Headlines

ಮಹಿಳೆಯರ ಶೂ ವಾಸನೆ ನೋಡುವುದೇ ಈತನ ಚಟ, ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವಕನ ಕೃತ್ಯ – Kannada News | CCTV Catch: Shah Alam Man’s Shoe Sniffing Fetish and Stalking Spree Exposed

ಶಾ ಆಲಂ, ಆಗಸ್ಟ್​ 07: ಕಾಲೇಜು ವಿದ್ಯಾರ್ಥಿನಿ(Student)ಯೊಬ್ಬಳು ಕಳೆದ ಕೆಲವು ತಿಂಗಳುಗಳಿಂದ ಯಾರೋ ತನ್ನನ್ನು ಹಿಂಬಾಲಿಸುತ್ತಿದ್ದಾರೆ, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂಬ ಭೀತಿಯಲ್ಲಿದ್ದಳು. ಆದರೆ, ತನ್ನ ಮನೆಯ ಹೊರಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಕೆಗೆ ಎದುರಾದ ಸತ್ಯ ಆಘಾತಕಾರಿ ಮಾತ್ರವಲ್ಲ, ಅತ್ಯಂತ ವಿಚಿತ್ರವಾಗಿತ್ತು. ಯುವಕನೊಬ್ಬ ಅಪಾರ್ಟ್‌ಮೆಂಟ್ ಗ್ರಿಲ್ ಮೂಲಕ ಕೈಹಾಕಿ, ಆಕೆಯ ಶೂಗಳನ್ನು (Shoes) ಹೊರತೆಗೆದು ವಾಸನೆ ನೋಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಮಲೇಷ್ಯಾದ ಶಾ ಅಲಂನಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ – Kannada News | Last Ashada Friday: Huge Devotee Crowd at Chamundeshwari Temple in Mysuru

ಮೈಸೂರು, ಆಗಸ್ಟ್ 7: ಮೈಸೂರಿನ ನಾಡದೇವಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಭಕ್ತಸಾಗರವೇ ಹರಿದುಬಂದಿದೆ. ಆಷಾಢ ಶುಕ್ರವಾರಕ್ಕೆ ವಿಶೇಷ ಮಹತ್ವವಿರುವುದರಿಂದ, ಈ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಚಾಮುಂಡೇಶ್ವರಿಗೆ ಮಹಾಲಕ್ಷ್ಮಿ ಅಲಂಕಾರವನ್ನು ಮಾಡಲಾಗಿದೆ. ದೇವಿಗೆ ಆಕಾಶ ನೀಲಿ ಬಣ್ಣದ ಸೀರೆಯನ್ನು ಹೊದಿಸಿ, ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ರಾಜಕೀಯ ಗಣ್ಯರು, ಚಲನಚಿತ್ರ ನಟ-ನಟಿಯರು,…

Read More

‘ಮಾಫಿ ಸಾಕ್ಷಿ’ ಭೀತಿ; ಜೈಲಿನಲ್ಲಿ ಊಟ, ನಿದ್ರೆಯಿಲ್ಲದೆ ಕಳೆದ ನಟ ದರ್ಶನ್‌ – Kannada News | Actor Darshan Panics Over Close Aide Pradoosh Approver Plea in Renukaswamy Case

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ಈಗ ಹೊಸದೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ, ದರ್ಶನ್ ಆಪ್ತ ಪ್ರದೋಷ್ ಮಾಫಿ ಸಾಕ್ಷಿ ಆಗಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ತೀರ್ಪು ಇನ್ನಷ್ಟೇ ಬರಬೇಕಿದೆ. ಈ ವಿಚಾರ ಸದ್ಯ ಜೈಲಿನಲ್ಲಿರುವ ದರ್ಶನ್ ನಿದ್ದೆಗೆಡಿಸಿದೆ. ಆಪ್ತನ ಅರ್ಜಿಯಿಂದ ಜೈಲಿನಲ್ಲಿ ಶುರುವಾಯ್ತು ನಡುಕ ಪ್ರಕರಣದಲ್ಲಿ ದರ್ಶನ್ ಜೊತೆ ಜೈಲು ಪಾಲಾಗಿರುವ ಅವರ ಆಪ್ತ ಪ್ರದೋಷ್, ಮಾಫಿ ಸಾಕ್ಷಿಯಾಗಲು…

Read More

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ: ಕನ್ನಡಿಗರನ್ನು ನಿಂದಿಸಿ ಠಾಣೆ ಮುಂಭಾಗವೇ ಕ್ಷಮೆ ಕೇಳಿದ ಮಹಿಳೆ! – Kannada News | Bengaluru Stock Market Fraud: Woman Apologizes for Abusing Kannadigas at Peenya Police Station

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ ಬೆಂಗಳೂರು, ಆಗಸ್ಟ್ 07: ಸ್ಟಾಕ್ ಮಾರ್ಕೆಟ್‌ನಲ್ಲಿ(Stock market) ಹೂಡಿಕೆ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಇದರ ಬೆನ್ನಲ್ಲೇ, ವಂಚನೆ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕನ್ನಡ ಭಾಷೆಯ ಕುರಿತು ಉದ್ಧಟತನ ಪ್ರದರ್ಶಿಸಿದ್ದ ಮಹಿಳೆಯೊಬ್ಬಳು ಕೊನೆಗೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಕ್ಷಮೆ ಕೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕನ್ನಡದಲ್ಲಿ ಮಾತನಾಡಿದ್ದಕ್ಕೆ ನಿಂದನೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು…

Read More

Boss Movie Review: ಶಿವಸ್ವಾಮಿ ಕೊಲೆ ರಹಸ್ಯದ ಕಥೆ ‘ಬಾಸ್’ ಹೇಗಿದೆ? ಇಲ್ಲಿದೆ ವಿಮರ್ಶೆ – Kannada News | Boss Movie Review: Controversial Thriller Inspired by High Profile Crime Case Movie Rating

ಒಂದು ಕೊಲೆ ನಡೆದು, ಅದರಲ್ಲಿ ಸೆಲೆಬ್ರಿಟಿಯ ಪಾತ್ರವಿದೆ ಎಂದಾಗ ಅದರಲ್ಲೂ ಆ ಪ್ರಕರಣದ ವಿಚಾರಣೆ ಇನ್ನೂ ಚಾಲ್ತಿಯಲ್ಲಿರುವಾಗ ಆ ಬಗ್ಗೆ ಒಂದಷ್ಟು ಕುತೂಹಲ ಇದ್ದೇ ಇರುತ್ತದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲೂ ಹಾಗೆಯೇ ಆಯಿತು. ಏಕೆಂದರೆ ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು ನಟ ದರ್ಶನ್. ಇದೇ ಕಥೆಯನ್ನು ಆಧರಿಸಿ ‘ಬಾಸ್’ ಸಿದ್ಧವಾಗಿದೆ ಎನ್ನಲಾಗಿತ್ತು. ನಿಜಕ್ಕೂ ಸಿನಿಮಾ ಹಾಗೆಯೇ ಇದೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ. ಬಾಸ್ ಸಿನಿಮಾ ಕಥೆ ಏನು? ಬೆಂಗಳೂರಿನ ಮೋರಿ ಪಕ್ಕದಲ್ಲಿ ಒಂದು ಹೆಣ ಸಿಗುತ್ತದೆ….

Read More

ಗದಗ: ಹುಳು ಬಿದ್ದ ಆಹಾರ ಸರಬರಾಜು; ರಕ್ತ ಹೀರುವ ತಿಗಣೆ ಕಾಟಕ್ಕೆ ವಿದ್ಯಾರ್ಥಿಗಳು ವಿಲವಿಲ – Kannada News | Gadag Hostel Mismanagement: Students Suffer from Unhygienic Conditions, Demand Action

ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ತೀವ್ರ ಅವ್ಯವಸ್ಥೆ ಗದಗ ಆ. 7: ಓದಿ ಮುಂದೆ ಬರಬೇಕು, ಸಾಧನೆ ಮಾಡಬೇಕು ಎಂಬ ನೂರಾರು ಕನಸು ಹೊತ್ತು ಸರ್ಕಾರಿ ಹಾಸ್ಟೆಲ್‌ಗೆ ಬಂದ ವಿದ್ಯಾರ್ಥಿಗಳಿಗೆ ಅವ್ಯವಸ್ಥೆಯ ಬಿಸಿ ತಟ್ಟಿದೆ. ಗದಗ ನಗರದ ಸೂರ್ಯ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವು ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಹಾಸ್ಟೆಲ್‌ನಲ್ಲಿ ತಿಗಣೆಗಳ ಕಾಟ, ಕಳಪೆ ಆಹಾರ ಸರಬರಾಜು ಹಾಗೂ ಶುದ್ಧ ಕುಡಿಯುವ ನೀರಿನ ಅಭಾವದಿಂದ ಬೇಸತ್ತ ವಿದ್ಯಾರ್ಥಿಗಳು,…

Read More

Video: ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥನೆ – Kannada News | Chamundi Hills Last Ashada Friday: Devotee Rush for Mahalakshmi Darshan, Prayers for Prosperity

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹಬ್ಬದ ವಾತಾವರಣ ನೆಲೆಸಿದೆ. ಈ ವಿಶೇಷ ದಿನದಂದು ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಮಹಾಲಕ್ಷ್ಮಿ ಅಲಂಕಾರದಲ್ಲಿ ಸುಂದರವಾಗಿ ಅಲಂಕರಿಸಲಾಗಿದೆ. ವಿವಿಧ ಪುಷ್ಪಗಳಿಂದ ಮಂಟಪವನ್ನು ಶೃಂಗರಿಸಲಾಗಿದ್ದು, ವಿಶೇಷವಾಗಿ ಶೇಷನಾಗದ ಆಕಾರದ ಮೊಗ್ಗಿನ ಜೊಡೆ ಅಲಂಕಾರ ಭಕ್ತರ ಗಮನ ಸೆಳೆದಿದೆ. ಬೆಳಗಿನ ಜಾವ 3:30ರಿಂದಲೇ ವಿಶೇಷ ಅಭಿಷೇಕ, ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಾಡಿಗೆ ಸುಭಿಕ್ಷೆ, ಶಾಂತಿ ನೆಲೆಸಲಿ ಹಾಗೂ ಉತ್ತಮ ಮಳೆ-ಬೆಳೆಯಾಗಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಆಷಾಢ ಮಾಸದಲ್ಲಿ…

Read More

‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ಪೊಲೀಸರ ವಶ! – Kannada News | Bengaluru Fraud Case: Techie Couple Arrested for Multi Crore Work From Home Packing Scam

‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ದೇವನಹಳ್ಳಿ ಪೊಲೀಸರ ವಶ! ದೇವನಹಳ್ಳಿ, ಆಗಸ್ಟ್ 07: ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ‘ವರ್ಕ್ ಫ್ರಂ ಹೋಂ’ (Work From Home) ಕೆಲಸದ ಆಸೆ ತೋರಿಸಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಿರಣ್ ಮತ್ತು ಆತನ ಪತ್ನಿ ಆರತಿ ಎಂದು ಗುರುತಿಸಲಾಗಿದೆ. ಈ ದಂಪತಿ ‘ಕಾಳಿಕಾ ದೇವಿ ಎಂಟರ್ ಪ್ರೈಸಸ್’ ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ತೆರೆದು…

Read More

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Thailand School Shooting: Student Kills Teacher, Injures 15 in Bangkok Attack

ಬ್ಯಾಂಕಾಕ್, ಆಗಸ್ಟ್ 07: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ(Firing) ನಡೆಸಿದ್ದಾನೆ. ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 15 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ಬೆನ್ನಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಬ್ಯಾಂಕಾಕ್ ಸಮೀಪದ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯಲ್ಲಿರುವ ದೇಬ್ಸಿರಿನ್ ನೊಂಥಬುರಿ…

Read More

ಕೊಪ್ಪಳ ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ; ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ – Kannada News | Koppal Congress Rift: Iqbal Ansari Hits Out at Shivraj Tangadagi, Basavaraj Rayareddy

ಇಕ್ಬಾಲ್ ಅನ್ಸಾರಿ (ಸಂಗ್ರಹ ಚಿತ್ರ)Image Credit source: tv9 ಕೊಪ್ಪಳ, ಆಗಸ್ಟ್ 7: ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ (Congress) ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಚಿವ ಶಿವರಾಜ್ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಡಿಯೋ ಮೂಲಕ ಮಾತನಾಡಿರುವ ಅನ್ಸಾರಿ, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಶಿವರಾಜ್ ತಂಗಡಗಿ, ‘ಇತರರ ಬಗ್ಗೆ ಮಾತನಾಡುವ…

Read More