ಶಸ್ತ್ರಾಸ್ತ್ರ ಕೊರತೆ ವರದಿಗೆ ಟ್ರಂಪ್ ಕೆಂಡಾಮಂಡಲ: ವಾಷಿಂಗ್ಟನ್ ಪೋಸ್ಟ್ ವರದಿಯನ್ನು ದೇಶದ್ರೋಹ ಎಂದ ಯುಎಸ್ ಅಧ್ಯಕ್ಷ – Kannada News | Trump Blasts Washington Post as ‘Treasonous’ Amidst Iran Nuclear Tensions

ವಾಷಿಂಗ್ಟನ್, ಆಗಸ್ಟ್​ 07: ಇರಾನ್ ಜೊತೆಗಿನ ಮಿಲಿಟರಿ ಸಂಘರ್ಷವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್(Iran) ಹೆಚ್ಚು ಕಾಲ ಈ ಯುದ್ಧವನ್ನು ಮುಂದುವರೆಸಲು ಸಾಧ್ಯವಿಲ್ಲ ಎಂದಿರುವ ಟ್ರಂಪ್, ಯಾವುದೇ ಕಾರಣಕ್ಕೂ ಟೆಹ್ರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಶ್ವೇತಭವನದ ಓವಲ್ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆಯ ಕುರಿತು ಹರಿದಾಡುತ್ತಿರುವ ವರದಿಗಳ ಬಗ್ಗೆ ಸ್ಪಷ್ಟನೆ ನೀಡಿದರು. ಟ್ರಂಪ್ ಪ್ರಕಾರ, ಇರಾನ್‌ನಲ್ಲಿ ಆಂತರಿಕ ಹಾಗೂ ರಾಜಕೀಯ ಬಿಕ್ಕಟ್ಟು ಹೆಚ್ಚುತ್ತಿರುವುದರಿಂದ ಯುದ್ಧ ಶೀಘ್ರವೇ ಕೊನೆಗೊಳ್ಳಲಿದೆ. ಇರಾನ್‌ಗೆ ಪರಮಾಣು ಅಸ್ತ್ರ ಸಿಕ್ಕರೆ ಇಡೀ ಜಗತ್ತೇ ಸ್ಫೋಟಗೊಳ್ಳುತ್ತದೆ ಎಂದು ಅವರು ಎಚ್ಚರಿಸಿದರು.

ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ನೌಕಾಪಡೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಇರಾನ್‌ನಿಂದ ಯಾವುದೇ ಬೆದರಿಕೆ ಬರದಂತೆ ಜಲಮಾರ್ಗವನ್ನು ಸುರಕ್ಷಿತವಾಗಿರಿಸಲಾಗಿದೆ ಎಂದು ಅವರು ತಿಳಿಸಿದರು.

‘ವಾಷಿಂಗ್ಟನ್ ಪೋಸ್ಟ್’ಗೆ ಟ್ರಂಪ್ ಆಕ್ರೋಶ: ಅಮೆರಿಕ ಸೇನೆಯ ಬಳಿ ಯುದ್ಧ ಸಾಮಗ್ರಿಗಳ ಕೊರತೆಯಿದೆ ಮತ್ತು ಟ್ರಂಪ್ ಈ ಬಗ್ಗೆ ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರಿಂದ ವಿವರಣೆ ಕೇಳಿದ್ದಾರೆ ಎಂಬ ‘ದಿ ವಾಷಿಂಗ್ಟನ್ ಪೋಸ್ಟ್’ ವರದಿಯನ್ನು ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ.

ಈ ವರದಿಯು ಸಂಪೂರ್ಣ ಸುಳ್ಳು ಮತ್ತು ನಕಲಿ ಸುದ್ದಿ ಎಂದು ಟ್ರುತ್ ಸೋಶಿಯಲ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, ಇದನ್ನು ದೇಶದ್ರೋಹದ ವರದಿ ಎಂದು ಬಣ್ಣಿಸಿದ್ದಾರೆ. ತಮ್ಮ ಮಿಲಿಟರಿ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರ ಕಾರ್ಯವೈಖರಿಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಕಳೆದ ಫೆಬ್ರವರಿಯಿಂದ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ನಿರಂತರ ವಾಯುದಾಳಿ ಹಾಗೂ ಪ್ರತಿ-ದಾಳಿಗಳಿಂದ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದೆ.

ಮತ್ತಷ್ಟು ಓದಿ: ಇರಾನ್ ಯುದ್ಧದ ನಡುವೆ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ 7 ಸ್ಫೋಟ

ಇರಾನ್ ಮೇಲಿನ ದಿಗ್ಬಂಧನ ಮತ್ತು ಹಾರ್ಮುಜ್ ಜಲಸಂಧಿಯ ಮೇಲಿನ ಸೈನಿಕ ನಿಯಂತ್ರಣದಿಂದ ಜಾಗತಿಕ ತೈಲ ಪೂರೈಕೆಯಲ್ಲಿ ಏರಿಳಿತ ಉಂಟಾಗಿದ್ದು, ಮಾತುಕತೆಯ ಮೂಲಕ ಶಾಂತಿ ಸ್ಥಾಪಿಸಲು ಅಂತಾರಾಷ್ಟ್ರೀಯ ಒತ್ತಡವೂ ಹೆಚ್ಚುತ್ತಿದೆ. ಟ್ರಂಪ್ ಆಡಳಿತದಲ್ಲಿ ಅಮೆರಿಕದ ಯುದ್ಧ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಸೆತ್, ಸೇನೆಯ ಸಾಮರ್ಥ್ಯ ಮತ್ತು ಯುದ್ಧ ತಂತ್ರಗಳನ್ನು ಮರುರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಇರಾನ್ ಸ್ಥಿತಿ: ಇತ್ತೀಚಿನ ವಾಯುದಾಳಿಗಳು ಮತ್ತು ನಾಯಕರ ನಷ್ಟದಿಂದಾಗಿ ಇರಾನ್ ಮಿಲಿಟರಿ ಮತ್ತು ನಾಗರಿಕ ಆಡಳಿತವು ಭಾರಿ ಸಂಕಷ್ಟದಲ್ಲಿದ್ದು, ಮಾತುಕತೆ ಅಥವಾ ಶರಣಾಗತಿಯ ಹಂತಕ್ಕೆ ತಲುಪಿದೆ ಎಂದು ವಾಷಿಂಗ್ಟನ್ ಆಡಳಿತ ವಿಶ್ಲೇಷಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ: 46 ದಿನಗಳಲ್ಲಿ 86.71 ಲಕ್ಷ ರೂ. ನಗದು ಸಂಗ್ರಹ! – Kannada News | Huligemma Temple Hundi Counting: Over Rs 86 Lakh Collected in 46 Days at Koppal

ಕೊಪ್ಪಳ, ಆಗಸ್ಟ್ 07: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 46 ದಿನಗಳಲ್ಲಿ ಬರೋಬ್ಬರಿ 86,71,195 ರೂ. ನಗದು ಹಣ ಸಂಗ್ರಹವಾಗಿದೆ. ಕಳೆದ ಜೂನ್ 20 ರಂದು ಕೊನೆಯ ಬಾರಿಗೆ ಹುಂಡಿ ಎಣಿಕೆ ಮಾಡಲಾಗಿತ್ತು. ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದು, ಈ ಬಾರಿ ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್ – Kannada News | Karnataka Weather Forecast August 7: Heavy Rain Alert for Coastal Karnataka, Shivamogga and Chikkamagaluru

ಕೋಲಾರದಲ್ಲಿ ಗುರುವಾರ ಸಂಜೆ ಸುರಿದ ಮಳೆImage Credit source: tv9

ಬೆಂಗಳೂರು, ಆಗಸ್ಟ್ 7: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕದಲ್ಲಿ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ವಾಯು ಗುಣಮಟ್ಟ; ಮೈಸೂರಿನಲ್ಲೂ ಏಕ್ಯೂಐ ಉತ್ತಮ

ಆಗಸ್ಟ್ 8ರಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:18 am, Fri, 7 August 26

Source link

‘ಟಾಕ್ಸಿಕ್’ ಅಲೆಗೆ ಹೆದರಿದ ನಾನಿ; ‘ಪ್ಯಾರಡೈಸ್’ ರಿಲೀಸ್ ಮುಂದಕ್ಕೆ – Kannada News | Toxic Fear Effect: Nani Actrd The Paradise Postponed to September 24 to Avoid Clash With Yash Starrer

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ವಿಚಾರದಲ್ಲಿ ಈಗ ದೊಡ್ಡ ಬದಲಾವಣೆಯಾಗಿದೆ. ಆರಂಭದಿಂದಲೂ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಈ ಚಿತ್ರದ ರಿಲೀಸ್ ದಿನಾಂಕ ದಿಢೀರ್ ಮುಂದಕ್ಕೆ ಹೋಗಿದ್ದು, ಇದಕ್ಕೆ ಗಾಂಧಿನಗರ ಹಾಗೂ ಟಾಲಿವುಡ್ ಅಂಗಳದಲ್ಲಿ ‘ಟಾಕ್ಸಿಕ್’ ಸಿನಿಮಾದ (Toxic Movie) ಹವಾನೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಆಗಸ್ಟ್‌ನಿಂದ ಸೆಪ್ಟೆಂಬರ್‌ಗೆ ಓಡಿದ ‘ದಿ ಪ್ಯಾರಡೈಸ್’!

ನಾನಿ ಮತ್ತು ‘ದಸರಾ’ ನಿರ್ದೇಶಕ ಶ್ರೀಕಾಂತ್ ಒಡೇಲಾ ಕಾಂಬಿನೇಷನ್‌ನ ‘ದಿ ಪ್ಯಾರಡೈಸ್’ ಚಿತ್ರವನ್ನು ಮೊದಲು ಆಗಸ್ಟ್ 21ರಂದು ಅದ್ದೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಆಗಸ್ಟ್ 26ಕ್ಕೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗುತ್ತಿದೆ.
ಕೇವಲ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ‘ಟಾಕ್ಸಿಕ್’ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಹೀಗಾಗಿ, ‘ಟಾಕ್ಸಿಕ್’ ಸಿನಿಮಾಗೆ ಎದುರು ನಿಲ್ಲಲು ‘ದಿ ಪ್ಯಾರಡೈಸ್’ ಚಿತ್ರ ಭಯ ಬಿದ್ದಂತಿದೆ. ಹೀಗಾಗಿಯೇ ಯಾವುದೇ ರಿಸ್ಕ್ ಬೇಡ ಎಂದು ಭಾವಿಸಿ, ಚಿತ್ರವನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಟೀಸರ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

‘ಟಾಕ್ಸಿಕ್’ ಸಿನಿಮಾದ ಹವಾ

ಈ ಒಂದೇ ಒಂದು ನಿರ್ಧಾರದಿಂದ ‘ಟಾಕ್ಸಿಕ್’ ಸಿನಿಮಾದ ಕ್ರೇಜ್ ಮತ್ತು ಹವಾ ಎಷ್ಟರ ಮಟ್ಟಿಗಿದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ರೆಡಿಯಾಗಿರುವ ‘ಟಾಕ್ಸಿಕ್’ ಸಿನಿಮಾದ ಬಾಕ್ಸ್ ಆಫೀಸ್ ಸುನಾಮಿಗೆ ಎದುರಾದರೆ ತಮ್ಮ ಚಿತ್ರದ ಕಲೆಕ್ಷನ್‌ಗೆ ಪೆಟ್ಟು ಬೀಳಬಹುದು ಎಂಬ ಭೀತಿಯಿಂದ ನಾನಿ ತಂಡ ಈ ಹಿಂದೆ ಹೆಜ್ಜೆ ಇಟ್ಟಿದೆ ಎನ್ನಲಾಗುತ್ತಿದೆ.

ಧೂಳೆಬ್ಬಿಸುತ್ತಿದೆ ‘ದಿ ಪ್ಯಾರಡೈಸ್’ ಟೀಸರ್

ಇನ್ನು ಬಿಡುಗಡೆಯಾಗಿರುವ ಟೀಸರ್ ವಿಷಯಕ್ಕೆ ಬಂದರೆ, ‘ದಿ ಪ್ಯಾರಡೈಸ್’ ಟೀಸರ್ ಗಮನ ಸೆಳೆದಿದೆ. ನಾನಿ ಉದ್ದನೆಯ ಜಡೆ, ರಕ್ತ-ಮಣ್ಣಿನಿಂದ ಕೂಡಿದ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತ ದೃಶ್ಯಗಳ ಕಾವು ಹೆಚ್ಚಿಸಿದೆ.

ಇದನ್ನೂ ಓದಿ: ಗೂಗ್ಲಿಯಲ್ಲಿ ಯಶ್​​ಗೆ ಬರೆದ ಡೈಲಾಗ್ ನಿಜವಾಯ್ತು; ಜಾಗತಿಕ ಮಟ್ಟದಲ್ಲಿ ಟಾಕ್ಸಿಕ್ ಹವಾ

ಟಾಕ್ಸಿಕ್ ಬಗ್ಗೆ

ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಟಾಕ್ಸಿಕ್’ ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದಾರೆ. ಈ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾದಲ್ಲಿ ಯಶ್ ಜೊತೆಗೆ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಖ್ಯಾತ ತಾರೆಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ಶ್ರುತಿ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ಸ್ ಜಂಟಿಯಾಗಿ ಬಂಡವಾಳ ಹೂಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:36 am, Fri, 7 August 26

Source link

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ – Kannada News | Agni 4 Ballistic Missile Test Successful: India’s Defense Bolstered with 4000km Range

ನವದೆಹಲಿ, ಆಗಸ್ಟ್ 07: ಭಾರತವು ತನ್ನ ಅತ್ಯಾಧುನಿಕ ಹಾಗೂ ಪರಮಾಣು ಸಾಮರ್ಥ್ಯ ಹೊಂದಿರುವ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ(Missile) ‘ಅಗ್ನಿ-4’ (Agni-4) ಅನ್ನು ಒಡಿಶಾದ ಚಂಡಿಪುರದಲ್ಲಿರುವ ಸಮಗ್ರ ಪರೀಕ್ಷಾ ಶ್ರೇಣಿಯಿಂದ (ITR) ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಾಗೂ ಕಾರ್ಯತಂತ್ರದ ಪಡೆಗಳ ಕಮಾಂಡ್ (SFC) ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕ್ಷಿಪಣಿಯ ಎಲ್ಲಾ ತಾಂತ್ರಿಕ ಹಾಗೂ ಕಾರ್ಯಾಚರಣೆಯ ನಿಯತಾಂಕಗಳನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ.

ಅಗ್ನಿ-4 ಕ್ಷಿಪಣಿಯ ಪ್ರಮುಖ ವೈಶಿಷ್ಟ್ಯಗಳು
ದಾಳಿಯ ವ್ಯಾಪ್ತಿ: ಇದು ಮೇಲ್ಮೈಯಿಂದ ಮೇಲ್ಮೈಗೆ (Surface-to-Surface) ಹಾರುವ ಎರಡು ಹಂತದ ಘನ-ಇಂಧನ ರಾಕೆಟ್ ಮೋಟಾರ್ ಚಾಲಿತ ಕ್ಷಿಪಣಿಯಾಗಿದ್ದು, 4 ಸಾವಿರ ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಶತ್ರುಗಳ ಗುರಿಗಳನ್ನು ನಿಖರವಾಗಿ ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದೆ. ಅಗ್ನಿ ಸರಣಿಯ ಕ್ಷಿಪಣಿಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಏವಿಯಾನಿಕ್ಸ್ ಹಾಗೂ ನ್ಯಾವಿಗೇಷನ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಕ್ಷಿಪಣಿಯ ನಿಖರತೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

ರಕ್ಷಣಾ ಸಚಿವರ ಶ್ಲಾಘನೆ: ಈ ಅದ್ಭುತ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್‌ಡಿಒ ಹಾಗೂ ಎಸ್‌ಎಫ್‌ಸಿ ವಿಜ್ಞಾನಿಗಳು ಮತ್ತು ಯೋಧರನ್ನು ಅಭಿನಂದಿಸಿದ್ದು, ಇದು ಭಾರತದ ರಕ್ಷಣಾ ಸಿದ್ಧತೆ ಮತ್ತು ರಾಷ್ಟ್ರೀಯ ಭದ್ರತೆಗೆ ನೀಡಿದ ಬೃಹತ್ ಕೊಡುಗೆ ಎಂದು ಬಣ್ಣಿಸಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಖೋರ್ರಮ್‌ಶಹರ್-4 ಕ್ಷಿಪಣಿ ಉಡಾಯಿಸಿದ ಇರಾನ್

ಇತ್ತೀಚಿನ ಸರಣಿ ಕ್ಷಿಪಣಿ ಪರೀಕ್ಷೆಗಳು
ಪಿನಾಕಾ ದೀರ್ಘ-ಶ್ರೇಣಿಯ ಮಾರ್ಗದರ್ಶಿ ರಾಕೆಟ್ : ಜುಲೈ 8, 2026 ರಂದು ಡಿಆರ್‌ಡಿಒ ಕನಿಷ್ಠ 60 ಕಿ.ಮೀ ವ್ಯಾಪ್ತಿಯ ಪಿನಾಕಾ ಮಾರ್ಗದರ್ಶಿ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು.

ಪೋಸ್ಟ್​

ದೇಶೀಯ ದೀರ್ಘ-ಶ್ರೇಣಿಯ ಭೂ ದಾಳಿ ಕ್ರೂಸ್ ಕ್ಷಿಪಣಿ : ಜೂನ್ 2026 ರಲ್ಲಿ ಒಡಿಶಾ ಕರಾವಳಿಯಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ LRLACM ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪ್ರಯೋಗಿಸಲಾಗಿತ್ತು. ಈ ಯೋಜನೆಯನ್ನು ಬೆಂಗಳೂರಿನ ‘ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್’ ಸಂಸ್ಥೆ ಮುನ್ನಡೆಸುತ್ತಿರುವುದು ವಿಶೇಷ.

ಭಾರತ ಈಗಾಗಲೇ 700 ಕಿ.ಮೀ ನಿಂದ 3,500 ಕಿ.ಮೀ ವ್ಯಾಪ್ತಿಯ ಅಗ್ನಿ-1 ರಿಂದ ಅಗ್ನಿ-3 ಮತ್ತು ಅಗ್ನಿ-5ಕ್ಷಿಪಣಿಗಳನ್ನು ಸೇನೆಗೆ ಸೇರ್ಪಡೆಗೊಳಿಸಿದೆ.ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿರುವ ಡಿಆರ್‌ಡಿಒ ಪ್ರಯೋಗಾಲಯಗಳು ಮತ್ತು ಭಾರತೀಯ ಉದ್ಯಮ ಪಾಲುದಾರರ ಜಂಟಿ ಸಹಯೋಗದೊಂದಿಗೆ ಈ ಉನ್ನತ ತಂತ್ರಜ್ಞಾನದ ಕ್ಷಿಪಣಿಗಳನ್ನು ಭಾರತದಲ್ಲೇ ವಿನ್ಯಾಸಗೊಳಿಸಿ ತಯಾರಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! – Kannada News | Karnataka Government to Table AI University Bill in Winter Session, CM D K Shivakumar

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು!

ಬೆಂಗಳೂರು, ಆಗಸ್ಟ್ 07: ತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ನೇತೃತ್ವದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುನ್ನಡೆದಿದೆ. ಮುಂಬರುವ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಇದಕ್ಕಾಗಿ ವಿಶೇಷ ‘ಎಐ ವಿಶ್ವವಿದ್ಯಾಲಯ ವಿಧೇಯಕ’ವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ.

ಎಐ ವಿವಿ ಸ್ಥಾಪನೆಯ ಪ್ರಮುಖ ಉದ್ದೇಶ

ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಕೃತಕ ಬುದ್ಧಿಮತ್ತೆ (AI) ಸಂಶೋಧನೆಗೆ ವೇಗ ನೀಡಲು ಈ ವಿವಿ ಸಹಕಾರಿಯಾಗಲಿದೆ. ಈ ಮಹತ್ವದ ಯೋಜನೆಯು ಶಿಕ್ಷಣ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಸರ್ಕಾರದ ನಡುವಿನ ಜಂಟಿ ಸಹಭಾಗಿತ್ವವನ್ನು ಗಟ್ಟಿಗೊಳಿಸಲಿದೆ. ಕೇವಲ ಪದವಿ ನೀಡುವುದಷ್ಟೇ ಅಲ್ಲದೆ, ಭವಿಷ್ಯದ ತಂತ್ರಜ್ಞಾನಕ್ಕೆ ತಕ್ಕಂತೆ ನುರಿತ ವೃತ್ತಿಪರರನ್ನು ಸಿದ್ಧಪಡಿಸುವುದು ಇದರ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ?: ಮಂತ್ರಿಗಳಿಗೆ ಖಡಕ್​​ ಸೂಚನೆ ಕೊಟ್ಟಿದ್ದೇಕೆ ಹೈಕಮಾಂಡ್​​?

ಎಐ-ನೇಟಿವ್ ರಾಜ್ಯವಾಗುವತ್ತ ಕರ್ನಾಟಕದ ಹೆಜ್ಜೆ

ಕರ್ನಾಟಕವನ್ನು ಸಂಪೂರ್ಣ ‘ಎಐ-ನೇಟಿವ್’ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆಡಳಿತ ಮತ್ತು ಸಾರ್ವಜನಿಕ ಸೇವೆಗಳಾದ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ನಗರಾಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಬಲಿಷ್ಠ ಸ್ಟಾರ್ಟ್‌ಅಪ್ ಇಕೋಸಿಸ್ಟಮ್ ಇರುವುದರಿಂದ ಈ ಹೊಸ ವಿವಿ ಜಾಗತಿಕ ಹೂಡಿಕೆಯನ್ನು ಮತ್ತಷ್ಟು ಆಕರ್ಷಿಸಲಿದೆ. ಇದರೊಂದಿಗೆ ರಾಜ್ಯದಲ್ಲಿ ಸುಧಾರಿತ ತಂತ್ರಜ್ಞಾನ ಸಂಶೋಧನೆಗಾಗಿ ‘ಎಐ ಹಬ್’ ಒಂದನ್ನು ಸಹ ಸ್ಥಾಪಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು – Kannada News | UP Monsoon Tragedy: Wall Collapses Kill 9, Including Children, Amid Heavy Rains

ಲಕ್ನೋ, ಆಗಸ್ಟ್ 06: ಉತ್ತರ ಪ್ರದೇಶದಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Rain)ಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪ್ರತಾಪ್‌ಗಢ, ಬಾರಾಬಂಕಿ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಈ ಕರುಣಾಜನಕ ದುರಂತಗಳು ಸಂಭವಿಸಿವೆ. ಪ್ರತಾಪ್‌ಗಢ ಜಿಲ್ಲಾ ಕೇಂದ್ರದ ಬಳಿಯ ಮಹುಲಿ ಬಜಾರ್‌ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಶತಮಾನದಷ್ಟು ಹಳೆಯದಾದ ಜರ್ಜರಿತ ಮನೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಪ್ರಮೋದ್ ಶ್ರೀವಾಸ್ತವ (60), ಅವರ ಪತ್ನಿ ರೀಟಾ (55), ಮಗ ನಿತಿನ್ (25), ಸೊಸೆ ಮಾಧುರಿ (24) ಹಾಗೂ ಇಬ್ಬರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ. ಮನೆಯ ಹಿರಿಯ ಮಗ ಅಮನ್ (28) ಅವಶೇಷಗಳ ಅಡಿಯಿಂದ ತೆವಳುತ್ತ ಹೊರಬಂದು ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭವಾಯಿತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ 6 ಮಂದಿ ಮೃತಪಟ್ಟಿದ್ದರು.

ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದ ಇಟ್ಟಿಗೆ ಗೋಡೆ: ಬಾರಾಬಂಕಿ ಜಿಲ್ಲೆಯ ಅಲಿಯಾಬಾದ್‌ನಲ್ಲಿ ರಸ್ತೆಬದಿ ಆಟವಾಡುತ್ತಿದ್ದ ಐದು ಮಕ್ಕಳ ಮೇಲೆ ಹಳೆಯ ಇಟ್ಟಿಗೆ ಗೋಡೆಯೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ 7 ವರ್ಷದ ಬಾಲಕ ಹಾಗೂ ಆತನ ೧೪ ವರ್ಷದ ಸಹೋದರಿ ಇಬ್ಬರೂ ಮೃತಪಟ್ಟಿದ್ದು, ಇತರ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ

ಸಹರಾನ್‌ಪುರದ ಘಾಘ್ರೇಕಿ ಗ್ರಾಮದಲ್ಲಿ ಭಾರಿ ಮಳೆಗೆ ಮಣ್ಣಿನ ಮನೆ ಕುಸಿದುಬಿದ್ದು, 34 ವರ್ಷದ ಮಹಿಳೆಯೊಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿ ಅಸಹಾಯಕರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ಪರಿಶೀಲಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಕಂದಾಯ ಇಲಾಖೆಯ ವತಿಯಿಂದ ತಕ್ಷಣವೇ ತುರ್ತು ಪರಿಹಾರ ಧನ ಬಿಡುಗಡೆ ಮಾಡಲು ಸೂಚನೆ ನೀಡಿದೆ.

ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಳೆಯ ಹಾಗೂ ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸ್ಥಳೀಯ ನಗರಸಭೆ ಮತ್ತು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಪ್ಯಾರಡೈಸ್’ನಲ್ಲಿ ನಾನಿ ಮಾಸ್ ಅವತಾರ; ರಕ್ತಸಿಕ್ತ ಟೀಸರ್ ರಿಲೀಸ್ – Kannada News | The Paradise Teaser: Nani and Srikanth Odela Reunite for a Gritty Mass Uprising Spectacle

‘ದಸರಾ’ ಸಿನಿಮಾ ಮೂಲಕ ತೆರೆಮೇಲೆ ಹೊಸ ಅಲೆ ಸೃಷ್ಟಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ (Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ ಜೋಡಿ ಇದೀಗ ಮತ್ತೊಮ್ಮೆ ಒಂದಾಗಿದ್ದು, ಅವರ ಬಹುನಿರೀಕ್ಷಿತ ‘ದಿ ಪ್ಯಾರಡೈಸ್’ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನೋಡಿದರೆ ಇದು ಬರಿ ಮಾಸ್ ಆ್ಯಕ್ಷನ್ ಸಿನಿಮಾವಷ್ಟೇ ಅಲ್ಲ, ಬದಲಾಗಿ ಬಂಡಾಯ ಹಾಗೂ ಅಸ್ತಿತ್ವಕ್ಕಾಗಿ ನಡೆಯುವ ಹೋರಾಟದ ಕಥೆಯೆಂದು ಸ್ಪಷ್ಟವಾಗುತ್ತದೆ.

ಬಂಡಾಯ ಮತ್ತು ಹೋರಾಟದ ರೋಚಕ ಕಥಾನಕ

ಶೋಷಣೆ ಮತ್ತು ಭೂಮಿಗಾಗಿ ನಡೆಯುವ ಹೋರಾಟದ ಹಿನ್ನೆಲೆಯಲ್ಲಿ ಟೀಸರ್ ತೆರೆದುಕೊಳ್ಳುತ್ತದೆ. ಅನ್ಯಾಯದ ವಿರುದ್ಧ ಸಿಡಿದೆದ್ದು, ಸಾಧಾರಣ ವ್ಯಕ್ತಿಯೊಬ್ಬ ಸಾವಿರಾರು ಜನರಿಗೆ ಆಶಾಕಿರಣವಾಗಿ ಬೆಳೆಯುವ ಕಥಾಹಂದರ ಇಲ್ಲಿದೆ. ಟೀಸರ್‌ನಲ್ಲಿ ಕಾಣಿಸುವ ಕಾಗೆಯ ಸಂಕೇತವು ಸಮಾಜದಿಂದ ತುಳಿಯಲ್ಪಟ್ಟ ಮತ್ತು ಕಡೆಗಣಿಸಲ್ಪಟ್ಟ ಜನರ ಪ್ರತಿರೂಪವಾಗಿ ಮೂಡಿಬಂದಿದೆ. ಈ ಕಾಗೆ ಕಥೆಗೆ ಆಳವಾದ ಅರ್ಥ ನೀಡುತ್ತದೆ.

ನಾನಿ ಅವರ ‘ಅರಾಚಕಂ’ ಮಾಸ್ ಲುಕ್

ಚಿತ್ರದಲ್ಲಿ ನಾನಿ ಸಂಪೂರ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಉದ್ದನೆಯ ಜಡೆ ಹೆಣೆದ ಕೂದಲು, ದಟ್ಟವಾದ ಗಡ್ಡ, ರಕ್ತ ಮತ್ತು ಮಣ್ಣಿನಿಂದ ಕೂಡಿದ ಮಾಸ್ ಲುಕ್‌ನಲ್ಲಿ ಅವರ ಆಕ್ರೋಶದ ಅಭಿನಯ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತದೆ. ಸಾಹಸ ದೃಶ್ಯಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ದ್ವಿಗುಣಗೊಳಿಸಿವೆ.

ತಾಂತ್ರಿಕವಾಗಿ ಶ್ರೀಮಂತವಾದ ಸಿನಿಮಾ

ಶ್ರೀಕಾಂತ್ ಒಡೇಲ ಅವರ ಮೇಕಿಂಗ್ ಶೈಲಿ ಗಮನ ಸೆಳೆಯುತ್ತದೆ. ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತ ದೃಶ್ಯಗಳಿಗೆ ಜೀವ ತುಂಬಿದೆ. ಜಿಕೆ ವಿಷ್ಣು ಅವರ ಕ್ಯಾಮೆರಾ ಕೈಚಳಕ ಗಮನ ಸೆಳೆದಿದೆ. ಸಿನಿಮಾದಲ್ಲಿ ಮೋಹನ್ ಬಾಬು, ಕಯಾದು ಲೋಹಾರ್ ಹಾಗೂ ರಾಘವ್ ಜುಯಲ್ ಅವರ ಪ್ರಮುಖ ಪಾತ್ರಗಳು ಕಥೆಗೆ ಹೆಚ್ಚಿನ ಬಲ ನೀಡಲಿವೆ.

ಇದನ್ನೂ ಓದಿ: ರಾಮ್ ಚರಣ್ ಮತ್ತು ನಾನಿ ಸಿನಿಮಾಗಳಿಗೆ ಲೀಕ್ ಸಂಕಷ್ಟ: ಆತಂಕದಲ್ಲಿ ‘ಪೆದ್ದಿ’, ‘ದಿ ಪ್ಯಾರಡೈಸ್’

ಸೆಪ್ಟೆಂಬರ್ 24ಕ್ಕೆ ಅದ್ದೂರಿ ಬಿಡುಗಡೆ

ಎಸ್.ಎಲ್‌.ವಿ ಸಿನಿಮಾಸ್ ಬ್ಯಾನರ್‌ನಡಿಯಲ್ಲಿ ಸುಧಾಕರ್ ಚೆರುಕೂರಿ ನಿರ್ಮಿಸುತ್ತಿರುವ ಈ ಸಿನಿಮಾ ನಿರ್ಮಾಣದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ದಿ ಪ್ಯಾರಡೈಸ್’ ಸಿನಿಮಾ ಮುಂಬರುವ ಸೆಪ್ಟೆಂಬರ್ 24 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಮೊದಲು ಸಿನಿಮಾ ಆಗಸ್ಟ್ 21ಕ್ಕೆ ಬರಲಿದೆ ಎನ್ನಲಾಗಿತ್ತು. ಆದರೆ, ಆಗಸ್ಟ್ 26ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗುತ್ತಿರುವುದರಿಂದ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ಬಿ-ಖಾತೆಯಿಂದ ಎ-ಖಾತೆ ಮಾಡಿಸಲು ಲಂಚ ಕೇಳಿದ ಆರೋಪ; ಜಿಬಿಎ ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ – Kannada News | Bengaluru B Khata to A Khata Conversion: GBA Official Accused of Demanding Rs 40,000 Bribe

ಬೆಂಗಳೂರು, ಆಗಸ್ಟ್ 7: ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಿಸಲು ಬಂದ ಅರ್ಜಿದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಆರ್.ಆರ್.ನಗರ ವಲಯ ಕಚೇರಿಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಪಶ್ಚಿಮ ನಗರ ಪಾಲಿಕೆಯ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೇ ತಿಂಗಳಲ್ಲೇ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರೂ ಇನ್ನೂ ಖಾತೆ ಬದಲಾಗಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಈ ಹಿನ್ನೆಲೆಯಲ್ಲಿ ಕಚೇರಿಗೆ ಆಗಮಿಸಿ ಶೀಘ್ರವೇ ಖಾತೆ ಪರಿವರ್ತನೆ ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ವೇಳೆ ಅರ್ಜಿದಾರರನ್ನು ಒಬ್ಬೊಬ್ಬರನ್ನೇ ಕರೆಸಿ ತಲಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ‘‘ಜಂಟಿ ಆಯುಕ್ತೆ ಮೇಡಂಗೆ ಕೊಡಬೇಕು. ಹೀಗಾಗಿ ಪ್ರತಿಯೊಬ್ಬರು 40 ಸಾವಿರ ರೂ. ನೀಡಬೇಕು’’ ಎಂದು ಅಧಿಕಾರಿಗಳು ಹೇಳಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಕಚೇರಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗೆ ಸಂಬಂಧಿಸಿದಂತೆ ಲಂಚ ಕೇಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಕೆಲಕಾಲ ಗಲಾಟೆಯ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರನಲ್ಲಿ ಸುಧಾರಿಸಿದ ವಾಯು ಗುಣಮಟ್ಟ; ಮೈಸೂರಿನಲ್ಲೂ ಏಕ್ಯೂಐ ಉತ್ತಮ – Kannada News | Bengaluru AQI Today: Karnataka Cities Air Quality Report on August 7

ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ
Image Credit source: Deccan herald

ಬೆಂಗಳೂರು, ಆಗಸ್ಟ್ 07: ಇಂದು ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಗಾಳಿಯ ಬದಲಾವಣೆಯಿಂದಾಗಿ ಮಾಲಿನ್ಯದ ಮಟ್ಟವು ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತಾಗಿದೆ. ಬೆಂಗಳೂರಿನಲ್ಲಿ ಇಂದು ಸರಾಸರಿ AQI 55 ರಿಂದ 70ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ.

ಬೆಂಗಳೂರಿನಲ್ಲಿ ಇಂದಿನ ಗಾಳಿಯ ಗುಣಮಟ್ಟ

  • ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್: 55 – 63
  • ಬಿಟಿಎಂ ಲೇಔಟ್ ಮತ್ತು ಜಯನಗರ: 58 – 65
  • ವೈಟ್‌ಫೀಲ್ಡ್ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ: 68 – 74

ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವು ಬಹುತೇಕ ಜನರಿಗೆ ಸುರಕ್ಷಿತವಾಗಿದೆ. ಆದರೆ ತೀವ್ರ ಉಸಿರಾಟದ ತೊಂದರೆ ಅಥವಾ ಅಸ್ತಮಾ ಇರುವವರು ಹೊರಾಂಗಣದಲ್ಲಿ ದೀರ್ಘಕಾಲ ಕಳೆಯುವಾಗ ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರ್ನಾಟಕದ ಇತರೆ ನಗರಗಳ AQI ವರದಿ

ರಾಜ್ಯದ ಇತರೆ ಪ್ರಮುಖ ನಗರಗಳಲ್ಲೂ ಇಂದು ಗಾಳಿಯ ಗುಣಮಟ್ಟ ತೃಪ್ತಿಕರ ಹಾಗೂ ಸಾಧಾರಣ ಮಟ್ಟದಲ್ಲಿದೆ. ಒಣ ಹವೆ ಇರುವ ಕೆಲವು ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿ ಕಂಡುಬಂದಿದೆ.

  • ಮೈಸೂರು: 45 (Good)
  • ಮಂಗಳೂರು: 48 (Good)
  • ಹುಬ್ಬಳ್ಳಿ-ಧಾರವಾಡ: 58 (Moderate)
  • ಬೆಳಗಾವಿ: 73 (Moderate)
  • ಕಲಬುರಗಿ ಮತ್ತು ಬಳ್ಳಾರಿ: 71 – 75 (Moderate)

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಗಾಳಿಯು ಅತ್ಯಂತ ಸ್ವಚ್ಛವಾಗಿದೆ. ಉತ್ತರ ಕರ್ನಾಟಕದ ಕೆಲವು ಕೈಗಾರಿಕಾ ಪ್ರದೇಶಗಳಲ್ಲಿ ಮಾತ್ರ ಧೂಳಿನ ಕಣಗಳ ಪ್ರಮಾಣ ಹೆಚ್ಚಾಗಿರುವುದರಿಂದ AQI ಸಾಧಾರಣ ಮಟ್ಟ ದಾಟಿದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ಇಂತಹ ವರದಿಗಳನ್ನು ಗಮನಿಸಿ ತಮ್ಮ ದಿನದ ಹೊರಾಂಗಣ ಚಟುವಟಿಕೆಗಳನ್ನು ಯೋಜಿಸುವುದು ಸೂಕ್ತ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version