ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

ನವದೆಹಲಿ, ಜೂನ್ 13: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶನಿವಾರ) ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಒಂದು ವಾರದ ಸುದೀರ್ಘ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ತಮ್ಮ ವಿದೇಶಿ ಪ್ರವಾಸಕ್ಕೂ ಮುನ್ನ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ಮೋದಿ (PM Modi) ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಹೇಳಿದ್ದಾರೆ….

Read More

ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ – Kannada News | Shiv Sena UBT Split Uddhav Thackeray Calls Urgent Meet Amidst ‘Operation Tiger’ Rumors

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಬಿರುಗಾಳಿ ಎದ್ದಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೆ ಸೀಳು ಉಂಟಾಗಬಹುದು ಎಂಬ ಊಹಾಪೋಹಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray)ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪಕ್ಷದ ಸಂಸದರ ನಿರ್ಣಾಯಕ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿಡಲು ಮತ್ತು ಸಂಸದರು ಕೈಕೊಡುವುದನ್ನು ತಪ್ಪಿಸಲು ಈ ಸಭೆಯಲ್ಲಿ ಎಲ್ಲಾ ಲೋಕಸಭಾ ಸದಸ್ಯರಿಗೂ ಹಾಜರಿರಲು ವಿಪ್ ಜಾರಿ ಮಾಡಲಾಗಿದೆ. ಯುಬಿಟಿ ಪಕ್ಷದ ಒಟ್ಟು 9 ಲೋಕಸಭಾ ಸಂಸದರಲ್ಲಿ 6…

Read More

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..! – Kannada News | Vaibhav Sooryavanshi Out For 38 Runs Against Afghanistan A

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲೂ ಭಾರತ ‘ಎ’ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲೂ ಓಪನರ್ ಆಗಿ ಕಣಕ್ಕಿಳಿದ ವೈಭವ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನಿಡಿದ್ದರು. ಅದರಂತೆ ಕೇವಲ 27 ಎಸೆತಗಳಲ್ಲಿ 38 ರನ್ ಬಾರಿಸಿದ್ದರು. ಆದರೆ 28ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಔಟಾಗಿದ್ದಾರೆ. ಔಟ್ ಆಗಿದ್ದು ಹೇಗೆ? ಇನ್ನಿಂಗ್ಸ್‌ನ 8ನೇ ಓವರ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ವೈಭವ್…

Read More

ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House

ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ. ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ…

Read More

ಚಲಿಸುತ್ತಿರುವ ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ – Kannada News

ನವದೆಹಲಿ, ಜೂನ್ 11: ಚಲಿಸುತ್ತಿರುವ ರೈಲಿನಿಂದ ರೈಲ್ವೆ ಸಿಬ್ಬಂದಿ ಪ್ಯಾಕ್ ಮಾಡಿದ ಆಹಾರ(Food) ಪೊಟ್ಟಣಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಮಾರಾಟಕ್ಕೆ ಇಡಲಾಗಿದ್ದ ಆಹಾರ ಹಳಸಿತ್ತು ಅದರಿಂದ ದುರ್ವಾಸನೆ ಬರುತ್ತಿತ್ತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆಹಾರದ ಗುಣಮಟ್ಟ ಕಳಪೆಯಾಗಿದ್ದ ಕಾರಣ ಅನೇಕರು ಊಟ ಖರೀದಿಸಲು ನಿರಾಕರಿಸಿದ್ದದ್ದರಿಂದ, ತಯಾರಿಸಿದ ಆಹಾರ ಹಾಗೆಯೇ ಉಳಿದಿತ್ತು. ಎಕ್ಸ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಆದರೆ, ಅದರ ಬಾಗಿಲ ಬಳಿ ನಿಂತಿರುವ ಪ್ಯಾಂಟ್ರಿ ಕಾರ್‌ನ…

Read More

ರಾಜ್ಯದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ – Kannada News | ‘Permission Mandatory for RSS Route March as Long as I Am Home Minister’: Priyank Kharge Sparks Row

ಗೃಹ ಸಚಿವ ಪ್ರಿಯಾಂಕ್​​ ಖರ್ಗೆ Image Credit source: PTI ಕಲಬುರಗಿ, ಜುಲೈ 06: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್​​ ಖರ್ಗೆ ಹೇಳಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕರ್ನಾಟಕ ಸರ್ಕಾರದ ನಡುವೆ ಮತ್ತೊಂದು ಹೊಸ ಸಮರ ಆರಂಭವಾಗುವ ಎಲ್ಲ ಲಕ್ಷಣಗಳೂ ಗೋಚರಿಸಿವೆ. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಆರ್​​ಎಸ್​​ಎಸ್​​ ನೋಂದಣಿ ಬಗ್ಗೆ ಮಾತಾಡುತ್ತಲೇ ಬಂದಿರುವ ಸಚಿವರು, ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರೋದು ರಾಜಕೀಯ…

Read More

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty Gave Flying kiss after She became Bigg boss runner Up

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ – Kannada News | Sri Lanka A vs India A, 4th Match Highlights

ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿತ್ತು. 266 ರನ್​​ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್​ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್​ಗಳು. ಅದರಂತೆ ಕೊನೆಯ ಓವರ್​ನಲ್ಲಿ ಕೇವಲ 5…

Read More

ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಬೆಂಗಳೂರು, ಮಾರ್ಚ್ 10: ವರ್ಗಾವಣೆಯ ಆಸೆಯಿಂದ ಗಿಳಿಶಾಸ್ತ್ರ ಹೇಳುವವನನ್ನು ನಂಬಿದ ಆದಾಯ ತೆರಿಗೆ ಇಲಾಖೆಯ (IT) ಅಧಿಕಾರಿಯೊಬ್ಬರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bangalore) ಬೆಳಕಿಗೆ ಬಂದಿದೆ. ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಪಡೆದು ಪರಾರಿಯಾದ, ಗಿಳಿಶಾಸ್ತ್ರ ಹೇಳುತ್ತಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ವರ್ಷಗಳಿಂದ ಬೆಂಗಳೂರಿನ ಐಟಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು ಕಳೆದ ಡಿಸೆಂಬರ್ ತಿಂಗಳಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ…

Read More

Solar Eclipse 2026: ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Impacts on Kanya Rashi by Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕನ್ಯಾ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬುಧ ರಾಶ್ಯಾಧಿಪತಿಯಾಗಿರುವ ಕನ್ಯಾ ರಾಶಿಯವರಿಗೆ ಈ ಗ್ರಹಣ ಆರನೇ ಮನೆಯಲ್ಲಿ ಸಂಭವಿಸುತ್ತದೆ. ಉತ್ತರಾ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದರ ಪ್ರಭಾವವಿರುತ್ತದೆ. ಗ್ರಹಣದ ಅವಧಿಯಲ್ಲಿ ಕುಟುಂಬದಲ್ಲಿ ಸೌಖ್ಯ ಇರುತ್ತದೆ. ಆಕಸ್ಮಿಕ ಧನಯೋಗ ಮತ್ತು ಕೆಲಸ ಕಾರ್ಯಗಳಲ್ಲಿ ಪರಿಪೂರ್ಣತೆ ಕಂಡುಬರುತ್ತದೆ. ಸಾಲ ತೀರಿಸಿಕೊಳ್ಳುವ ಅವಕಾಶ ಲಭಿಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆಯಾದರೂ, ಶತ್ರುಗಳು ಹೆಚ್ಚಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ…

Read More