ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus
ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…