ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – Kannada News | Kalaburagi: Bhai Bhai Group Leader Irfan Shot and Hacked in Wadi
ಕಲಬುರಗಿ, ಏಪ್ರಿಲ್ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ…