ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ – Kannada News | 8 Year Old Child Killed Several Trapped As Himachal Building Gutted In Fire
ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಂಕಿಯನ್ನು ನಿಯಂತ್ರಿಸಲು,…