ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್ – Kannada News | 2026 Women’s T20 Asia Cup Schedule Released: India Pak Clash Sep 5 in Dubai
2026 ರ ಮಹಿಳಾ ಟಿ20 ಏಷ್ಯಾಕಪ್ (2026 Women’s T20 Asia Cup) ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಕಟಿಸಿದೆ. ಅದರಂತೆ 10ನೇ ಆವೃತ್ತಿಯ ಈ ಪಂದ್ಯಾವಳಿ 2026 ರ ಆಗಸ್ಟ್ 28 ರಿಂದ ಪ್ರಾರಂಭವಾಗಲಿದೆ. ಟೂರ್ನಮೆಂಟ್‌ನ ಎಲ್ಲಾ ಪಂದ್ಯಗಳು ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಒಟ್ಟು 8 ತಂಡಗಳು ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿದ್ದು, ಈ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಂದಿನಂತೆ ಎ ಗುಂಪಿನಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾದ ಭಾರತ ಮತ್ತು ಪಾಕಿಸ್ತಾನದ…