಾಗಿ (accident) ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ, ಯುವತಿ ದುರ್ಮರಣ ಹೊಂದಿರುವಂತಹ (death) ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ. ಮೃತ ಯುವಕ-ಯುವತಿ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಸಮೀಪರುವ ಈಶಾ ಆದಿಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ಮರಳುತ್ತಿದ್ದರು. ಈ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ವೇಗವಾಗಿ ಬಂದ ಲಾರಿಯೊಂದು ಇವರ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ….