ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ನಾಳೆ ಉಪವಾಸ ಸತ್ಯಾಗ್ರಹ – Kannada News
ನವದೆಹಲಿ, ಜೂನ್ 9: ಮಧ್ಯಪ್ರದೇಶದಿಂದ ರಾಜ್ಯಸಭೆಯ ಮೂರನೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಹೈದರಾಬಾದ್ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದರಿಂದ, ಕಾಂಗ್ರೆಸ್‌ಗೆ ಈಗ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದೆ ಆ ಸ್ಥಾನವನ್ನು ಕಳೆದುಕೊಂಡಿದೆ. ಇದರಿಂದಾಗಿ ಬಿಜೆಪಿಯ ಮೂರನೇ ಅಭ್ಯರ್ಥಿ…