ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್ – Kannada News | Horrific Chitradurga Bus Accident: Driver Jumps Out Through Window, Conductor Makes Narrow Escape
ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ…