Horoscope Today 30 January: ಇಂದು ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಕಾಡಲಿದೆ – Kannada News | Horoscope Today: January 30, Friday 2026 Daily Zodiac Predictions and Lucky Signs

ಮೇಷ ರಾಶಿ:

ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು.

ವೃಷಭ ರಾಶಿ:

ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ ನಿಮಗೆ ಅರಿವಿರದು. ಕೃತಜ್ಞತೆಯನ್ನು ಸ್ಮರಿಸಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವಿರಿ.‌ ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ.

ಮಿಥುನ ರಾಶಿ:

ಸಮರ್ಥರ ಜೊತೆ ವಾಗ್ವಾದ ನಡೆಸುವಿರಿ. ವೃತ್ತಿಯಲ್ಲಿ ಸುಲಭದ ಕಾರ್ಯವನ್ನು ನೀವು ಆರಿಸಿಕೊಳ್ಳುವಿರಿ. ಆತ್ಮವಿಶ್ವಾಸದ ಕೊರೆತೆಯು ಕಾಣಿಸುವುದು. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ವಿವಾಹ ಸಂಬಂಧಕ್ಕೆ ನಿಮ್ಮ ಪೂರ್ಣ ಸಹಮತ ಇರದು. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ.

ಕರ್ಕಾಟಕ ರಾಶಿ:

ಭೇದಭಾವವನ್ನು ಮರೆತು ಅಲ್ಪಕಾಲವಾದರು ಬಂಧುಗಳ ಜೊತೆ ಇರಬೇಕಾದೀತು. ಹಠದಿಂದ ಏನನ್ನೂ ಸಾಧಿಸಲಾಗದು ಎಂಬುದು ನಿಮಗೇ ಮನವರಿಕೆಯಾಗಲಿದೆ. ಉದ್ಯೋಗಮಿತ್ರರು ನಿಮ್ಮ ಕಾರ್ಯಗಳಿಗೆ ಸಹಕಾರ ನೀಡುವರು. ಶತ್ರುಗಳು ಸಹಿಸಲಾಗದೇ ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಎಲ್ಲ ಕಡೆ ನೀವೇ ಕಾಣಿಸಿಕೊಳ್ಳಬೇಕು ಎಂಬ ಧೋರಣೆ ಕಾಣಿಸುವುದು.

ಸಿಂಹ ರಾಶಿ:

ಪರರ ಬಗ್ಗೆ ಅನುಕಂಪ ಉಂಟಾಗುವುದು. ಮಾನಸಿಕ ಸ್ಥೈರ್ಯದಿಂದ ಎಲ್ಲ ಕೆಲಸವನ್ನು ಮಾಡಿಕೊಳ್ಳುವಿರಿ. ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾಗುವ ಸಂಭವವಿದೆ. ಸದ್ಯೋ ಭವಿಷ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಎದುರಾಳಿಗಳು ತಯಾರಾಗುವ ಸಾಧ್ಯತೆ ಇದೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು.

ಕನ್ಯಾ ರಾಶಿ:

ಆರೋಗ್ಯದ ರಕ್ಷಣೆಗೆ ಉಳಿತಾಯದ ಬಗ್ಗೆ ಗಮನ ಕೊಡುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರ್ಕಾರಿ ಉದ್ಯೋಗಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಧೈರ್ಯವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ.

ತುಲಾ ರಾಶಿ:

ನಿಮ್ಮ ಒತ್ತಡದ ಸ್ಥಿತಿಯಲ್ಲಿ ಯಾರಾದರೂ ಜೊತೆಗೆ ಬರುವರು. ಆದರೆ ಅದರ ದುರುಪಯೋಗ ಮಾಡಿಕೊಳ್ಳಬಹುದು. ವೃತ್ತಿಯಲ್ಲಿ ಪರಿಣಿತಿಯನ್ನು ಸಾಧಿಸಿಕೊಳ್ಳುವಿರಿ. ಸಹೋದ್ಯೋಗಿಗಳಿಂದ ಒತ್ತಡವು ಬರಬಹುದು. ವಿವಾಹದ‌ ಮಾತುಕತೆಗೆ ಹಿರಿಯರನ್ನು ಮುಂದಿಟ್ಟುಕೊಳ್ಳಬೇಕು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ.

ವೃಶ್ಚಿಕ ರಾಶಿ:

ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಸಹಜ. ದೊಡ್ಡ ಉದ್ದೇಶಕ್ಕೆ ಅದನ್ನು ಗೌಣ ಮಾಡಿಕೊಂಡರೆ ಮಾನಸಿಕ ಆರೋಗ್ಯದಲ್ಲಿ ಚೇತರಿಕೆ. ಹೂಡಿಕೆಯಿಂದ ಲಾಭವು ಸಿಗುವ ನಿರೀಕ್ಷೆಯಲ್ಲಿ ಇರುವಿರಿ. ಅನಿರೀಕ್ಷಿತವಾಗಿ ದೂರಪ್ರಯಾಣ ಮಾಡಬೇಕಾದೀತು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಯೋಜನೆ ಮಾಡಬೇಕು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ.

ಧನು ರಾಶಿ:

ಯಶಸ್ಸಿನ ಅಪೇಕ್ಷೆ ಉಳ್ಳವರು ಮತ್ತೊಬ್ಬರ ಒಳ್ಳೆಯದನ್ನೂ ಕೀರ್ತನೆ ಮಾಡಬೇಕು. ಶೀಘ್ರಫಲಾಪೇಕ್ಷೆಯಿಂದ ಅನಾಹುತವು ಸಂಭವಿಸೀತು. ಗಾಯಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ವಿಷಯಕ್ಕೆ ತಕ್ಕಂತೆ ಮಾತಿನಲ್ಲಿ ಏರಿಳಿತವಿರಲಿ. ಆತ್ಮಸಂತೋಷವು ನಿಮ್ಮ ಕಾರ್ಯಕ್ಕೆ ಇನ್ನಷ್ಟು ಉತ್ಸಾಹವನ್ನು ಕೊಡುವುದು. ಯಾರಿಲ್ಲಿರುವ ನ್ಯೂನತೆಯನ್ನು ಸಹಜವಾಗಿ ಸ್ವೀಕರಿಸುವ ಸ್ವಭಾವ ಉತ್ತಮ.

ಮಕರ ರಾಶಿ:

ಗೌಪ್ಯ ವ್ಯವಹಾರದಲ್ಲಿ ತೊಂದರೆ ಕಾಣಿಸುವುದು. ಮಾಡುವ ಕಾರ್ಯದಲ್ಲಿರುವ ಆರಂಭಶೂರತ್ವವು ಕೊನೆಗೆ ಇರಲಾರದು. ಸಿದ್ಧವಸ್ತುಗಳ ಮಾರಾಟದಿಂದ ಲಾಭವನ್ನು ಕಾಣುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಕೌಶಲವನ್ನು ಕರಗತ ಮಾಡಿಕೊಳ್ಳುವಿರಿ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ.

ಕುಂಭ ರಾಶಿ:

ನಿಮ್ಮ ಉದ್ಯೋಗಕ್ಕೆ ಆರ್ಥಿಕ ಬೆಂಬಲ ಸಿಗದಿದ್ದರೂ ನೈತಿಕ ಬೆಂಬಲ ಸಿಗಲಿದೆ. ಇಂದು ನಿಮ್ಮ ಉದ್ಯಮದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಕಷ್ಟವಾದೀತು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಉತ್ಪನ್ನಗಾರರಿಗೆ ಸಂತೋಷದ ದಿನವು ಇದಾಗಲಿದೆ. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ.

ಮೀನ ರಾಶಿ:

ಇಂದು ನಿಮ್ಮ ಸಂಗಾತಿಯಾಗುವವರ ಜೊತೆ ಹೆಚ್ಚು ಸಮಯ ಕಳೆದು, ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರು. ಆಗಿಹೋದ ಕಾಯಗಳನ್ನು ನೆನೆದುಕೊಂಡು ಸಂತೃಪ್ತಿಪಡುವಿರಿ. ನಿಮಗೆ ನೀಡಿದ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಬಾಂಧವ್ಯವನ್ನು ಬೆಸೆಯಲು ಒಳ್ಳೆಯ ಸನ್ನಿವೇಶ ಸೃಷ್ಟಿಯಾಗುವುದು. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು.

ಜನವರಿ 30,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಐಂದ್ರ, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 21 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:12 – 12:38, ಯಮಗಂಡ ಕಾಲ 15:39- 16:56, ಗುಳಿಕ ಕಾಲ 08:20 – 09:46

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ – Kannada News | Central Govt not allowing screening of Palestinian films: Prakash Raj expresses displeasure

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ, ನಿರ್ಮಾಪಕನಾಗಿ, ವಿತರಕನಾಗಿ ಈಗ ಚಲನಚಿತ್ರೋತ್ಸವದ ರಾಯಭಾರಿ ಆಗಿ ನಿಮ್ಮ ಮುಂದೆ ನಿಂತಿದ್ದೇನೆ. ಒಂದು ಅನುಭವ ಹಂಚಿಕೊಳ್ಳುತ್ತೇನೆ’ ಎಂದು ಪ್ರಕಾಶ್ ರಾಜ್ (Prakash Raj) ಅವರು ಮಾತು ಆರಂಭಿಸಿದರು.

‘ಮೊನ್ನೆ ಒಂದು ಅಂತಾರಾಷ್ಟ್ರೀಯ ಸಾಹಿತ್ಯ ಉತ್ಸವಕ್ಕೆ ಹೋಗಿದ್ದೆ. ಅಲ್ಲಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬಂದರು. ಮಕ್ಕಳು, ಯುವಕರು ಅವರನ್ನು ನೋಡುವ ಕಾತರದಲ್ಲಿ ಇದ್ದರು. ಅವರಿಗೆ ಒಂದು ಮಾತು ಕೇಳಿದೆ. ಮೇಲಿಂದ ಈ ಭೂಮಿ ನೋಡಿದರೆ ಏನು ಎನಿಸುತ್ತದೆ ಅಂತ ಕೇಳಿದೆ. ಅಲ್ಲಿಂದ ಭೂಮಿ ಪುಟ್ಟದು ಎನಿಸುತ್ತದೆ. ಅಲ್ಲಿ ಮನುಷ್ಯರ ಜನಸಂಖ್ಯೆ ಕಡಿಮೆ. ಬೇರೆ ಎಲ್ಲ ಪ್ರಾಣಿಗಳದ್ದು ಈ ಭೂಮಿ. ಆದರೆ ಮನುಷ್ಯರು ಯಾಕೆ ಜಗಳ ಆಡುತ್ತಿದ್ದಾರೆ ಎನಿಸಿತು ಅಂತ ಅವರು ಹೇಳಿದರು’ ಎಂದಿದ್ದಾರೆ ಪ್ರಕಾಶ್ ರಾಜ್.

‘ಮಾನವೀಯ ಬಾಂಧವ್ಯ ಬೆಳೆಯಲು ಈ ರೀತಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳು ಕಾರಣ ಆಗುತ್ತವೆ. ಆದರೆ ಇತ್ತೀಚೆಗೆ ಬೆಂಗಳೂರು ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಮಾಡಿದೆ. ಇದರಿಂದ ಪ್ಯಾಲೆಸ್ತೀನ್ ಸಿನಿಮಾಗಳನ್ನು ಪ್ರದರ್ಶನ ಮಾಡಲು ನಮ್ಮ ಕೇಂದ್ರ ಸರ್ಕಾರ ಬಿಡುತ್ತಿಲ್ಲ. ಮುಖ್ಯಮಂತ್ರಿಗಳಾದ ನೀವು ಇದರ ಬಗ್ಗೆ ಒಂದು ದೊಡ್ಡ ನಿಲುವು ತೆಗೆದುಕೊಳ್ಳಬೇಕು ಅಂತ ರಾಯಭಾರಿಯಾಗಿ ನಾನು ಕೇಳಿಕೊಳ್ಳುತ್ತಿದ್ದೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

‘ನಮ್ಮ ಮಣ್ಣಿನ ಕಥೆಯಾದ ಎದೆಯ ಹಣತೆ ಪುಸ್ತಕ ಬೇರೆ ಭಾಷೆಗೆ ತರ್ಜುಮೆ ಆಗಿ ಬೂಕರ್ ಪ್ರಶಸ್ತಿ ಬಂದರೆ ನಾವು ಸಂಭ್ರಮಿಸುತ್ತೇನೆ. ನಮ್ಮ ನೆಲಕ್ಕೆ ಇನ್ನೊಬ್ಬರ ಕಥೆಯನ್ನು ತರೋಕೆ ಆಗಲ್ಲ ಎಂಬುದನ್ನು ಹೇಗೆ ಒಪ್ಪಿಕೊಳ್ಳೋಕೆ ಸಾಧ್ಯ? ಮೊನ್ನೆ ಕೇರಳದ ಸರ್ಕಾರ ಮುಂದೆ ನಿಂತು, ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿದೆ. ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ನಿಮ್ಮ ರಾಜಕೀಯ ಹುನ್ನಾರ ನಡೆಯೋದಿಲ್ಲ ಎಂಬುದನ್ನು ಕರ್ನಾಟಕ ಸರ್ಕಾರ, ಚಲನಚಿತ್ರ ಅಕಾಡೆಮಿ ಪ್ರತಿಭಟಿಸಬೇಕು ಅಂತ ನಾನು ರಾಯಭಾರಿಯಾಗಿ ಒತ್ತಾಯಿಸುತ್ತೇನೆ’ ಎಂದಿದ್ದಾರೆ ಪ್ರಕಾಶ್ ರಾಜ್.

ಇದನ್ನೂ ಓದಿ: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ?

‘ನನ್ನ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ನಮ್ಮ ಕೆನ್ನೆಗೆ ಇದ್ದರೆ ಸಾಲದು. ಇನ್ನೊಬ್ಬರ ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನು ನಮ್ಮ ಕೆನ್ನೆಗಳಿಗೆ ಮಾಡಿಸಿದರೆ ಮಾತ್ರ ನಾವು ಮನುಷ್ಯರು. ನೀವು ಪ್ಯಾಲೆಸ್ತೀನ್ ಸಿನಿಮಾಗಳನ್ನು ಇಲ್ಲಿ ಪ್ರದರ್ಶಿಸೋಕೆ ಬಿಡದೇ ಇದ್ದರೆ ನಾನು ಈ ವೇದಿಕೆಯಲ್ಲಿ ಅಲ್ಲಿನ ನೋವಿನ ಪದ್ಯವನ್ನು ಓದುತ್ತೇನೆ. ಆ ಮೂಲಕ ನನ್ನ ಪ್ರತಿರೋಧ ವ್ಯಕ್ತಪಡಿಸುತ್ತೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ – Kannada News | Doddaballapura: Unidentified Drone Found During Hindu Samajotsava, Locals Alarmed

ದೇವನಹಳ್ಳಿ, ಜನವರಿ 29: ಅಪರಿಚಿತ ಡ್ರೋನ್​​ವೊಂದು (drone) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದ ಪಾಲನಜೋಗಹಳ್ಳಿಯಲ್ಲಿ ಪತ್ತೆ ಆಗಿದೆ. ಖಾಲಿ ಜಮೀನಿನಲ್ಲಿ‌‌ ಬಿದ್ದಿದ್ದ ಡ್ರೋನ್​ ಕಂಡು ಸ್ಥಳೀಯರಲ್ಲಿ ಆತಂಕ ಮೂಡಿದೆ. ಸದ್ಯ ಡ್ರೋನ್​ ಪರಿಶೀಲನೆ ಮಾಡಿದ ಪೊಲೀಸ್​ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.​​​​​

ವಿಮಾನ ಮಾದರಿಯ ಡ್ರೋನ್ ಪತ್ತೆ

ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಮನೆ ಸಮೀಪ ಡ್ರೋನ್ ಬಿದ್ದಿರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದುರಂತಗಳು ಸಂಭವಿಸಿದ್ರೂ ಎಚ್ಚೆತ್ತುಕೊಳ್ಳದ ಬಸ್​​ ಮಾಲೀಕರು: ಸ್ಲೀಪರ್ ಕೋಚ್​​​ನಲ್ಲಿ ಗೂಡ್ಸ್ ಸಾಗಾಟ, ಬಸ್ ಸೀಜ್

ಬ್ಯಾಟರಿಗಳು ಸೇರಿದಂತೆ ಎಲೆಕ್ಟ್ರಿಕ್ ವೈರ್‌ಗಳು ಜೋಡಿಸಲ್ಪಟ್ಟಿದ್ದ ಡ್ರೋನ್ ಪತ್ತೆಯಾಗಿದ್ದು, ಡ್ರೋನ್‌ನಲ್ಲಿ ಯಾವುದೇ ಸ್ಪೋಟಕ ವಸ್ತುಗಳಿವೆಯೇ ಎಂಬ ಬಗ್ಗೆ ಪೊಲೀಸ್ ಎಕ್ಸ್‌ಪರ್ಟ್ಸ್ ತಂಡ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು-ಮೂರು ಗಂಟೆಗಳ ಕಾಲ ಸೂಕ್ಷ್ಮ ಪರಿಶೀಲನೆ ಮಾಡಿದ್ದಾರೆ. ಬಳಿಕ ಡ್ರೋನ್​​ ವಶಕ್ಕೆ  ಪಡೆದುಕೊಂಡಿದ್ದಾರೆ. ಡ್ರೋನ್ ಎಲ್ಲಿಂದ ಬಂತ್ತು, ಯಾರಿಗೆ ಸೇರಿದೆ ಮತ್ತು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಸದ್ಯ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಾರಿನ ಸನ್‌ರೂಫ್‌ ಓಪನ್ ಮಾಡಿ ಮಕ್ಕಳನ್ನು ಕೂರಿಸಿ ಚಾಲನೆ: 1000 ರೂ. ದಂಡ

ಕಾರಿನ ಸನ್‌ರೂಫ್‌ ಓಪನ್ ಮಾಡಿ ಮಕ್ಕಳನ್ನು ಕೂರಿಸಿ ಚಾಲನೆ ಮಾಡಿದ ಕಾರು ಚಾಲಕನಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸರು 1000 ರೂ. ದಂಡ ವಿಧಿಸಿದ್ದಾರೆ. ಘಟನೆಯ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್​ ಹಕ್ಕಿಯಲ್ಲಿ ಚೀನಾದ ಜಿಪಿಎಸ್​ ಟ್ರ್ಯಾಕರ್ ಪತ್ತೆ

ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸನ್‌ರೂಫ್‌ ಓಪನ್ ಮಾಡಿ ಕಾರು ಚಾಲನೆ ಮಾಡಲಾಗಿತ್ತು. ವಿಡಿಯೋ ವೈರಲ್​​ ಬೆನ್ನಲ್ಲೇ ಕಾರು ವಶಕ್ಕೆ ಪಡೆದು ದಂಡ ಹಾಕಿ ಕಳಿಸಿದ್ದಾರೆ. ಮತ್ತೊಮ್ಮೆ ಅಪಾಯಕಾರಿಯಾಗಿ ಕಾರು ಚಲಾಯಿಸದಂತೆ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session

ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್​ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್​ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA ಅಂತಿದ್ದಾರೆ. ಯಾರು, ಯಾವಾಗ ಏನಾಗಬೇಕೆಂದು ದೇವರು ಹಣೆಯಲ್ಲಿ ಬರೆದಿರ್ತಾನೆ. ಕ್ಷೇತ್ರದಲ್ಲಿ ಕೆಲವರು ಹಿಂಸೆ ಕೊಡುತ್ತಾರೆ. ಅದರಲ್ಲೇ ಖುಷಿ ಪಡುತ್ತಿದ್ದಾರೆ ಎಂದು ಹೆಸರು ಹೇಳದ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.

ರಾಜರಾಜೇಶ್ವರಿನಗರ ಸೂಕ್ಷ್ಮ ಪ್ರದೇಶ ಎಂದು ಹೇಳುತ್ತಾರೆ. ಇದುವರೆಗೆ ಎಷ್ಟು ಪೊಲೀಸ್ ಅಧಿಕಾರಿಗಳು ಅಮಾನತಾಗಿದ್ದಾರೆ ಗೊತ್ತಾ? ಕ್ಷೇತ್ರದಲ್ಲಿ ಪೊಲೀಸರಾಗಿ ಬರಬೇಕೆಂದರೆ MLA ವಿರುದ್ಧ ಕೇಸ್ ಹಾಕ್ಬೇಕು. ಅಂಥವರಿಗೆ ಮಾತ್ರ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಅವಕಾಶ ಕೊಡ್ತಾರೆ. ಮೊಟ್ಟೆ ಹೊಡದ್ರೆ ದೂರು ಸ್ವೀಕರಿಸಲ್ಲ, ಕಾರು ಹೊಡೆದ್ರೆ ದೂರು ಪಡೆಯಲ್ಲ. ದಯವಿಟ್ಟು ಒಬ್ಬ ಶಾಸಕನಿಗೆ ರಕ್ಷಣೆ ಕೊಡಿ ಎಂದು ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ! – Kannada News | 6 year old girl physically harassed in Delhi by 3 minors boys

ನವದೆಹಲಿ, ಜನವರಿ 29: ಯಾವುದೇ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಾಗ ಕೆಲವರು ಆ ಹೆಣ್ಣಿನ ಬಗ್ಗೆಯೇ ಅಪಸ್ವರ ಎತ್ತುತ್ತಾರೆ. ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಿದ್ದೇಕೆ? ಮೈ ಕಾಣುವ ಬಟ್ಟೆ ಹಾಕಿಕೊಂಡಿದ್ದೇಕೆ? ಆಕೆಯೇ ಪ್ರಚೋದನೆ ಕೊಟ್ಟಿರಬಹುದು ಎಂಬಿತ್ಯಾದಿ ಟೀಕೆಗಳನ್ನು ಮಾಡುವವರು ಇದ್ದೇ ಇರುತ್ತಾರೆ. ಆದರೆ, ಅತ್ಯಾಚಾರ ಮಾಡುವುದಕ್ಕೆ ಯಾವುದೇ ಪ್ರಚೋದನೆಯೂ ಬೇಕಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಏಕೆಂದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ (Physical Harassment) ನಡೆದಿದೆ.

ದೆಹಲಿಯ ಭಜನ್‌ಪುರದಲ್ಲಿ 6 ವರ್ಷದ ಬಾಲಕಿಯ ಮೇಲೆ 15 ವರ್ಷದೊಳಗಿನ ಮೂವರು ಹುಡುಗರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 13, 14 ಮತ್ತು 15 ವರ್ಷ ವಯಸ್ಸಿನ 3 ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ 18ರಂದು ಆ ಬಾಲಕಿಯ ಕುಟುಂಬಸ್ಥರು ತಮ್ಮ ಮಗುವಿನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಅತ್ಯಾಚಾರ ನಡೆಸಿದ ಎಲ್ಲಾ ಆರೋಪಿಗಳು ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು

“ನನ್ನ ಮಗಳ ಸ್ಥಿತಿಯನ್ನು ನೋಡಿದ ನಂತರ ಆರೋಪಿಗಳಲ್ಲಿ ಒಬ್ಬನ ತಾಯಿ ತನ್ನ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ನಾನು ಬಯಸುತ್ತೇನೆ” ಎಂದು ಆ ಮಗುವಿನ ತಂದೆ ಹೇಳಿದ್ದಾರೆ. ಭಜನ್‌ಪುರ ನಿವಾಸಿಗಳು ಈ ಪ್ರಕರಣದಲ್ಲಿ ತ್ವರಿತ ತನಿಖೆ ನಡೆಸಬೇಕೆಂದು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಬಾಲಾಪರಾಧಿಗಳನ್ನು ಬಂಧಿಸಿ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. 6 ವರ್ಷದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಆಕೆಗೆ ಕೌನ್ಸೆಲಿಂಗ್ ಕೂಡ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ

ಆ ಮಗು ಮನೆಗೆ ಬಂದಾಗ ಆಕೆಯ ಮೈಯೆಲ್ಲ ರಕ್ತವಾಗಿತ್ತು. ನಾನು ಅವಳನ್ನು ಕೇಳಿದಾಗ ಅವಳು ಮೊದಲು ಬಿದ್ದೆ ಎಂದು ಹೇಳಿದಳು. ಆದರೆ ಅವಳ ದೇಹದ ಯಾವುದೇ ಭಾಗದಲ್ಲಿ ಯಾವುದೇ ಗಾಯಗಳಾಗಿರಲಿಲ್ಲ. ಹೀಗಾಗಿ, ಆಕೆಯನ್ನು ಪ್ರೀತಿಯಿಂದ ವಿಚಾರಿಸಿದಾಗ ಅಳುತ್ತಾ ತನ್ನ ಮೇಲೆ ನಡೆದ ಲೈಂಗಿಕ ಕಿರುಕುಳವನ್ನು ಹೇಳಿದಳು. ಮೂವರು ಹುಡುಗರು ಟೆರೇಸ್​ಗೆ ಆಕೆಯನ್ನು ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆ ಮಗುವಿನ ತಾಯಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೆಚ್ಚುತ್ತಲೇ ಇದೆ ಮೋದಿ ಅಲೆ; ಇಂದೇ ಲೋಕಸಭಾ ಚುನಾವಣೆ ನಡೆದರೂ ಎನ್​ಡಿಎಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ? – Kannada News | Modi Wave in India MOTN survey predicts 352 seats for NDA if Lok Sabha polls held today

ನವದೆಹಲಿ, ಜನವರಿ 29: ನರೇಂದ್ರ ಮೋದಿಯ (PM Modi) ಹವಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂಬ ವದಂತಿಗಳು ಹಾಗೂ ವರದಿಗಳ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯು ಇಂದೇ ಲೋಕಸಭಾ ಚುನಾವಣೆ (Lok Sabha Elections) ನಡೆದರೂ ಎನ್​ಡಿಎ ಭಾರೀ ಜಯ ಸಾಧಿಸಲಿದೆ ಎಂದು ಬಹಿರಂಗಪಡಿಸಿದೆ. ಇಂದೇ ಸಾರ್ವತ್ರಿಕ ಚುನಾವಣೆ ನಡೆದರೂ ಎನ್​ಡಿಎ 352 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕದ ಜೊತೆಗಿನ ರಾಜಕೀಯ ಉದ್ವಿಗ್ನತೆಯ ನಡುವೆಯೂ ಪ್ರಧಾನಿ ಮೋದಿಯ ಮೇಲಿನ ಮತದಾರರ ನಂಬಿಕೆ ಹಾಗೆಯೇ ಉಳಿದಿದೆ ಎಂದು ಅಂಕಿಅಂಶಗಳು ತೋರಿಸಿವೆ.

ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ, ಇಂದೇ ಲೋಕಸಭಾ ಚುನಾವಣೆ ನಡೆದರೆ NDA 352 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ. ಈ ಮುನ್ಸೂಚನೆಯು ಬಿಜೆಪಿ ಮೈತ್ರಿಕೂಟಕ್ಕೆ ದೇಶದಲ್ಲಿರುವ ಬೆಂಬಲವನ್ನು ಪ್ರತಿಬಿಂಬಿಸುತ್ತದೆ. ಇಂದು (ಜನವರಿ 29) ಬಿಡುಗಡೆಯಾದ ಈ ಸಮೀಕ್ಷೆ NDAಗೆ ದೇಶದಲ್ಲಿ ಸ್ಥಿರವಾದ ಸ್ಥಾನವಿದೆ ಎಂಬ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ.

ಒಂದುವೇಳೆ ಈಗಲೇ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ 352 ಸ್ಥಾನಗಳನ್ನು ಪಡೆಯಲಿದೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯ ಬಣವು 182 ಸ್ಥಾನಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ: ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

2026ರ ವಿಧಾನಸಭಾ ಚುನಾವಣೆಗಳಿಗೂ ಮುಂಚಿತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಈ ಸಮೀಕ್ಷೆ ಬಹಳ ನಿರ್ಣಾಯಕ ಹೆಜ್ಜೆಯಾಗಿದೆ. 5 ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಇವುಗಳಲ್ಲಿ, ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿ ಈ ಹಿಂದೆ ಎಂದಿಗೂ ಬಿಜೆಪಿ ಅಧಿಕಾರಕ್ಕೇರಿಲ್ಲ. ಹೀಗಾಗಿ, ಈ ರಾಜ್ಯಗಳಲ್ಲಿ ಕೇಸರಿ ಬಾವುಟ ಹಾರಿಸಲೇಬೇಕೆಂಬ ಹಠ ಬಿಜೆಪಿ ನಾಯಕರದ್ದು.

ಪಕ್ಷವಾರು ಅಂಕಿ-ಅಂಶಗಳನ್ನು ನೋಡುವುದಾದರೆ, ಈಗ ಲೋಕಸಭಾ ಚುನಾವಣೆಗಳು ನಡೆದರೆ, ಬಿಜೆಪಿ 287 ಸ್ಥಾನಗಳನ್ನು ಗಳಿಸುತ್ತದೆ ಮತ್ತು ಸ್ವಂತವಾಗಿ ಸರ್ಕಾರ ರಚಿಸುತ್ತದೆ ಎಂದು MOTN ಸಮೀಕ್ಷೆ ಭವಿಷ್ಯ ನುಡಿದಿದೆ. ಆಗಸ್ಟ್ 2025ರ MOTN ಸಮೀಕ್ಷೆಯು ಬಿಜೆಪಿ 260 ಸ್ಥಾನಗಳನ್ನು ಗಳಿಸುತ್ತದೆ ಎಂದು ಭವಿಷ್ಯ ನುಡಿದಿತ್ತು.

ಇದನ್ನೂ ಓದಿ: Bihar Election Exit Poll Results 2025: ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎಗೆ ಗೆಲುವಿನ ಮಾಲೆ; ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಇಲ್ಲಿದೆ

ಸ್ಥಿರ ನಾಯಕತ್ವ ಮತ್ತು ‘ಬ್ರ್ಯಾಂಡ್ ಮೋದಿ’ ಮೇಲಿನ ನಂಬಿಕೆಯು ಎನ್​ಡಿಎಯನ್ನು ಉತ್ತಮ ಸ್ಥಾನದಲ್ಲಿರಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧದ ಮಿಲಿಟರಿ ಪ್ರತಿಕ್ರಿಯೆ, ಭಾರತವು ಟ್ರಂಪ್ ಅವರ ಸುಂಕ ಮತ್ತು ವ್ಯಾಪಾರ ತಂತ್ರಗಳಿಗೆ ಮಣಿಯದಿರುವುದು, ಯುಕೆ ಮತ್ತು ಯುರೋಪಿಯನ್ ಒಕ್ಕೂಟ (EU) ಜೊತೆ ಒಪ್ಪಂದಗಳನ್ನು ಮಾಡಿಕೊಂಡಿರುವುದು ದೇಶೀಯವಾಗಿ ಮತ್ತು ಜಾಗತಿಕವಾಗಿ ಮೋದಿಯವರ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸಿದೆ.

ಕಾಂಗ್ರೆಸ್‌ಗೆ ಸಂಬಂಧಿಸಿದಂತೆ, MOTN ಸಮೀಕ್ಷೆಯು 80 ಸ್ಥಾನಗಳು ಸಿಗಬಹುದು ಎಂದು ಭವಿಷ್ಯ ನುಡಿದಿದೆ. ಇದು ಆಗಸ್ಟ್ 2025ರ ಸಮೀಕ್ಷೆಯಲ್ಲಿ ಹೇಳಲಾಗಿದ್ದ 97 ಸ್ಥಾನಗಳಿಗಿಂತ ತೀವ್ರ ಕುಸಿತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:43 pm, Thu, 29 January 26

Source link

ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ – Kannada News | Doddaballapura unidentified drone found during hindu samajotsava locals alarmed

ದೇವನಹಳ್ಳಿ, ಜನವರಿ 29: ಅಪರಿಚಿತ ಡ್ರೋನ್​​ವೊಂದು (drone) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದ ಪಾಲನಜೋಗಹಳ್ಳಿಯಲ್ಲಿ ಪತ್ತೆ ಆಗಿದೆ. ಖಾಲಿ ಜಮೀನಿನಲ್ಲಿ‌‌ ಬಿದ್ದಿದ್ದ ಡ್ರೋನ್​ ಕಂಡು ಸ್ಥಳೀಯರಲ್ಲಿ ಆತಂಕ ಮೂಡಿದೆ. ಸದ್ಯ ಡ್ರೋನ್​ ಪರಿಶೀಲನೆ ಮಾಡಿದ ಪೊಲೀಸ್​ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.​​​​​

ವಿಮಾನ ಮಾದರಿಯ ಡ್ರೋನ್ ಪತ್ತೆ

ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಮನೆ ಸಮೀಪ ಡ್ರೋನ್ ಬಿದ್ದಿರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದುರಂತಗಳು ಸಂಭವಿಸಿದ್ರೂ ಎಚ್ಚೆತ್ತುಕೊಳ್ಳದ ಬಸ್​​ ಮಾಲೀಕರು: ಸ್ಲೀಪರ್ ಕೋಚ್​​​ನಲ್ಲಿ ಗೂಡ್ಸ್ ಸಾಗಾಟ, ಬಸ್ ಸೀಜ್

ಬ್ಯಾಟರಿಗಳು ಸೇರಿದಂತೆ ಎಲೆಕ್ಟ್ರಿಕ್ ವೈರ್‌ಗಳು ಜೋಡಿಸಲ್ಪಟ್ಟಿದ್ದ ಡ್ರೋನ್ ಪತ್ತೆಯಾಗಿದ್ದು, ಡ್ರೋನ್‌ನಲ್ಲಿ ಯಾವುದೇ ಸ್ಪೋಟಕ ವಸ್ತುಗಳಿವೆಯೇ ಎಂಬ ಬಗ್ಗೆ ಪೊಲೀಸ್ ಎಕ್ಸ್‌ಪರ್ಟ್ಸ್ ತಂಡ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು-ಮೂರು ಗಂಟೆಗಳ ಕಾಲ ಸೂಕ್ಷ್ಮ ಪರಿಶೀಲನೆ ಮಾಡಿದ್ದಾರೆ. ಬಳಿಕ ಡ್ರೋನ್​​ ವಶಕ್ಕೆ  ಪಡೆದುಕೊಂಡಿದ್ದಾರೆ. ಡ್ರೋನ್ ಎಲ್ಲಿಂದ ಬಂತ್ತು, ಯಾರಿಗೆ ಸೇರಿದೆ ಮತ್ತು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಸದ್ಯ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಾರಿನ ಸನ್‌ರೂಫ್‌ ಓಪನ್ ಮಾಡಿ ಮಕ್ಕಳನ್ನು ಕೂರಿಸಿ ಚಾಲನೆ: 1000 ರೂ. ದಂಡ

ಕಾರಿನ ಸನ್‌ರೂಫ್‌ ಓಪನ್ ಮಾಡಿ ಮಕ್ಕಳನ್ನು ಕೂರಿಸಿ ಚಾಲನೆ ಮಾಡಿದ ಕಾರು ಚಾಲಕನಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸರು 1000 ರೂ. ದಂಡ ವಿಧಿಸಿದ್ದಾರೆ. ಘಟನೆಯ ವಿಡಿಯೋ ವೈರಲ್​ ಆಗಿತ್ತು.

ಇದನ್ನೂ ಓದಿ: ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್​ ಹಕ್ಕಿಯಲ್ಲಿ ಚೀನಾದ ಜಿಪಿಎಸ್​ ಟ್ರ್ಯಾಕರ್ ಪತ್ತೆ

ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸನ್‌ರೂಫ್‌ ಓಪನ್ ಮಾಡಿ ಕಾರು ಚಾಲನೆ ಮಾಡಲಾಗಿತ್ತು. ವಿಡಿಯೋ ವೈರಲ್​​ ಬೆನ್ನಲ್ಲೇ ಕಾರು ವಶಕ್ಕೆ ಪಡೆದು ದಂಡ ಹಾಕಿ ಕಳಿಸಿದ್ದಾರೆ. ಮತ್ತೊಮ್ಮೆ ಅಪಾಯಕಾರಿಯಾಗಿ ಕಾರು ಚಲಾಯಿಸದಂತೆ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್​ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ ಕೇವಲ 143 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Source link

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ – Kannada News | Miscreants Attacks On groom Who Going to marriage reception at kollegal

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ರವೀಶ್ ಅಟ್ಟಾಡಿಸಿ ಬೆನ್ನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದಾರೆ.

ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದಾಗ ದಾಳಿ

6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಇಂದು (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರದ ರವೀಶ್,ಕುಣಗಳ್ಳಿ ಗ್ರಾಮದಿಂದಕಾರಿನಲ್ಲಿ ಹೋಗುವ ವೇಳೆ  ಸಿನೀಮಿಯಾ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​

ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ವಧುವಿನ ಮಾಜಿ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ನಡೆಸಿದ್ದಾರೆ.

ಹಲ್ಲೆಗೊಳಗಾದ ಮಧುಮಗ ಹೇಳಿದ್ದೇನು?

ಈ ಬಗ್ಗೆ ರವೀಶ್ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜತೆ ಎಂಗೇಜ್ಮೇಟ್ ಆಗಿತ್ತು. ಜನವರಿ 30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವು ಯಾರು ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸದ್ಯ ಮದ್ವೆಯಾಗಬೇಕಿದ್ದ ಯುವತಿಯ ಲವರ್​​​​ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯದ ಅಸಲಿಯತ್ತು ಬಯಲಿಗೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:16 pm, Thu, 29 January 26

Source link

ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗುತ್ತಾರಾ ಸುನೇತ್ರಾ ಪವಾರ್? ಶುರುವಾಯ್ತು ಬಿಸಿ-ಬಿಸಿ ಚರ್ಚೆ – Kannada News | Ajit Pawar Wife Sunetra Pawar for Deputy CM praful Patel and Bhujbal meet adds to speculation

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್‌ಸಿಪಿಯ ನಾಯಕತ್ವ ವಹಿಸಿಕೊಳ್ಳುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕೆಂದು ಎನ್‌ಸಿಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವನ್ನು ಮಾಡಲಾಗುವುದು. ಸುನೇತ್ರಾ ಪವಾರ್ ಅವರು ಅಜಿತ್‌ ಪವಾರ್ ಅವರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಪ್ರಫುಲ್ ಪಟೇಲ್ ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು. ಈ ಪ್ರಸ್ತಾಪವನ್ನು ಚರ್ಚಿಸಲು ಎನ್‌ಸಿಪಿ ನಾಯಕರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಈ ಸಮಯದಲ್ಲಿ ಎನ್‌ಸಿಪಿಗಳ ವಿಲೀನದ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!

ಎನ್‌ಸಿಪಿ ನಾಯಕ ಮತ್ತು ಸಚಿವ ನರಹರಿ ಜಿರ್ವಾಲ್ ಕೂಡ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅಜಿತ್‌ದಾದಾ ಅವರ ಎನ್​ಸಿಪಿ ಮಹಾಯುತಿಯಲ್ಲಿ ಪ್ರಮುಖ ಪಕ್ಷವಾಗಿದೆ. ಈ ಮೈತ್ರಿಕೂಟದಲ್ಲಿ ಏಕನಾಥ್ ಶಿಂಧೆ ಅವರ ಶಿವಸೇನೆ ಕೂಡ ಇದೆ.

ಅಜಿತ್ ಪವಾರ್ ನಂತರ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಅಜಿತ್‌ದಾದಾ ಅವರ ಬೆಂಬಲಿಗರು ಕೂಡ ಒತ್ತಾಯಿಸಿದ್ದಾರೆ. ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯ ನಂತರ, ಬಾರಾಮತಿಯಲ್ಲಿರುವ ಅಜಿತ್‌ದಾದಾ ಅವರ ಪ್ರೇಮಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುನೇತ್ರಾ ಪವಾರ್ ಇದೀಗ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ಮುಖ್ಯಸ್ಥ ಅಜಿತ್ ಪವಾರ್ ಜನವರಿ 28ರಂದು ನಿಧನರಾದರು. ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಸೇರಿದಂತೆ ಐವರು ಈ ವಿಮಾನದ ಅಪಘಾತದಲ್ಲಿ ಸಾವನ್ನಪ್ಪಿದರು. ಇಂದು ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ಮಾಡಲಾಯಿತು. ಈ ಸಮಯದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅನೇಕ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:55 pm, Thu, 29 January 26

Source link

Exit mobile version