ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ -ಕೃತಿ ಗೌಡ – Kannada News | Gichi Gili Gili Fame Prashanth Gowda Marries Actress Kruthi Gowda in a Grand Ceremony
ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ನಟ, ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡು ಸುದ್ದಿಯಾಗಿದ್ದ ಪ್ರಶಾಂತ್ ಗೌಡ, ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ (ಜುಲೈ 5) ಪ್ರಶಾಂತ್ ಗೌಡ ಹಾಗೂ ಕೃತಿ ಗೌಡ ಅವರ ವಿವಾಹ ಮಹೋತ್ಸವ ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿದೆ. ಇವರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ನವಜೋಡಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ….