Japan Earthquake: ಜಪಾನ್ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ – Kannada News | Japan Earthquake; powerful 7.4 magnitude earthquake hits Japan tsunami warning issued
ಟೋಕಿಯೋ, ಏಪ್ರಿಲ್ 20: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಇಂದು 7.4 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದೆ. ಇದರಿಂದ ದೇಶಾದ್ಯಂತ ಆತಂಕ ಉಂಟಾಗಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ. ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಒತ್ತಾಯಿಸಿದ್ದಾರೆ. ಅಲೆಗಳು ದಡವನ್ನು ತಲುಪುವ ನಿರೀಕ್ಷೆಯಿರುವುದರಿಂದ ಕರಾವಳಿ ವಲಯಗಳಿಂದ ದೂರವಿರಲು ಅಧಿಕಾರಿಗಳು ನಿವಾಸಿಗಳಿಗೆ ಎಚ್ಚರಿಕೆ ನೀಡಿದರು. 3 ಮೀಟರ್ (ಸುಮಾರು 10 ಅಡಿ)ವರೆಗಿನ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ವಲಯದ ನಿವಾಸಿಗಳು ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಜಪಾನ್…