ಬೆಳಗಾವಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಮಗು ಸೇರಿ ಮೂವರು ಸಾವು – Kannada News | Belagavi KSRTC Bus Collides with Motorcycle, Three death Including Child
ಬೆಳಗಾವಿ, ಆಗಸ್ಟ್ 06: ಕೆಎಸ್‌ಆರ್‌ಟಿಸಿ (KSRTC) ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ನಡೆದಿದೆ. ಸೈಫ್ ಮುಲ್ಲಾ (29), ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಸೈಫ್ ಮುಲ್ಲಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ್ (35) ಮೃತ ದುರ್ದೈವಿಗಳು. ನಡೆದಿದ್ದೇನು? ಹಿಡಕಲ್‌ನಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಗೋಕಾಕ್…