ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues
ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ…