ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು…