CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್ನಿಂದ ಔಟ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್ನ ಉಳಿದ…