ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold
ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ…