US threat: ರಷ್ಯನ್ ತೈಲ ಖರೀದಿ- ಭಾರತದ ಮೇಲೆ ಮತ್ತೆ ಟ್ಯಾರಿಫ್ ಬೆದರಿಕೆ ಹಾಕಿದ ಟ್ರಂಪ್ – Kannada News | US president Donald Trump threatens more tariffs against India on Russian oil matter
ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ…