ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised
ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…