Headlines

ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ – Kannada News | Ballari Banner Clash: DIG Vertika Katiyar Transferred, New SP Appointed

ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ ಬೆಂಗಳೂರು, ಜನವರಿ 07: ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್​ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ತಲೆದಂಡದ ಬೆನ್ನಲ್ಲೇ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ವರ್ತಿಕಾರನ್ನು ಟ್ರಾನ್ಸ್​​ಫರ್​​ ಮಾಡಲಾಗಿದ್ದು, ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ ಪೆನ್ನೆಕರ್…

Read More

ಮಂತ್ರಾಲಯದ ರಾಯರ ಮಠಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ! – Kannada News | Mantralayam Raghavendra Swamy Mutt Hundi Collection Reaches Rs 3.7 Crore in Just 21 Days

ರಾಯಚೂರು, ಜೂನ್ 26: ಪ್ರಸಿದ್ಧ ಪುಣ್ಯಕ್ಷೇತ್ರ ರಾಯಚೂರು ಜಿಲ್ಲೆಯ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದೊಂದು ತಿಂಗಳಲ್ಲಿ ಲಕ್ಷಾಂತರ ಭಕ್ತರು ಹರಿದು ಬಂದಿದ್ದಾರೆ. ಈ ಭಕ್ತರ ಮಹಾಪೂರದ ನಡುವೆಯೇ ರಾಯರ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಕೇವಲ 21 ದಿನಗಳ ಅವಧಿಯಲ್ಲಿ ಭಕ್ತರು ಹುಂಡಿಗೆ ಬರೋಬ್ಬರಿ 3,72,40,530 ರೂಪಾಯಿ ನಗದು ಹಣವನ್ನು ಕಾಣಿಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ನಗದಿನ ಜೊತೆಗೆ 67 ಗ್ರಾಂ ಚಿನ್ನ ಹಾಗೂ 511 ಗ್ರಾಂ ಬೆಳ್ಳಿ ಕೂಡ ಹುಂಡಿಯಲ್ಲಿ ಸಂಗ್ರಹವಾಗಿದೆ….

Read More

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ! – Kannada News | SSLC Mark Entry Error: Student Ramadatta Sharma Receives 48 Instead of 92 Marks

ಚಿಕ್ಕಮಗಳೂರು, ಏಪ್ರಿಲ್​​ 27: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪಕರಿಂದ ಆಗಿರುವ ದೊಡ್ಡ ಯಡವಟ್ಟೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತ ಶರ್ಮ ಅವರಿಗೆ ಬರಬೇಕಿದ್ದ ಅಂಕ 92 ಆಗಿತ್ತು. ಆದರೆ, ಫಲಿತಾಂಶದಲ್ಲಿ ಕೇವಲ 48 ಅಂಕಗಳು ನಮೂದಾಗಿವೆ. ಇಂಟರ್ನಲ್‌ನಲ್ಲಿ 20 ಅಂಕಗಳು ಹಾಗೂ ಉತ್ತರ ಪತ್ರಿಕೆಯ ಫೋಟೋಕಾಪಿಯಲ್ಲಿ 72 ಅಂಕಗಳು (80ಕ್ಕೆ) ಸ್ಪಷ್ಟವಾಗಿ ದಾಖಲಾಗಿದ್ದು, ಒಟ್ಟು 92 ಅಂಕಗಳು…

Read More

ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಅವಳಿ ಶಿಶುಗಳ ತಾಯಿ – Kannada News | Tragedy at Koderma Station: Young Mother Dies in Train Mishap

ಕೊಡೆರ್ಮಾ, ಏಪ್ರಿಲ್ 26: ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ರೈಲಿನಡಿ ಪ್ರಾಣಬಿಟ್ಟಿರುವ ಘಟನೆ ಜಾರ್ಖಂಡ್​ನ ಕೊಡೆರ್ಮಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ 24 ವರ್ಷದ ಮಹಿಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರೈಲು ನಿಲ್ದಾಣದಿಂದ ಹೊರಡಲು ಪ್ರಾರಂಭಿಸಿದಾಗ ಯುವತಿ ತನ್ನಿಬ್ಬರು ಮಕ್ಕಳೊಂದಿಗೆ ರೈಲನ್ನು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಸಮತೋಲನ ತಪ್ಪಿದ ಅವರು ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಲ್ಲಿ ಬಿದ್ದಿದ್ದಾರೆ. ಅಲ್ಲಿದ್ದ ಪ್ರಯಾಣಿಕರು ಕಿರುಚಾಡುವಷ್ಟರಲ್ಲೇ ರೈಲಿನ ಚಕ್ರಗಳು…

Read More

ಪೂರ್ಣ ಅರಾವಳಿ ರಕ್ಷಣೆ; ಹೊಸ ಮೈನಿಂಗ್ ಲೀಸ್ ಇಲ್ಲ: ಕೇಂದ್ರ ನಿರ್ಧಾರ ಮತ್ತು ಭರವಸೆ – Kannada News | Govt says it will protect entire aravali, won’t give new mining lease

ನವದೆಹಲಿ, ಡಿಸೆಂಬರ್ 24: ಅಮೂಲ್ಯ ನೈಸರ್ಗಿಕ ಸಂಪತ್ತಿರುವ ಅರಾವಳಿ ಪರ್ವತ ಶ್ರೇಣಿಯನ್ನು (Aravali Range) ಸಂಪೂರ್ಣವಾಗಿ ರಕ್ಷಿಸಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅರಾವಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮೂಲಕ ಈ ಸೂಕ್ಷ್ಮ ಪ್ರದೇಶವನ್ನು ನಾಶ ಮಾಡುವ ಪ್ರಯತ್ನ ನಡೆದಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ. ಇಂದು ಪತ್ರಿಕಾ ಹೇಳಿಕೆ ಹೊರಡಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಳಿಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು…

Read More

‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ – Kannada News | Darshan Vijayalakshmi move High Court against Boss movie release ft Tanush Shivnna V Lava

ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ (Boss Movie) ಈಗಾಗಲೇ ಸಾಕಷ್ಟು ಸುದ್ದಿ ಆಗಿದೆ. ತನಿಷ್ ಶಿವಣ್ಣ ನಟನೆಯ ಈ ಚಿತ್ರದ ಟೀಸರ್ ಬಿಡುಗಡೆ ಆದ ದಿನದಿಂದಲೂ ವಿವಾದ ಶುರು ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್​ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ (Darshan) ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತದೆ. ಆ ಕಾರಣದಿಂದ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು…

Read More

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು: ಮಗಳು ಗುಣಮುಖಳಾಗ್ತಾಳೆಂಬ ಆಸೆಯಲ್ಲಿದ್ದ ಪೋಷಕರಿಗೆ ಆಘಾತ – Kannada News | Shivamogga: Teen’s Suspicious Death at Rehab Center Sparks Negligence Probe

ಶಿವಮೊಗ್ಗ, ಮೇ 08: ನಗರದ ಪ್ರಸಿದ್ಧ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿಯಾಗಿದ್ದು, ಮಗಳ ಹುಷಾರಾಗಿ ಮನೆಗೆ ಬರುತ್ತಾಳೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೀಗ ಆಘಾತ ಉಂಟಾಗಿದೆ. ಯುವತಿಯ ಸಾವಿನ ಹಿಂದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8 ತಿಂಗಳ ಹಿಂದೆ ಕಾಲೇಜಿಗೆ ಹೋಗುವಾಗ ಹಾವು ನೋಡಿ…

Read More

IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇಂಜುರಿಗೊಂಡು ತಂಡದಿಂದ ಹೊರಬಿದ್ದ ಆಘಾತದಲಿದ್ದ ಟೀಂ ಇಂಡಿಯಾಗೆ ಇದೀಗ ಇನ್ನೊಂದು ಆಘಾತ ಎದುರಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ಸ್ಪಿನ್ ಆಲ್‌ರೌಂಡರ್ ಆಗಿ ತಂಡವನ್ನು ಕೂಡಿಕೊಂಡಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡು ಅರ್ಧ ಪಂದ್ಯದಲ್ಲೇ ಮೈದಾನ ತೊರೆದಿದ್ದಾರೆ. ಸುಂದರ್ ಬೌಲಿಂಗ್ ಮಾಡುವಾಗ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಇದರಿಂದಾಗಿ…

Read More

ರಾಜಸ್ಥಾನದಲ್ಲಿ‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಭಾರತದ ಮೊದಲ ಕ್ರಿಕೆಟ್‌ ಸ್ಟೇಡಿಯಂ ಹೋಟೆಲ್ – Kannada News | India’s first 5 star hotel linked cricket stadium; watch the video here

ರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂ Image Credit source: Social Media ಭಾರತದ ಮೊದಲ ಫೈವ್‌ ಸ್ಟಾರ್‌ ಹೋಟೆಲ್ ಸಂಯೋಜಿತ  ಕ್ರಿಕೆಟ್ ಕ್ರೀಡಾಂಗಣವನ್ನು ರಾಜಸ್ಥಾನದ (Rajasthan) ಉದಯಪುರದ  ನಾಥದ್ವಾರದಲ್ಲಿರುವ ಮದನ್ ಪಲಿವಾಲ್ ಸ್ಪೋರ್ಟ್ಸ್ ಸಿಟಿಯಲ್ಲಿ ಮಿರಾಜ್ ಗ್ರೂಪ್‌ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್‌ನ ಸಹಯೋಗದೊಂದಿಗೆ ನಿರ್ಮಿಸಲಾಗಿದ್ದು, ಅತ್ಯಾಧುನಿಕ ಸೌಲಭ್ಯಗಳು ಮತ್ತು ಉತ್ತಮ ಗುಣಮಟ್ಟದ ಮೂಲಸೌಕರ್ಯಗಳೊಂದಿಗೆ ನಿರ್ಮಿಸಲಾದ ಈ ʼರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂʼ ಹೋಟೆಲ್‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದೇಶದ ಅತಿದೊಡ್ಡ ಹೋಟೆಲ್‌ ಕ್ರೀಡಾಂಗಣದ ಸುಂದರ ವಿಡಿಯೋವನ್ನು…

Read More