ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್, ಇಒ ಹೇಳಿದ್ದೇನು? – Kannada News | Bengaluru Dharmaraya swamy Temple EO nagaraju suspended for gold necklace theft allegation
ಬೆಂಗಳೂರು, (ಫೆಬ್ರವರಿ 03): ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ (Bengaluru Dharmaraya swamy Temple ) ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನದ ನಕ್ಲೇಸ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಓ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…