ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ: ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು! – Kannada News | 2 Students Drown in Cauvery at Talakad, 10 Lives Lost in 3 Days to River Tragedy
ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿImage Credit source: Tv9 Kannada ಮೈಸೂರು, ಏಪ್ರಿಲ್ 21: ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಸುಚಿತ್ರಾ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಶಾಲೆಯಿಂದ ಪ್ರವಾಸಕ್ಕೆಂದು 72 ವಿದ್ಯಾರ್ಥಿಗಳು ತಲಕಾಡಿಗೆ ಆಗಮಿಸಿದ್ದರು ಎನ್ನಲಾಗಿದೆ. 3 ದಿನಗಳಲ್ಲಿ…