ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ – Kannada News | Mekedatu Row: JD(S) Slams Congress for Aligning with Anti Project DMK
ಬೆಂಗಳೂರು, ಏಪ್ರಿಲ್ 21: ಮೇಕೆದಾಟು ಯೋಜನೆ ತಡೆಯುವ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹೀಗಿದ್ದರೂ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಎಲ್ಲಾ ಮಂತ್ರಿಗಳು ತಮಿಳುನಾಡಿಗೆ ಹೋಗಿ, ವಾರಗಟ್ಟಲೆ ಠಿಕಾಣಿ ಹೂಡಿ ಡಿಎಂಕೆ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಹೀಗಾಗಿ “ನಮ್ಮ ನೀರು ನಮ್ಮ ಹಕ್ಕು” ಎಂದು ಹೋರಾಟದ ಬೃಹತ್ ನಾಟಕವಾಡಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ಕಿಡಿ ಕಾರಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…