ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!
India vs New Zealand: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಪ್ರಮುಖ ಆಲ್ರೌಂಡರ್ ಗಾಯಗೊಂಡು ಇದೀಗ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರು. ಹೀಗಾಗಿ ಬೌಲಿಂಗ್ ವೇಳೆ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾಗ್ಯೂ ಅವರು ಬ್ಯಾಟಿಂಗ್ಗೆ ಆಗಮಿಸಿದ್ದರು. ಇದೀಗ ಸುಂದರ್ ಅವರ ಗಾಯದ ವೈದ್ಯಕೀಯ ವರದಿ ಬಂದಿದೆ. ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿನಲ್ಲಿ…