ಹೋಟೆಲ್ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ! – Kannada News | 53 percent Food Safety Officer Posts Vacant in Karnataka Amid Hotel Food Safety Raids
ಆಹಾರ ಇಲಾಖೆ ಅಧಿಕಾರಿಗಳಿಂದ ಬೆಂಗಳೂರಿನ ಹೋಟೆಲ್ನಲ್ಲಿ ತಪಾಸಣೆImage Credit source: tv9 ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ (Bengaluru) ಫೈವ್ ಸ್ಟಾರ್ ಹೋಟೆಲ್‌ಗಳು ಸೇರಿದಂತೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿರುವ ಸಂದರ್ಭದಲ್ಲೇ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮಂಜೂರಾಗಿರುವ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳ ಪೈಕಿ ಶೇ 53ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನಿಯಮಿತ ತಪಾಸಣೆ ಹಾಗೂ ಜಾರಿ ಕಾರ್ಯಕ್ಕೆ ತೊಂದರೆಯಾಗುತ್ತಿದೆ. 210…