Akshaya Tritiya: ನಾಳೆ ಅಕ್ಷಯ ತೃತೀಯ; ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ನಿಮ್ಮ ಪೂಜಾ ವಿಧಾನ ಹೀಗಿರಲಿ – Kannada News | Akshaya Tritiya: Meaning, Lakshmi Puja Rituals and Significance of Donations for Prosperity

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಅತ್ಯಂತ ಮಂಗಳಕರವಾದ ದಿನಗಳಲ್ಲಿ ಒಂದು. “ಅಕ್ಷಯ” ಎಂದರೆ ಎಂದಿಗೂ ನಾಶವಾಗದ ಅಥವಾ ಸವೆಯದ ಎಂದರ್ಥ. ಈ ದಿನದಂದು ಮಾಡಿದ ದಾನ, ಧರ್ಮ, ಪೂಜೆ ಮತ್ತು ಹೊಸ ಕಾರ್ಯಗಳು ಅನಂತ ಫಲವನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ಈ ಬಾರಿ ಏಪ್ರಿಲ್ 19, ಭಾನುವಾರ (ಅಥವಾ ಸೋಮವಾರದ ಶುಭ ಮುಹೂರ್ತದಲ್ಲಿ) ಬರುವ ಈ ಹಬ್ಬದ ವಿಶೇಷತೆ ಮತ್ತು ಪೂಜಾ ವಿಧಿವಿಧಾನಗಳ ಮಾಹಿತಿ ಇಲ್ಲಿದೆ.

ಹೊಸ ಆರಂಭಕ್ಕೆ ಇದುವೇ ಸಕಾಲ:

ಅಕ್ಷಯ ತೃತೀಯದಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೂ ಅದು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತದೆ. ಚಿನ್ನ ಖರೀದಿಸುವುದು, ಭೂಮಿ ಪೂಜೆ ಮಾಡುವುದು ಅಥವಾ ವ್ಯಾಪಾರ ಆರಂಭಿಸಲು ಇದು ಅತ್ಯಂತ ಶ್ರೇಷ್ಠ ದಿನ.

ಲಕ್ಷ್ಮಿ ಪೂಜೆಗೆ ಸಿದ್ಧತೆ ಮತ್ತು ವಿಧಾನ:

ಮನೆಯಲ್ಲಿ ಅಷ್ಟೈಶ್ವರವೂ ನೆಲೆಸಬೇಕೆಂದರೆ ಈ ದಿನ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಬೇಕು. ಅಕ್ಷಯ ತೃತೀಯದಂದು ಬೆಳಿಗ್ಗೆ ಬೇಗನೆ (ಬ್ರಹ್ಮ ಮುಹೂರ್ತದಲ್ಲಿ) ಎದ್ದು ಸ್ನಾನಾದಿ ಕಾರ್ಯಗಳನ್ನು ಮುಗಿಸಬೇಕು. ಬಳಿಕ ಮನೆಯನ್ನು ಸ್ವಚ್ಛಗೊಳಿಸಿ, ಹೊಸ್ತಿಲಿಗೆ ರಂಗೋಲಿ ಹಾಕಿ. ಮಾವಿನ ಎಲೆಗಳ ತೋರಣ ಮತ್ತು ತಾಜಾ ಹೂವುಗಳಿಂದ ಪೂಜಾ ಮಂದಿರವನ್ನು ಅಲಂಕರಿಸಿ. ಒಂದು ಬೆಳ್ಳಿಯ ಅಥವಾ ತಾಮ್ರದ ಬಟ್ಟಲಿನಲ್ಲಿ ನೀರು ತುಂಬಿಸಿ, ಅದರ ಮೇಲೆ ತೆಂಗಿನಕಾಯಿ ಇರಿಸಿ ಕಲಶವನ್ನು ಸ್ಥಾಪಿಸಿ. ಇದು ದೇವಿಯ ಸಾನ್ನಿಧ್ಯದ ಸಂಕೇತ. ಹಸುವಿನ ಶುದ್ಧ ತುಪ್ಪದಿಂದ ದೀಪವನ್ನು ಹಚ್ಚಿ ದೇವಿಗೆ ಆರತಿ ಎತ್ತಬೇಕು.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ವಿಶೇಷ ಅರ್ಪಣೆಗಳು ಮತ್ತು ಮಂತ್ರ ಪಠಣೆ:

ಲಕ್ಷ್ಮಿ ದೇವಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸುವುದರಿಂದ ಆಕೆಯ ಆಶೀರ್ವಾದ ಬೇಗನೆ ದೊರೆಯುತ್ತದೆ. ದೇವಿಗೆ ಇಷ್ಟವಾದ ಸಿಹಿ ಪದಾರ್ಥಗಳನ್ನು ಅರ್ಪಿಸಿ. ಈ ದಿನ ಲಕ್ಷ್ಮಿ ಸ್ತೋತ್ರಗಳನ್ನು ಭಕ್ತಿಯಿಂದ ಪಠಿಸಬೇಕು. ಸಾಧ್ಯವಾದರೆ ಎಂಟುನೂರು ಪದಗಳ ಸ್ತೋತ್ರ ಪಠಿಸುವುದು ಶ್ರೇಷ್ಠ. ದೇವಿಗೆ ಹೂವು, ಬಳೆ, ಸೀರೆ ಮತ್ತು ಹಣ್ಣುಗಳನ್ನು ಅರ್ಪಿಸಿ ಪೂಜೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ವೃದ್ಧಿಯಾಗುತ್ತದೆ.

ದಾನದ ಮಹತ್ವ:

ಅಕ್ಷಯ ತೃತೀಯ ಕೇವಲ ಖರೀದಿಗಷ್ಟೇ ಸೀಮಿತವಲ್ಲ, ದಾನಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ಈ ದಿನ ಬಡವರಿಗೆ ಅಥವಾ ಅರ್ಹರಿಗೆ ಅನ್ನದಾನ, ಬಟ್ಟೆ ಅಥವಾ ಹಣವನ್ನು ದಾನ ಮಾಡುವುದರಿಂದ ಜೀವನದಲ್ಲಿ ಪುಣ್ಯದ ಫಲ ಅಕ್ಷಯವಾಗಿ ಉಳಿಯುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ, ಬ್ಲ್ಯಾಕ್​ಮೇಲ್! ಬಂಧಿತ ಕೃಪಲಾನಿಯ ಕಾಮಕಾಂಡ ಸಂಪೂರ್ಣ ಬಯಲು – Kannada News | Serial Blackmailer Krupalani Arrested: Trapped 50 Female Officers via Fake Love, Marriage Proposals in Bengaluru

ಬೆಂಗಳೂರು, ಏಪ್ರಿಲ್ 18: ಮಹಿಳಾ ಕಸ್ಟಮ್ಸ್ ಅಧಿಕಾರಿಯ (Customs Officer) ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ (Krupalani) ಎಂಬಾತನ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ ಎಂಬ ಆರೋಪವಿದೆ.

ಜಿಎಸ್​ಟಿ, ಕಸ್ಟಮ್ಸ್ ಮಹಿಳಾ ಅಧಿಕಾರಿಗಳೇ ಟಾರ್ಗೆಟ್

ಆರೋಪಿ ಕೃಪಲಾನಿ ಮುಖ್ಯವಾಗಿ ಜಿಎಸ್‌ಟಿ (GST) ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಎಂದು ಆಪ್ತನಾಗುತ್ತಿದ್ದ. ನಂತರ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ಅಷ್ಟಕ್ಕೇ ಸುಮ್ಮನಾಗದೆ, ಆ ದೈಹಿಕ ಸಂಪರ್ಕವನ್ನೇ ಬಂಡವಾಳವಾಗಿಸಿಕೊಂಡು ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸುತ್ತಿದ್ದ.

ಕೆಲಸದ ಲೂಪ್ ಹೋಲ್ ಬಳಸಿ ಬ್ಲ್ಯಾಕ್‌ಮೇಲ್

ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಒಳಗಿನ ಲೋಪದೋಷಗಳನ್ನು ತಿಳಿದುಕೊಳ್ಳುತ್ತಿದ್ದ ಈತ, ಅದನ್ನು ಇಟ್ಟುಕೊಂಡು ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದ. ಲೈಂಗಿಕ ಸಂಪರ್ಕದ ನಂತರ ವಿಡಿಯೋ ಅಥವಾ ಫೋಟೋಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಈತ, ಅಧಿಕಾರಿಗಳನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದ ಎಂಬ ಆರೋಪವಿದೆ.

ಪೊಲೀಸರ ಮೇಲೆಯೇ ದರ್ಪ

ವಿಚಾರಣೆ ನಡೆಯುತ್ತಿರುವಾಗಲೂ ಈತನ ಉದ್ಧಟತನ ಮುಂದುವರಿದಿದೆ. ಮೆಡಿಕಲ್ ಟೆಸ್ಟ್ ಮಾಡಿಸುವ ವೇಳೆ ಆಸ್ಪತ್ರೆಯಲ್ಲಿ ರಂಪಾಟ ಮಾಡಿರುವ ಆರೋಪಿ, ಪೊಲೀಸರ ಮೊಬೈಲ್ ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪುಲಿಕೇಶಿನಗರ ಎಸಿಪಿ ಗೀತಾ ನೇತೃತ್ವದಲ್ಲಿ ಈ ಗಂಭೀರ ಪ್ರಕರಣದ ತನಿಖೆ ಚುರುಕಿನಿಂದ ಸಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾವ್ಯಾಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ಗಿಲ್ಲಿ ನಟ – Kannada News | Gilli Nata sing A romantic song For Kavya Shaiva

ಕಾವ್ಯಾ ಹಾಗೂ ಗಿಲ್ಲಿ ನಟ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈಗ ಕಾವ್ಯಾ ಶೈವ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಗಿಲ್ಲಿಗೆ ಕರೆ ಮಾಡಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಹಾಡನ್ನು ಹಾಡುವಂತೆ ಕೋರಲಾಗಿದೆ. ಆಗ ಗಿಲ್ಲಿ ನಟ ಅವರು ಸ್ವೀಟ್ ಆಗಿ ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಸ್ಟಡಿಯಿಂದ ಎಸ್ಕೇಪ್ ಆದ ಆರೋಪಿ! – Kannada News | KIADB Ballari: Rs 16 Cr Financial Fraud Accused Escapes Custody, Recaptured in 24 Hrs

ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್

ಬಳ್ಳಾರಿ, ಏಪ್ರಿಲ್ 18: ಜಿಲ್ಲೆಯಲ್ಲಿ ( ಬಳ್ಳಾರಿ)ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ.

ನಡೆದಿದ್ದೇನು?

ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ 16.17 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿದ ಆರೋಪ ಇದೆ. ಗುತ್ತಿಗೆ ನೌಕರನಾಗಿದ್ದ ಸಂತೋಷ್, ಅಧಿಕಾರಿಗಳ ನಕಲಿ ಸಹಿಗಳನ್ನು ಬಳಸಿ ಚೆಕ್‌ಗಳ ಮೂಲಕ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಏಳು ಮಂದಿ ಭಾಗಿಯಾಗಿರುವ ಶಂಕೆ ಇದೆ.

ಇದನ್ನೂ ಓದಿ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್

ಸಿಬಿಐಗೆ ಒಪ್ಪಿಸುವ ಮುನ್ನವೇ ಪರಾರಿ

2022ರಿಂದ 2026ರವರೆಗೆ ಹಂತ ಹಂತವಾಗಿ ಹಣ ಲೂಟಿ ಮಾಡಲಾಗಿದ್ದು, 2026 ಮಾರ್ಚ್ 3ರಂದು ಪ್ರಕರಣ ಬಹಿರಂಗಗೊಂಡಿತ್ತು. ಬಳಿಕ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಂತೋಷ್ ಪರಾರಿಯಾಗಿದ್ದ. ನಿರಂತರ ಹುಡುಕಾಟದ ಬಳಿಕ ಏಪ್ರಿಲ್ 15ರಂದು ಪೊಲೀಸರು ಅವನನ್ನು ಬಂಧಿಸಿದ್ದರು. ಸರ್ಕಾರಿ ಹಣ ದುರ್ಬಳಕೆ ಪ್ರಕರಣವಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಸಿಐಡಿಗೆ ಒಪ್ಪಿಸುವ ಮುನ್ನವೇ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡಿರದ್ದ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ನಮ್ಮ ಊರು, ನಮ್ಮ ನೂರು: ಬೆಂಗಳೂರಿನಲ್ಲಿ RCB ‘ಶತಕ’ – Kannada News | RCB will be playing their 100th home match at the Chinnaswamy Stadium

IPL 2026: ಐಪಿಎಲ್​ನ 26ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಾಲಿಗೆ ಕೇವಲ ಒಂದು ಪಂದ್ಯವಲ್ಲ, ಅದೊಂದು ಭಾವನಾತ್ಮಕ ಮೈಲಿಗಲ್ಲು. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿರುವ ಈ ತಂಡ, ಇಂದು (ಏಪ್ರಿಲ್ 18, 2026) ತನ್ನ ತವರು ಮೈದಾನವಾದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 100ನೇ ಐಪಿಎಲ್ ಪಂದ್ಯವನ್ನಾಡುತ್ತಿದೆ.

ಡಬಲ್ ವಿಶೇಷ:

ವಿಶೇಷವೆಂದರೆ, 18 ವರ್ಷಗಳ ಹಿಂದೆ ಅಂದರೆ 2008ರ ಏಪ್ರಿಲ್ 18ರಂದೇ ಆರ್​ಸಿಬಿ ತಂಡವು ಐಪಿಎಲ್‌ನ ಮೊಟ್ಟಮೊದಲ ಪಂದ್ಯವಾಡಿತ್ತು. ಅಂದರೆ ಚೊಚ್ಚಲ ಐಪಿಎಲ್​ನ ಮೊದಲ ಪಂದ್ಯ ನಡೆದಿದ್ದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದು ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು.

ಇದೀಗ ಬರೋಬ್ಬರಿ 19 ವರ್ಷಗಳ ಬಳಿಕ ಆರ್​ಸಿಬಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100ನೇ ಪಂದ್ಯವಾಡುತ್ತಿದೆ. ಅದು ಸಹ ಏಪ್ರಿಲ್ 18 ರಂದೇ ಎಂಬುದೇ ವಿಶೇಷ. ಅಂದರೆ ಐಪಿಎಲ್​ನ ಮೊದಲ ಪಂದ್ಯವಾಡಿದ ದಿನಾಂಕದಂದೇ ಆರ್​ಸಿಬಿ 100ನೇ ಪಂದ್ಯವಾಡುತ್ತಿದೆ.

ಐತಿಹಾಸಿಕ ಮೈಲುಗಲ್ಲು:

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ಮೈದಾನದಲ್ಲಿ 100 ಪಂದ್ಯಗಳನ್ನಾಡಿಲ್ಲ ಎಂಬುದು ವಿಶೇಷ.

  • ಮುಂಬೈ ಇಂಡಿಯನ್ಸ್ (MI): ಮುಂಬೈನ ವಾಂಖೆಡೆ ಕ್ರೀಡಾಂಗಣವು ಅತಿ ಹೆಚ್ಚು ಐಪಿಎಲ್ ಪಂದ್ಯಗಳಿಗೆ (ಸುಮಾರು 126) ಆತಿಥ್ಯ ನೀಡಿದ್ದರೂ, ಮುಂಬೈ ತಂಡವು ಅಲ್ಲಿ ಆಡಿರುವುದು 92 ಮ್ಯಾಚ್​ಗಳನ್ನು ಮಾತ್ರ.
  • ಕೋಲ್ಕತ್ತಾ ನೈಟ್ ರೈಡರ್ಸ್ (KKR): ಈಡನ್ ಗಾರ್ಡನ್ಸ್ ಮೈದಾನವು 100ಕ್ಕೂ ಹೆಚ್ಚು ಐಪಿಎಲ್ ಪಂದ್ಯಗಳನ್ನು ಕಂಡಿದೆ, ಆದರೆ ಕೆಕೆಆರ್ ತಂಡವು ಅಲ್ಲಿ ಆಡಿರುವ ಪಂದ್ಯಗಳ ಸಂಖ್ಯೆ 95 ಮಾತ್ರ.
  • ಚೆನ್ನೈ ಸೂಪರ್ ಕಿಂಗ್ಸ್ (CSK): ಎಂ.ಎ. ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಸಿಎಸ್‌ಕೆ ಇದುವರೆಗೆ ಸುಮಾರು 92 ಪಂದ್ಯಗಳನ್ನು ಆಡಿದೆ.

ಅಂದರೆ ಐಪಿಎಲ್​ನ ಯಶಸ್ವಿ ಮೂರು ತಂಡಗಳು ತವರಿನಲ್ಲಿ 100 ಪಂದ್ಯಗಳನ್ನಾಡಿದ ಸಾಧನೆ ಮಾಡಿಲ್ಲ. ಇದೀಗ ಈ ಸಾಧನೆ ಮಾಡಿದ ಮೊದಲ ತಂಡ ಎನಿಸಿಕೊಳ್ಳಲು ಆರ್​ಸಿಬಿ ಸಜ್ಜಾಗಿ ನಿಂತಿದೆ. ಅದರಂತೆ ಇಂದು ಕಣಕ್ಕಿಳಿಯುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

ಚಿನ್ನಸ್ವಾಮಿಯಲ್ಲಿ RCB ದಾಖಲೆ ಹೇಗಿದೆ?

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 99 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ 48 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 46 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನುಳಿದ 5 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿದ್ದವು.

ಇದನ್ನೂ ಓದಿ: ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK

2026ರ ಐಪಿಎಲ್ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಒಟ್ಟು 5 ಪಂದ್ಯಗಳನ್ನು ಆಡಿದೆ. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 3 ಪಂದ್ಯಗಳಲ್ಲೂ ಆರ್​ಸಿಬಿ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಅದರಂತೆ ನೂರನೇ ಪಂದ್ಯದಲ್ಲಿ ಆರ್​ಸಿಬಿ ಸ್ಮರಣೀಯ ಗೆಲುವು ತನ್ನದಾಗಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Published On – 10:58 am, Sat, 18 April 26

Source link

Heatwave Safety: ಹೆಚ್ಚುತ್ತಿರುವ ಬಿಸಿಲ ಬೇಗೆ; ಆರೋಗ್ಯ ರಕ್ಷಣೆಗೆ ಇಲ್ಲಿವೆ ಸರಳ ಹಾಗೂ ಪರಿಣಾಮಕಾರಿ ಉಪಾಯಗಳು – Kannada News | Heatwave Safety: 7 Tips to Protect Your Family from Extreme Summer Sun

ದಿನ ಕಳೆದಂತೆ ಸೂರ್ಯನ ಪ್ರಖರತೆ ಏರುತ್ತಲೇ ಇದೆ. “ಇಂದು ಮಳೆ ಬರಬಹುದು, ನಾಳೆ ಬರಬಹುದು” ಎಂಬ ನಿರೀಕ್ಷೆ ಎಲ್ಲರಲ್ಲೂ ಸಹಜ. ಇತ್ತೀಚೆಗೆ ಶಿರಸಿಯಂತಹ ಮಲೆನಾಡಿನ ಭಾಗದಲ್ಲೂ ನೆರಳಿನಲ್ಲೇ ಸುಮಾರು 35°C ಉಷ್ಣಾಂಶ ದಾಖಲಾಗುತ್ತಿರುವುದು ಬಿಸಿಲಿನ ತೀವ್ರತೆಗೆ ಸಾಕ್ಷಿ. ಹಿಂದಿನ ಕಾಲದಲ್ಲಿ 33°C ದಾಟಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿತ್ತು, ಆದರೆ ಈಗಿನ ಹವಾಮಾನ ಬದಲಾವಣೆ ನಮಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುತ್ತಿದೆ. ಬಿಸಿಲಿನ ಧಗೆಯಿಂದ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಕೆಲವು ಪ್ರಮುಖ ಸಲಹೆಗಳು:

ಹೊರಾಂಗಣ ಕೆಲಸಗಳ ಸಮಯದ ಬಗ್ಗೆ ಇರಲಿ ಗಮನ:

ಸಾಮಾನ್ಯವಾಗಿ ಮಧ್ಯಾಹ್ನ 11:30 ರಿಂದ ಸಂಜೆ 4:00ರವರೆಗೆ ಬಿಸಿಲಿನ ತೀವ್ರತೆ ಗರಿಷ್ಠವಾಗಿರುತ್ತದೆ. ಸಾಧ್ಯವಾದಷ್ಟು ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ. ಅನಿವಾರ್ಯ ಕೆಲಸಗಳಿದ್ದರೆ ಬೆಳಿಗ್ಗೆ ಅಥವಾ ಸಂಜೆ 4 ಗಂಟೆಯ ನಂತರ ಮುಗಿಸಿಕೊಳ್ಳುವುದು ಒಳಿತು.

ಸರಿಯಾದ ಟೋಪಿಯ ಆಯ್ಕೆ:

ಬಿಸಿಲಿನಲ್ಲಿ ಹೋಗಲೇಬೇಕಾದ ಸಂದರ್ಭ ಬಂದಾಗ ಹತ್ತಿ ಬಟ್ಟೆ ಟೋಪಿ ಬಳಸಿ. ಇದು ತಲೆಯನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ. ಇದಲ್ಲದೇ ಅಂಪೈರ್ ಕ್ಯಾಪ್ (Umpire Cap) ಸಾಮಾನ್ಯ ಪಿ-ಕ್ಯಾಪ್‌ಗಿಂತ ಇದು ಮುಖ ಮತ್ತು ಕುತ್ತಿಗೆಗೆ ಹೆಚ್ಚು ರಕ್ಷಣೆ ನೀಡುತ್ತದೆ. ಗಾಢ ಬಣ್ಣದ ಬಟ್ಟೆಗಳು ಶಾಖವನ್ನು ಹೀರಿಕೊಳ್ಳುತ್ತವೆ. ಆದ್ದರಿಂದ ಬಿಳಿ ಅಥವಾ ತಿಳಿ ಬಣ್ಣದ ಟೋಪಿಗಳನ್ನು ಧರಿಸುವುದು ಹೆಚ್ಚು ಆರಾಮದಾಯಕ.

ದೇಹದ ಜಲಾಂಶ ನಿರ್ವಹಣೆ:

ಬಿಸಿಲಿನಲ್ಲಿ ದೇಹವು ಬೇಗನೆ ನೀರಿನಾಂಶವನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಸಾಮಾನ್ಯಕ್ಕಿಂತ ಹೆಚ್ಚು ನೀರನ್ನು ಕುಡಿಯಿರಿ. ಬಿಸಿಲಿಗೆ ಹೋಗುವ ಮೊದಲು 1 ಲೀಟರ್ ನೀರಿಗೆ 6 ಚಮಚ ಸಕ್ಕರೆ ಮತ್ತು 1 ಚಮಚ ಉಪ್ಪು ಸೇರಿಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ದೇಹದ ಶಕ್ತಿಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ಸಾಂಪ್ರದಾಯಿಕ ‘ಲಾವಂಚ’ದ ಮ್ಯಾಜಿಕ್:

ಉತ್ತರ ಕನ್ನಡದಲ್ಲಿ ಜನಪ್ರಿಯವಾಗಿರುವ ಲಾವಂಚ (ಮಡಿವಾಳ ಬೇರು) ಬಿಸಿಲಿಗೆ ಅತ್ಯುತ್ತಮ ಮದ್ದು. ಒಂದು ಅಡಿಕೆಯ ಗಾತ್ರದಷ್ಟು ಲಾವಂಚ ಬೇರನ್ನು ಮಣ್ಣಿಲ್ಲದಂತೆ ಚೆನ್ನಾಗಿ ತೊಳೆದು ಕುಡಿಯುವ ನೀರಿನ ಡ್ರಂಗೆ ಹಾಕಿ. ಒಮ್ಮೆ ಬಳಸಿದ ಬೇರನ್ನು 3-4 ದಿನಗಳವರೆಗೆ ಬಳಸಬಹುದು. ಈ ನೀರು ದೇಹಕ್ಕೆ ನೈಸರ್ಗಿಕ ತಂಪು ನೀಡುವುದಲ್ಲದೆ, ಮನಸ್ಸಿಗೆ ಹಿತವಾದ ಸುಗಂಧವನ್ನೂ ನೀಡುತ್ತದೆ.

ಕೊತ್ತಂಬರಿ (ಧನಿಯಾ) ಪಾನೀಯ:

ಪ್ರವಾಸ ಮಾಡುವವರಿಗೆ ಅಥವಾ ಹೆಚ್ಚು ನೀರು ಕುಡಿಯಲು ಸಾಧ್ಯವಾಗದವರಿಗೆ ಇದು ರಾಮಬಾಣ. 1 ಲೀಟರ್ ನೀರಿಗೆ 20 ಗ್ರಾಂ ಕೊತ್ತಂಬರಿ ಪುಡಿ ಹಾಕಿ 15-20 ನಿಮಿಷ ಕುದಿಸಿ. ನಂತರ 6 ಚಮಚ ಸಕ್ಕರೆ ಮತ್ತು 2 ಚಮಚ ಉಪ್ಪು ಸೇರಿಸಿ.

ಲೇಖನ: ಡಾ. ರವಿಕಿರಣ್ ಪಟವರ್ಧನ, ಪಟವರ್ಧನ ಆಯುರ್ವೇದ ಕ್ಲಿನಿಕ್, ಶಿರಸಿ (9242122874)

ಆರೋಗ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:45 am, Sat, 18 April 26

Source link

ಸದ್ಯಕ್ಕಂತೂ ಆಗಲ್ಲ ‘ಹೇರಾ ಫೇರಿ 3’; ಅಕ್ಷಯ್ ಕೊಟ್ಟ ಕಾರಣ ಏನು? – Kannada News | Hera Pheri 3 Delayed: Akshay Kumar Reveals Reasons Behind Postponement

ಅಕ್ಷಯ್ ಕುಮಾರ್ (Akshay Kumar) ಅಭಿನಯದ ಸಾಕಷ್ಟು ಸಿನಿಮಾಗಳು ಜನಮನ್ನಣೆ ಪಡೆದಿವೆ. ಅದರಲ್ಲಿ ‘ಹೇರಾ ಫೇರಿ’ ಸರಣಿ ಕೂಡ ಒಂದು. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ ಎಂದು ಹೇಳಲಾಗಿತ್ತು. ಆದರೆ, ಅದರ ಬಗ್ಗೆ ಯಾವುದೇ ಅಪ್​​ಡೇಟ್ ಬಂದಿಲ್ಲ. ಪರೇಶ್ ರಾವಲ್ ಆರಂಭದಲ್ಲಿ ಕಿರಿಕ್ ಮಾಡಿದರು. ನಂತರ ಅವರು ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಆದರೆ ಚಿತ್ರದ ಕೆಲಸ ಇನ್ನೂ ಪ್ರಾರಂಭವಾಗಿಲ್ಲ. ಈಗ, ‘ಹೇರಾ ಫೆರಿ 3’ ಸದ್ಯಕ್ಕೆ ಸೆಟ್ಟೇರಲ್ಲ ಎಂದು ಅಕ್ಷಯ್ ಕುಮಾರ್ ಸ್ವತಃ ದೃಢಪಡಿಸಿದ್ದಾರೆ.

‘ಹೇರಾ ಫೇರಿ 3 ಸಿನಿಮಾ ಈಗ ಆರಂಭ ಆಗುತ್ತಿಲ್ಲ. ಇದರಿಂದ ಸಾಕಷ್ಟು ಜನರಿಗೆ ಬೇಸರವಾಗಿದೆ. ಆದರೆ ಪರವಾಗಿಲ್ಲ, ನಾವು ‘ವೆಲ್‌ಕಮ್ 3’ ಮಾಡುತ್ತೇವೆ’ ಎಂದು ಅಕ್ಷಯ್ ಕುಮಾರ್ ಸಂದರ್ಶನವೊಂದರಲ್ಲಿ ಹೇಳಿದರು. ಚಿತ್ರದ ಬಗ್ಗೆ ವಿಷಯಗಳು ಬಗೆಹರಿದಿವೆಯೇ ಎಂದು ಕೇಳಿದಾಗ, ‘ಈಗ ಏನೋ ನಡೆಯುತ್ತಿದೆ. ಅದನ್ನು ಓಪನ್ ಆಗಿ ಹೇಳಲು ಸಾಧ್ಯವಿಲ್ಲ. ಆದರೆ, ಸಿನಿಮಾ ಸದ್ಯಕ್ಕಂತೂ ಆಗಲ್ಲ’ ಎಂದು ಹೇಳಿದರು ಅಕ್ಷಯ್.

ಮುಂದಿನ ಒಂದು ಅಥವಾ ಎರಡು ವರ್ಷಗಳ ಕಾಲ ಈ ಚಿತ್ರ ನಿರ್ಮಾಣವಾಗುವುದಿಲ್ಲವೇ ಎಂದು ಅಕ್ಷಯ್ ಕುಮಾರ್ ಅವರನ್ನು ಕೇಳಿದಾಗ, ‘ಮುಂದಿನ ವರ್ಷಕ್ಕಂತೂ ಸೆಟ್ಟೇರಲ್ಲ’ ಎಂದು ಉತ್ತರಿಸಿದರು. ಪರೇಶ್ ಅವರ ಜೊತೆ ಮನಸ್ತಾಪ ಪೂರ್ಣಗೊಂಡಿತೇ ಎಂದು ಕೇಳಿದಾಗ ನಾನು, ಸುನೀಲ್ ಶೆಟ್ಟಿ ಹಾಗೂ ಪರೇಶ್ ವೆಲ್ಕಮ್ ಟು ದಿ ಜಂಗಲ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದೇವೆ ಎಂದಿದ್ದಾರೆ.

‘ಸಂದರ್ಶನಗಳಲ್ಲಿ, ಕ್ಯಾಮೆರಾ ಎದುರು ಚರ್ಚಿಸಲಾಗದ ಕೆಲವು ವಿಷಯಗಳಿವೆ. ಇವು ಒಪ್ಪಂದಗಳು. ಒಂದು ಪ್ರಾಜೆಕ್ಟ್ ತಡ ಆಗಲು ಹಲವು ಕಾರಣ ಇರುತ್ತದೆ. ಸಮಯ ಬಂದಾಗ, ಈ ಚಿತ್ರವನ್ನು ನಿರ್ಮಿಸಲಾಗುವುದು. ಆದರೆ ಅಷ್ಟರಲ್ಲಿ ನನಗೆ ವಯಸ್ಸಾಗಿರಬಾರದು’ ಎಂದಿದ್ದಾರೆ.

ಇದನ್ನೂ ಓದಿ: ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ

‘ಹೇರಾ ಫೆರಿ’ ಚಿತ್ರದ ಹಿಂದಿನ ಎರಡೂ ಭಾಗಗಳು ಭಾರಿ ಯಶಸ್ಸನ್ನು ಕಂಡವು. ಚಿತ್ರಗಳು ಉತ್ತಮ ಪ್ರತಿಕ್ರಿಯೆ ಪಡೆದವು ಮತ್ತು ಎರಡೂ ಕಲ್ಟ್ ಕ್ಲಾಸಿಕ್ ಸ್ಥಾನಮಾನವನ್ನು ಹೊಂದಿವೆ. ಅಭಿಮಾನಿಗಳು “ಹೇರಾ ಫೆರಿ 3” ಗಾಗಿ ಕಾತರದಿಂದ ಕಾಯುತ್ತಿದ್ದಾರೆ, ಆದರೆ ಆ ಕಾಯುವಿಕೆ ಎಷ್ಟು ಕಾಲ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ – Kannada News | KRS Dam Water Level Drops to 99 Feet: Drinking Water Crisis Looms for Bengaluru and Cauvery Basin Districts

ಮಂಡ್ಯ, ಏಪ್ರಿಲ್ 18: ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕನ್ನಂಬಾಡಿ ಕಟ್ಟೆ (KRS Dam) ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ. ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ.

ಖಾಲಿಯಾಗುತ್ತಿದೆ ಕಾವೇರಿ ಒಡಲು

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ (Dead Storage) ಆಗಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 15 ಟಿಎಂಸಿ ಮಾತ್ರ. ಪ್ರಸ್ತುತ ಜಲಾಶಯಕ್ಕೆ 66 ಕ್ಯೂಸೆಕ್ ಒಳಹರಿವು ಇದ್ದರೆ, ಹೊರಹರಿವು 4,388 ಕ್ಯೂಸೆಕ್ ಇದೆ.

ಬೆಂಗಳೂರಿಗರಿಗೆ ಆತಂಕ

ಕಾವೇರಿ ನೀರನ್ನೇ ನಂಬಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಇತರ ನಗರಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಲಭ್ಯವಿರುವ ನೀರನ್ನು ಕಟ್ಟು ಪದ್ಧತಿಯಲ್ಲಿ ಬೆಳೆಗೆ ನೀಡಬೇಕಿದೆ ಮತ್ತು ಕುಡಿಯಲು ಮೀಸಲಿಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.

ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ತಡವಾದರೆ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ಕಾವೇರಿ ನೀರು ಅವಲಂಬಿತ ಜನರಿಗೆ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ

ಮತ್ತೊಂದೆಡೆ, ಬೆಂಗಳೂರಿನ ವಿವಿಧೆಡೆ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ರಾಜಾಜಿನಗರದ ಚಾಮುಂಡಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, 3,000ಕ್ಕೂ ಹೆಚ್ಚು ಕುಟುಂಬಗಳು ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿಯೂ ನೀರಿನ ಭಾರಿ ಸಮಸ್ಯೆ ತಲೆದೋರಿದೆ. ಇದೀಗ ಕೆಆರ್​​ಎಸ್ ಡ್ಯಾಂನಲ್ಲೂ ನೀರಿನ ಮಟ್ಟ ಕುಸಿದಿರುವುದು ಬೆಂಗಳೂರಿನ ಜನತೆಗೆ ತಲೆನೋವು ಉಂಟುಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:03 am, Sat, 18 April 26

Source link

IPL 2026: SRH ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ

Source link

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ

ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು.

ಏನಿದು ಘಟನೆ?

ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದ ಅಡಿಭಾಗದ ಚಕ್ರಗಳ ವ್ಯವಸ್ಥೆಯಲ್ಲಿ (Undercarriage) ತಾಂತ್ರಿಕ ವೈಫಲ್ಯ ಉಂಟಾದ ಪರಿಣಾಮ ಅದು ರನ್‌ವೇ ಮೇಲೆಯೇ ನಿಂತುಬಿಟ್ಟಿತ್ತು. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್‌ಗಳು ಸುರಕ್ಷಿತವಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವಾಯುಪಡೆ ಸ್ಪಷ್ಟಪಡಿಸಿದೆ.

ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ ವಾಯುಪಡೆ, ವಿಮಾನದಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಹಾನಿಯಾಗಿಲ್ಲ. ರನ್‌ವೇ ಪುನಃ ಕಾರ್ಯಾಚರಣೆಗೆ ತರುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿತು. ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿ, ಅಗತ್ಯ ಭದ್ರತಾ ಪರಿಶೀಲನೆಗಳ ನಂತರ ರನ್‌ವೇ ಮತ್ತೆ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಘೋಷಿಸಿತು.

ಪುಣೆ ವಿಮಾನ ನಿಲ್ದಾಣವು ದ್ವಂದ್ವ ಬಳಕೆ ವ್ಯವಸ್ಥೆಯಲ್ಲಿದ್ದು, ಲೋಹೇಗಾಂವ್ ವಾಯುಪಡೆ ಕೇಂದ್ರದೊಂದಿಗೆ ನಾಗರಿಕ ವಿಮಾನಗಳೂ ಕಾರ್ಯನಿರ್ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದ ತಕ್ಷಣ ಸುರಕ್ಷತಾ ಕ್ರಮವಾಗಿ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ರನ್‌ವೇ ಕ್ಲಿಯರ್ ಮಾಡಲು 4 ರಿಂದ 6 ಗಂಟೆಗಳ ಕಾಲ ಹಿಡಿಯಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದರು.

ವಿಮಾನಯಾನದ ಮೇಲೆ ಭಾರಿ ಹೊಡೆತ

ಈ ಅವಧಿಯಲ್ಲಿ ಅನೇಕ ವಿಮಾನಗಳ ಆಗಮನ ಮತ್ತು ನಿರ್ಗಮನ ರದ್ದುಪಡಿಸಲಾಯಿತು. ಇಂಡಿಗೋ 31 ಆಗಮನ ಮತ್ತು 34 ನಿರ್ಗಮನ ವಿಮಾನಗಳನ್ನು ರದ್ದುಪಡಿಸಿದರೆ, ಏರ್ ಇಂಡಿಯಾ ಮೂರು ಆಗಮನ ಮತ್ತು ಮೂರು ನಿರ್ಗಮನ ವಿಮಾನಗಳನ್ನು ರದ್ದುಪಡಿಸಿದೆ. ಸ್ಪೈಸ್ ಜೆಟ್ ಹಾಗೂ ಆಕಾಶ ಏರ್ ತಲಾ ಎರಡು ಆಗಮನ ಮತ್ತು ಮೂರು ನಿರ್ಗಮನಗಳನ್ನು ರದ್ದುಪಡಿಸಿದವು. ಏರ್ ಇಂಡಿಯಾ ಎಕ್ಸ್​ಪರೆಸ್ ಐದು ಆಗಮನ ಮತ್ತು ಐದು ನಿರ್ಗಮನಗಳನ್ನು ರದ್ದುಪಡಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಇಂಡಿಗೋ ವಿಮಾನ ಸಂಸ್ಥೆ ಪ್ರಯಾಣ ಸಲಹೆ ಹೊರಡಿಸಿದ್ದು, ವಿಮಾನ ಸ್ಥಿತಿ ಪರಿಶೀಲಿಸಿ ಬಳಿಕವೇ ವಿಮಾನ ನಿಲ್ದಾಣಕ್ಕೆ ಬರಲು ಮನವಿ ಮಾಡಿದೆ. ಪರ್ಯಾಯ ಬುಕ್ಕಿಂಗ್ ಅಥವಾ ಸಂಪೂರ್ಣ ಹಣ ಮರುಪಾವತಿ ಆಯ್ಕೆಯನ್ನೂ ನೀಡಲಾಗಿದೆ.

ಇದನ್ನೂ ಓದಿ ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ?

ಸಚಿವರ ಭರವಸೆ

ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಪರಿಸ್ಥಿತಿಯನ್ನು ಅವಲೋಕಿಸಿ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದರು. ಯುದ್ಧ ವಿಮಾನವನ್ನು ತೆರವುಗೊಳಿಸಿ, ರನ್‌ವೇ ಪರೀಕ್ಷೆ ನಡೆಸಿದ ನಂತರ ಶನಿವಾರ ಬೆಳಗಿನ ಜಾವದ ವೇಳೆಗೆ ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ವಾಯುಪಡೆ ಟ್ವೀಟ್ ಮೂಲಕ ತಿಳಿಸಿದೆ.

ಪ್ರಯಾಣಿಕರಿಗೆ ಸೂಚನೆ

ವಿಮಾನ ರದ್ದತಿಯಿಂದ ಸಂಕಷ್ಟಕ್ಕೀಡಾದ ಪ್ರಯಾಣಿಕರಿಗೆ ಇಂಡಿಗೋ ಸಂಸ್ಥೆಯು ‘ಪ್ಲಾನ್ ಬಿ’ ಅಡಿಯಲ್ಲಿ ಪೂರ್ಣ ಹಣ ಮರುಪಾವತಿ ಅಥವಾ ಪರ್ಯಾಯ ವಿಮಾನದ ವ್ಯವಸ್ಥೆ ಕಲ್ಪಿಸುವುದಾಗಿ ಘೋಷಿಸಿದೆ. ಹವಾಮಾನ ಅಥವಾ ಇಂತಹ ತುರ್ತು ಸಂದರ್ಭಗಳಲ್ಲಿ ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ವಿಮಾನದ ಸ್ಥಿತಿಗತಿಯನ್ನು ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version