ಪ್ರಧಾನಿ ಮೋದಿ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ – Kannada News | PM Modi is a terrorist; Mallikarjun Kharge sparks New Controversy BJP Demands Apology
ಚೆನ್ನೈ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕ್ಷಣಗಣನೆ ಶುರುವಾಗಿದೆ. ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಏಪ್ರಿಲ್ 23ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು. ಈ ವೇಳೆ ಅವರು “ಪ್ರಧಾನಿ ನರೇಂದ್ರ ಮೋದಿ (PM Narendra Modi) ಓರ್ವ ಭಯೋತ್ಪಾದಕ” ಎಂದು ಹೇಳಿಕೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ…