ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್ಪಾಸ್!
ಬೆಂಗಳೂರು, ಮಾರ್ಚ್ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ. ಒಂದೇ…