ನ್ಯೂಝಿಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್
ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಗಾಯಗೊಂಡು ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಹೌದು, ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ರಿಷಭ್ ಪಂತ್ ಗಾಯಗೊಂಡಿದ್ದಾರೆ. ವಡೋದರಾದಲ್ಲಿ ಶನಿವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಸೈಡ್ ಆರ್ಮ್ ತಜ್ಞರ ಎಸೆತದಿಂದ ಅವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ….