ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ! – Kannada News | Bengaluru Ranks 2nd Among World’s Most Traffic Congested Cities: TomTom Traffic Index 2025
ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ…