ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…