ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ – Kannada News | Belagavi, Bagalkote, Mangaluru Hit by Severe Storms: Uprooted Trees, Power Cuts and Traffic Disruption
ಬೆಳಗಾವಿ, ಮೇ 13: ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಸಂಚಾರಕ್ಕೆ ತೀವ್ರ ಅಡ್ದಿಯಾಗಿದೆ. ರಸ್ತೆಗಳ ಮೇಲೆ ಬಿದ್ದ ಮರಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ…