‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್ಗೆ ನೊಟೀಸ್
ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ…