ಹುಬ್ಬಳ್ಳಿಯ ಮಾಲ್ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್ – Kannada News | Hubballi Sukhasagara Mall Fire: Short Circuit Causes Lakhs in Damage
ಹುಬ್ಬಳ್ಳಿ, ಜನವರಿ 23: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್ನಲ್ಲಿ (Mall) ಹೊತ್ತಿಕೊಂಡ ಬೆಂಕಿ (Fire) ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ನಡೆದದ್ದೇನು? ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ…