IPL 2026: ಮುಂಬೈ, ಸಿಎಸ್​ಕೆ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಆಗಮನ

Source link

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ? – Kannada News | Coach Backs Vaibhav to Replace ‘Inconsistent’ Abhishek Sharma

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್​ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟಕ್ಕೆ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಥಾನಕ್ಕೆ ಕುತ್ತು ಬಂದಿದೆಯೇ? ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಸಜ್ಜಾಗಿರುವ ಈ ‘ವಂಡರ್ ಕಿಡ್’ ಎಂಟ್ರಿಯಿಂದ ಅಭಿಷೇಕ್ ಶರ್ಮಾ ಹೊರಬೀಳುತ್ತಾರಾ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ಇತ್ತೀಚೆಗೆ ವೈಭವ್ ಸೂರ್ಯವಂಶಿ ಅವರ ಬಾಲ್ಯದ ಕೋಚ್ ಮನೀಶ್ ಓಜಾ ನೀಡಿದ ಹೇಳಿಕೆಗಳು.

ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ಈ ಯುವ ಆಟಗಾರ, ಶೀಘ್ರದಲ್ಲೇ ಟೀಮ್ ಇಂಡಿಯಾದಲ್ಲಿ ಸ್ಫೋಟಕ ಓಪನರ್ ಆಗಿ ಸ್ಥಾನ ಪಡೆಯಲಿದ್ದಾರೆ. ಅದು ಸಹ ಅಭಿಷೇಕ್ ಶರ್ಮಾ ಅವರನ್ನು ಸ್ಥಾನವನ್ನು ಆಕ್ರಮಿಸಿಕೊಳ್ಳುವ ಮೂಲಕ..!

ಈ ಬಗ್ಗೆ ಮಾತನಾಡಿದ ವೈಭವ್ ಅವರ ಬಾಲ್ಯದ ಕೋಚ್ ಮನೀಶ್ ಓಜಾ, ದೊಡ್ಡ ಆಟಗಾರರು ತಮ್ಮ ಸ್ಥಾನವನ್ನು ತಾವೇ ಸೃಷ್ಟಿಸಿಕೊಳ್ಳುತ್ತಾರೆ. ಅತ್ತ ಅಭಿಷೇಕ್ ಶರ್ಮಾ ‘ಅಸ್ಥಿರ ಪ್ರದರ್ಶನ’ ನೀಡುತ್ತಿದ್ದಾರೆ. ಹೀಗಾಗಿ ಮುಂಬರುವ ಐರ್ಲೆಂಡ್ ಮತ್ತು ಝಿಂಬಾಬ್ವೆ ಸರಣಿಗಳಲ್ಲಿ ವೈಭವ್ ಅವರನ್ನು ಸಂಜು ಸ್ಯಾಮ್ಸನ್ ಅಥವಾ ಇಶಾನ್ ಕಿಶನ್ ಜೊತೆ ಆರಂಭಿಕರಾಗಿ ಕಣಕ್ಕಿಳಿಸಬೇಕು ಎಂಬುದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಭಿಷೇಕ್ ಶರ್ಮಾಗೆ ಸಂಕಷ್ಟ?

ಸನ್ ರೈಸರ್ಸ್ ಹೈದರಾಬಾದ್ ಪರ ಅದ್ಭುತ ದಾಖಲೆಗಳನ್ನು ಬರೆಯುತ್ತಿರುವ ಅಭಿಷೇಕ್ ಶರ್ಮಾ, ಇತ್ತೀಚೆಗಷ್ಟೇ ಅತಿ ವೇಗವಾಗಿ 2,000 ಐಪಿಎಲ್ ರನ್ ಪೂರೈಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ, ವೈಭವ್ ಸೂರ್ಯವಂಶಿ ಅವರ ಅದ್ಭುತ ಫಾರ್ಮ್ ಮತ್ತು ಅವರ ವಯಸ್ಸು (ಕೇವಲ 15 ವರ್ಷ) ಆಯ್ಕೆಗಾರರ ಗಮನ ಸೆಳೆದಿದೆ.

ಒಂದು ವೇಳೆ ಜೂನ್‌ನಲ್ಲಿ ನಡೆಯಲಿರುವ ಐರ್ಲೆಂಡ್ ಸರಣಿಗೆ ವೈಭವ್ ಆಯ್ಕೆಯಾದರೆ, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಭಾರತದ ಅತ್ಯಂತ ಕಿರಿಯ ಪದಾರ್ಪಣೆ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಅತ್ತ ಅಭಿಷೇಕ್ ಶರ್ಮಾ ಉತ್ತಮವಾಗಿ ಬ್ಯಾಟ್ ಬೀಸಿದರೂ ಸ್ಥಿರ ಪ್ರದರ್ಶನ ನೀಡುತ್ತಿಲ್ಲ ಎಂಬುದೇ ಸತ್ಯ. ಇದೇ ವೇಳೆ ವೈಭವ್ ಸೂರ್ಯವಂಶಿ ಸ್ಥಿರ ಪ್ರದರ್ಶನದೊಂದಿಗೆ ಅಬ್ಬರಿಸುತ್ತಿದ್ದಾರೆ. ಹೀಗಾಗಿ ಅಭಿಷೇಕ್ ಶರ್ಮಾ ಸ್ಥಾನಕ್ಕೆ ವೈಭವ್ ಸೂರ್ಯವಂಶಿ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಕೋಚ್ ಉವಾಚ:

ವೈಭವ್ ಸೂರ್ಯವಂಶಿ ಅವರ ಬಾಲ್ಯದ ತರಬೇತುದಾರ ಮನೀಶ್ ಓಜಾ ಅವರು ಅಭಿಷೇಕ್ ಶರ್ಮಾ ಅವರ ಸ್ಥಾನದ ಬಗ್ಗೆ ಮಾತ್ರವಲ್ಲದೆ, ವೈಭವ್ ಅವರ ಕ್ರಿಕೆಟ್ ಭವಿಷ್ಯ ಮತ್ತು ಅವರಲ್ಲಿರುವ ವಿಶೇಷ ಗುಣಗಳ ಬಗ್ಗೆ ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ:

ಅಭಿಷೇಕ್ ಶರ್ಮಾ ಅವರ ಇತ್ತೀಚಿನ ಪ್ರದರ್ಶನಗಳಲ್ಲಿ ಸ್ಥಿರತೆ ಇಲ್ಲ. ಟೀಮ್ ಇಂಡಿಯಾ ಆರಂಭಿಕರಿಗಾಗಿ ಹುಡುಕಾಟ ನಡೆಸುತ್ತಿರುವಾಗ, ವೈಭವ್ ಅವರಂತಹ ಆಕ್ರಮಣಕಾರಿ ಆಟಗಾರನಿಗೆ ಇದು ಒಂದು ಸುವರ್ಣ ಅವಕಾಶ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ  ವೈಭವ್ ಒಬ್ಬ ‘ಗಾಡ್ ಗಿಫ್ಟೆಡ್’ ಆಟಗಾರ. ಅವರು ಎಷ್ಟೇ ಕ್ಲಿಷ್ಟಕರವಾದ ತಾಂತ್ರಿಕ ವಿಷಯವನ್ನಾದರೂ ಒಮ್ಮೆ ಹೇಳಿದರೆ ಸಾಕು, ತಕ್ಷಣವೇ ಅದನ್ನು ಕಲಿಯುವ ಅದ್ಭುತ ಸಾಮರ್ಥ್ಯ ಹೊಂದಿದ್ದಾರೆ. ಈಗ ಅವರು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಿದ್ಧರಾಗಿದ್ದಾರೆ.

ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಅಥವಾ ಎಂ.ಎಸ್. ಧೋನಿಯಂತೆ ವೈಭವ್ ಕೂಡ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ದೊಡ್ಡ ಹೆಸರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಕೋಚ್ ಮನೀಶ್ ಓಜಾ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್!

ಮುಂಬರುವ ಝಿಂಬಾಬ್ವೆ ಅಥವಾ ಐರ್ಲೆಂಡ್ ಪ್ರವಾಸಗಳಂತಹ ಸರಣಿಗಳಲ್ಲಿ ಬೌನ್ಸಿ ಪಿಚ್‌ಗಳು ವೈಭವ್ ಅವರಿಗೆ ಹೆಚ್ಚು ಅನುಕೂಲಕರವಾಗಲಿವೆ. ಏಕೆಂದರೆ ಅವರು ಹಾರಿಜಾಂಟಲ್-ಬ್ಯಾಟ್ ಶಾಟ್‌ಗಳನ್ನು (ಪುಲ್ ಮತ್ತು ಕಟ್ ಶಾಟ್) ಬಹಳ ಸಮರ್ಥವಾಗಿ ಆಡುತ್ತಾರೆ ಎಂದು ಓಜಾ ವಿವರಿಸಿದ್ದಾರೆ. ಹೀಗಾಗಿ ವೈಭವ್ ಸೂರ್ಯವಂಶಿ ಅವರನ್ನು ಈ ಸರಣಿಗಳಿಗೆ ಆಯ್ಕೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

Source link

Guru Pushya Yoga 2026: ಗುರು ಪುಷ್ಯ ಯೋಗ; ಈ ಮೂರು ರಾಶಿಗೆ ಒಲಿದು ಬರಲಿದೆ ಅನಿರೀಕ್ಷಿತ ಅದೃಷ್ಟ! – Kannada News | Guru Pushya Yoga 2026: Top 3 Lucky Zodiac Signs to Expect Wealth, Career and Happiness

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗತಿಗಳ ಬದಲಾವಣೆಯು ಮಾನವನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಅದರಲ್ಲಿಯೂ ಗುರುವಾರ ಮತ್ತು ಪುಷ್ಯ ನಕ್ಷತ್ರದ ಸಮ್ಮಿಲನದಿಂದ ಉಂಟಾಗುವ ‘ಗುರು ಪುಷ್ಯ ಯೋಗ’ ಅತ್ಯಂತ ಶ್ರೇಷ್ಠವಾದುದು. ಈ ಯೋಗವು ರೂಪುಗೊಂಡಾಗ ಕೆಲವು ರಾಶಿಗಳ ಜೀವನದಲ್ಲಿ ಆರ್ಥಿಕ ಚೇತರಿಕೆ, ವೃತ್ತಿಜೀವನದಲ್ಲಿ ಪ್ರಗತಿ ಮತ್ತು ಕೌಟುಂಬಿಕ ಸುಖ ಲಭಿಸಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಧನು ರಾಶಿ:

ಧನು ರಾಶಿಯವರಿಗೆ ಗುರು ಪುಷ್ಯ ಯೋಗವು ವರದಾನವಾಗಲಿದೆ. ಈ ರಾಶಿಯ ಅಧಿಪತಿ ಗುರು ಆಗಿರುವುದರಿಂದ, ಈ ಯೋಗದ ಸಮಯದಲ್ಲಿ ಇವರ ಆದಾಯದಲ್ಲಿ ಭಾರಿ ಏರಿಕೆ ಕಂಡುಬರಲಿದೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ಕೆಲಸಗಳು ಪುನಃ ಆರಂಭವಾಗಲಿವೆ. ಅನಿರೀಕ್ಷಿತವಾಗಿ ಹಳೆಯ ಹೂಡಿಕೆಗಳಿಂದ ಲಾಭ ಸಿಗುವ ಸಾಧ್ಯತೆ ಇದ್ದು, ಆರ್ಥಿಕ ಸ್ಥಿತಿ ಸದೃಢವಾಗಲಿದೆ. ಹೊಸ ಉದ್ಯಮ ಆರಂಭಿಸಲು ಇದು ಸುಸಮಯ.

ಸಿಂಹ ರಾಶಿ:

ಸಿಂಹ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುವ ಕಾಲವಿದು. ವಿಶೇಷವಾಗಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಶುಭ ವಾರ್ತೆ ಕೇಳಿಬರಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ ಸಿಗಲಿದ್ದು, ಬಡ್ತಿ ಅಥವಾ ಸಂಬಳ ಹೆಚ್ಚಳವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಇದ್ದ ಮನಸ್ತಾಪಗಳು ದೂರವಾಗಿ ಆನಂದಮಯ ವಾತಾವರಣ ನಿರ್ಮಾಣವಾಗಲಿದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯವರಿಗೆ ಈ ಯೋಗವು ಅದ್ಭುತ ಫಲಿತಾಂಶಗಳನ್ನು ನೀಡಲಿದೆ. ಶನಿಯು ಪುಷ್ಯ ನಕ್ಷತ್ರದ ಅಧಿಪತಿಯಾಗಿದ್ದು, ಕರ್ಕಾಟಕ ರಾಶಿಯ ಅಧಿಪತಿ ಚಂದ್ರನಾಗಿರುವುದರಿಂದ ಇವರಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಉತ್ತಮ ಲಾಭಗಳು ದೊರೆಯಲಿವೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದವರಿಗೆ ಗುಣಮುಖರಾಗುವ ಕಾಲ ಹತ್ತಿರವಾಗಲಿದೆ. ಆರ್ಥಿಕವಾಗಿ ನೀವು ಮಾಡುವ ಪ್ರತಿಯೊಂದು ಹೂಡಿಕೆಯೂ ಲಾಭದಾಯಕವಾಗಿ ಪರಿಣಮಿಸಲಿದೆ.

ಗುರು ಪುಷ್ಯ ಯೋಗದ ಈ ಪವಿತ್ರ ಸಮಯದಲ್ಲಿ ಈ ಮೂರು ರಾಶಿಗಳವರು ಹಿರಿಯರ ಆಶೀರ್ವಾದ ಪಡೆಯುವುದು ಮತ್ತು ವಿಷ್ಣು ಸಹಸ್ರನಾಮ ಪಠಿಸುವುದು ಮತ್ತಷ್ಟು ಶುಭ ಫಲಗಳನ್ನು ನೀಡುತ್ತದೆ. ಬಾಕಿ ಇರುವ ಕಾನೂನು ಪ್ರಕ್ರಿಯೆಗಳು ಅಥವಾ ಆಸ್ತಿ ವಿವಾದಗಳು ನಿಮ್ಮ ಪರವಾಗಿ ಬಗೆಹರಿಯುವ ಸಾಧ್ಯತೆ ಹೆಚ್ಚಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್ – Kannada News | Women cannot enter politics without entering Male Leader Room Pappu Yadav controversial remarks

ನವದೆಹಲಿ, ಏಪ್ರಿಲ್ 21: ಸ್ವತಂತ್ರವಾಗಿ ಸ್ಪರ್ಧಿಸಿ ಬಿಹಾರದ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮಹಿಳೆಯರು ರಾಜಕೀಯಕ್ಕೆ ಬರುವುದು ಬಹಳ ಕಷ್ಟ. ಶೇ. 90ರಷ್ಟು ಮಹಿಳೆಯರು ಹಿರಿಯ ನಾಯಕರ ರೂಂನೊಳಗೆ ಹೋಗಿ ಅವರೊಂದಿಗೆ ಮಂಚ ಹಂಚಿಕೊಳ್ಳದೆ ರಾಜಕಾರಣಿಯಾಗಲು ಸಾಧ್ಯವಿಲ್ಲ. ಬಹುತೇಕ ಮಹಿಳೆಯರು ಹಿರಿಯರ ರಾಜಕಾರಣಿಗಳೊಂದಿಗೆ ಲೈಂಗಿಕತೆಯ ರಾಜಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಪ್ಪು ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮಹಿಳೆಯರು ರಾಜಕೀಯ ಜೀವನವನ್ನು ಹೇಗೆ ಪ್ರವೇಶಿಸುತ್ತಾರೆ ಎಂಬುದರ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡಿರುವ ಈ ಹೇಳಿಕೆಗಳಿಗೆ ವಿವಿಧ ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಶೇ. 90ರಷ್ಟು ಮಹಿಳಾ ರಾಜಕಾರಣಿಗಳ ವೃತ್ತಿಜೀವನವು ಹಿರಿಯ ನಾಯಕರ ರೂಂನಿಂದ ಪ್ರಾರಂಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ ಕೇಸ್​ನಿಂದ ದೂರವಿರು; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಪಪ್ಪು ಯಾದವ್​ಗೆ ಜೀವ ಬೆದರಿಕೆ

ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಸರ್ಕಾರದ ಸಂವಿಧಾನ (131 ನೇ ತಿದ್ದುಪಡಿ) ಮಸೂದೆ ಕಳೆದ ಶುಕ್ರವಾರ ಲೋಕಸಭೆಯಲ್ಲಿ ಸೋತ ನಂತರ ಅವರ ಈ ಹೇಳಿಕೆ ಬಂದಿದೆ.

ಮಾಧ್ಯಮ ಸಂವಾದದ ಸಂದರ್ಭದಲ್ಲಿ ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ ಈ ರೀತಿ ಅವಮಾನಕರ ಹೇಳಿಕೆ ನೀಡಿದ್ದಕ್ಕಾಗಿ ಬಿಹಾರದ ರಾಜ್ಯ ಮಹಿಳಾ ಆಯೋಗವು ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ನೋಟಿಸ್ ನೀಡಿದೆ. “ಪೂರ್ನಿಯಾ ಸಂಸದರು ನೀಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದೇವೆ. ಅವರಿಂದ ಉತ್ತರ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಆಯೋಗದ ಅಧ್ಯಕ್ಷೆ ಅಪ್ಸರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

“ರಾಜಕೀಯದಲ್ಲಿ ಕೆಲಸ ಮಾಡುವ ಮಹಿಳೆಯರು ರಾಜಕಾರಣಿಯೊಂದಿಗೆ ಹಾಸಿಗೆ ಹಂಚಿಕೊಳ್ಳುವುದರಿಂದ ಮಾತ್ರ ರಾಜಕೀಯಕ್ಕೆ ಪ್ರವೇಶ ಪಡೆಯಲು ಸಾಧ್ಯ ಎಂದು ನೀವು ಹೇಳಿದ್ದೀರಿ. ಇದು ಮಹಿಳೆಯರ ಆತ್ಮಗೌರವ ಮತ್ತು ಸಾಮಾಜಿಕ ಘನತೆಗೆ ತೀವ್ರ ಹಾನಿಯನ್ನುಂಟುಮಾಡುತ್ತದೆ” ಎಂದು ಆಯೋಗದ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಸಂಸದ ಪಪ್ಪು ಯಾದವ್ ಅವರಿಂದ ವಿವರಣೆಯನ್ನು ಕೋರಿದೆ. ಪಪ್ಪು ಯಾದವ್‌ಗೆ ನೀಡಿದ ನೋಟಿಸ್‌ನಲ್ಲಿ ಆಯೋಗವು ಲೋಕಸಭಾ ಸ್ಪೀಕರ್‌ಗೆ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಏಕೆ ಶಿಫಾರಸು ಮಾಡಬಾರದು ಎಂದು ಕೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:13 pm, Tue, 21 April 26

Source link

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್ – Kannada News | Shivamogga Trial blast case: convicted arafat gets 6 years Jail

ಶಿವಮೊಗ್ಗ, (ಏಪ್ರಿಲ್ 21): ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ  (shivamogga Trial blast case) ಸಂಬಂಧಿಸಿದಂತೆ ಅಪರಾಧಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆಯಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನ 3ನೇ ಆರೋಪಿ ಅರಾಫತ್ ಅಲಿ  ಆರೋಪ ಸಾಬೀತಾಗಿದ್ದು, ಈ ಸಂಬಂಧ ಇಂದು ಏಪ್ರಿಲ್ 21) ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣ ಸಂಬಂಧ 12 ಜನ ಆರೋಪಿಗಳ ಪೈಕಿ ಮೂವರಿಗೆ ಶಿಕ್ಷೆಯಾಗಿದ್ದು, ಇನ್ನುಳಿದ 9 ಜನ ಆರೋಪಿಗಳ ವಿಚಾರಣೆ ಮುಂದುವರೆದಿದೆ.

Published On – 8:59 pm, Tue, 21 April 26

Source link

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ! – Kannada News | Malur NKN Brick Factory Raid: 10 Bonded and Child Laborers Freed in Kolar Operation

ಕೋಲಾರ, ಏ.21: ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಇರುವ ‘ಎನ್.ಕೆ.ಎನ್’ (NKN) ಇಟ್ಟಿಗೆ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಜೀತಕ್ಕಿದ್ದ ಇಬ್ಬರು ಬಾಲಕರು ಸೇರಿದಂತೆ ಒಟ್ಟು 10 ಜನರನ್ನು ರಕ್ಷಿಸಿದೆ. ಕೋಲಾರ ಉಪ ವಿಭಾಗಾಧಿಕಾರಿ (AC) ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ಜೀತಕ್ಕೆ ಇರಿಸಿಕೊಳ್ಳಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿತ್ತು.ಒಡಿಶಾ ಮೂಲದ ಎಂಟು ಮಂದಿ ಕಾರ್ಮಿಕರು ಹಾಗೂ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ 10 ಜನರನ್ನು ಸದ್ಯ ಅಧಿಕಾರಿಗಳ ವಶಕ್ಕೆ ಪಡೆದಿದ್ದು, ಅವರಿಗೆ ಇಲಾಖೆಯಿಂದ ‘ರಿಲಿವ್ ಸರ್ಟಿಫಿಕೇಟ್‌’ (ಬಿಡುಗಡೆ ಪತ್ರ) ನೀಡಲು ಕ್ರಮ ಕೈಗೊಳ್ಳಲಾಗಿದೆ. ಮಾಲೂರು ಇಓ ಕೃಷ್ಣಪ್ಪ, ಸಿಡಿಪಿಓ ಶೋಭ, ಕಾರ್ಮಿಕ ಅಧಿಕಾರಿ ರೇಣುಕಾ ಪ್ರಸನ್ನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಅವರು ಈ ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜೀತ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಕಾರ್ಖಾನೆಯ ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಅವರವರ ಊರುಗಳಿಗೆ ಮರಳಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ – Kannada News | Firecracker explosion in Kerala’s Thrissur, 10 people dead, several injured

ತ್ರಿಶೂರ್, ಏಪ್ರಿಲ್ 21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು.

ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ 40 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನ್ಯೂಸ್ 18 ವರದಿ ಮಾಡಿದೆ. ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು. ಸ್ಥಳಕ್ಕೆ ತುರ್ತು ಸೇವೆಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ನಿಖರವಾದ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.

ಇದನ್ನೂ ಓದಿ: ಶಾರ್ಟ್​ ಸರ್ಕ್ಯೂಟ್​ನಿಂದ ಪಿಎಸ್​ಐ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಟಾಕಿ ಸ್ಫೋಟದಲ್ಲಿ ಗಾಯಗೊಂಡವರಿಗೆ ತಕ್ಷಣ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ. ಅವರ ಚಿಕಿತ್ಸೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಬೇಕೆಂದು ಅವರು ಸೂಚನೆ ನೀಡಿದ್ದಾರೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಹಲವಾರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ವಿವಿಧ ಸ್ಥಳಗಳಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. 18 ಜನರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:29 pm, Tue, 21 April 26

Source link

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Blazing 47 Ball Century Powers SRH vs DC in IPL 2026 Match 31

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದು ಕೇವಲ 47 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಇದು ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಅವರ 9ನೇ ಶತಕವಾಗಿದೆ.

Source link

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾಪಗಳು ಕೇಳಿ ಬರುತ್ತಿದ್ದು, ಇದು ಚುನಾವಣೆ ಸಂದರ್ಭದಲ್ಲಿ ಸಹಜ ಎಂದು ಅವರು ಹೇಳಿದರು. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಕೇಳಿಬರುತ್ತಿದ್ದರೂ, ಫಲಿತಾಂಶ ಬರುವವರೆಗೂ ಕಾದು ನೋಡಬೇಕು ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳುವ ಹಂತದಲ್ಲಿ ತಾವು ಇಲ್ಲ ಎಂದು ತಿಳಿಸಿದರು. ಕ್ರಮ ಕೈಗೊಳ್ಳುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಮುಸ್ಲಿಂ ನಾಯಕರ ಮೇಲಿನ ಕ್ರಮಗಳು ಮತಬ್ಯಾಂಕ್ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ ಈ ಸೋಲುಗಳ ಹೊರತಾಗಿಯೂ ತಂಡದ ಪರ ಅಮೋಘ ಪ್ರದರ್ಶನ ನೀಡುತ್ತಿರುವ ಶಫಾಲಿ ವರ್ಮಾ ಮುಂಬಡ್ತಿ ಪಡೆದಿದ್ದಾರೆ. ಈ ಸರಣಿಯಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿರುವ ಶಫಾಲಿ ವರ್ಮಾ ಐಸಿಸಿ ಮಹಿಳಾ ಟಿ20 ಶ್ರೇಯಾಂಕದಲ್ಲಿ ಎರಡು ಸ್ಥಾನ ಜಿಗಿತ ಸಾಧಿಸಿದ್ದು ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಮಂಧಾನಾಗೆ ಆಘಾತ

ಟಿ20 ರ್ಯಾಂಕಿಂಗ್​ನಲ್ಲಿ ಕುಸಿತ ಕಂಡಿರುವ ಸ್ಮೃತಿ ಮಂಧಾನ ಎರಡು ಪಂದ್ಯಗಳಲ್ಲಿ ಕೇವಲ 25 ರನ್ ಗಳಿಸಿದ್ದರು. ಹೀಗಾಗಿ ಮಂಧಾನ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ವೆಸ್ಟ್ ಇಂಡೀಸ್‌ನ ಹೇಲಿ ಮ್ಯಾಥ್ಯೂಸ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದ್ದಾರೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಎರಡು ಸ್ಥಾನಗಳ ಏರಿಕೆ ಕಂಡು ಪ್ರಸ್ತುತ 11 ನೇ ಸ್ಥಾನದಲ್ಲಿದ್ದಾರೆ. ಸ್ಮೃತಿ ಅವರಂತೆ ಜೆಮಿಮಾ ರೊಡ್ರಿಗಸ್ ಕೂಡ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದು, ನಾಲ್ಕು ಸ್ಥಾನಗಳು ಕುಸಿದು 14 ನೇ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ಆಟಗಾರ್ತಿಯರಿಗೆ ಲಾಭ

ಭಾರತ ವಿರುದ್ಧದ ಎರಡನೇ ಪಂದ್ಯದಲ್ಲಿ ಅದ್ಭುತ ಅರ್ಧಶತಕ ಬಾರಿಸಿದ್ದ ದಕ್ಷಿಣ ಆಫ್ರಿಕಾ ನಾಯಕಿ ಲಾರಾ ವೊಲ್ಫರ್ಟ್ ಐದನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಗೆಯೇ ಅನ್ನೆರಿ ಡೆರ್ಕ್ಸೆನ್ 18 ಸ್ಥಾನ ಏರಿಕೆಯಾಗಿ 33 ನೇ ಸ್ಥಾನಕ್ಕೆ ತಲುಪಿದ್ದಾರೆ. ಸುನೆ ಲೂಸ್ ಎಂಟು ಸ್ಥಾನ ಏರಿಕೆಯಾಗಿ 35 ನೇ ಸ್ಥಾನಕ್ಕೆ ತಲುಪಿದ್ದಾರೆ.

2026 ರ ಟಿ20 ವಿಶ್ವಕಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್..! ತನಿಖೆ ಪ್ರಾರಂಭಿಸಿದ ಐಸಿಸಿ

ದೀಪ್ತಿ-ರೇಣುಕಾಗೆ ಹಿಂಬಡ್ತಿ

ಏತನ್ಮಧ್ಯೆ, ಭಾರತದ ಆಲ್‌ರೌಂಡರ್ ದೀಪ್ತಿ ಶರ್ಮಾ, ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಮತ್ತು ಅರುಂಧತಿ ರೆಡ್ಡಿ ಬೌಲರ್‌ಗಳ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ದೀಪ್ತಿ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದರೆ, ರೇಣುಕಾ ನಾಲ್ಕು ಸ್ಥಾನ ಕುಸಿದು ಒಂಬತ್ತನೇ ಸ್ಥಾನಕ್ಕೆ ಜಾರಿದ್ದಾರೆ. ಏತನ್ಮಧ್ಯೆ, ಅರುಂಧತಿ ಮೂರು ಸ್ಥಾನ ಕುಸಿದು ಟಾಪ್ 10 ರಿಂದ ಹೊರಬಿದ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version