ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ – Kannada News | Massive Fire Engulfs LED Godown Near Rajkumar Memorial in Bengalurus Nandini Layout
ಬೆಂಗಳೂರು, ಏಪ್ರಿಲ್ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ…