ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ – Kannada News | Rebellion in Congress: Muslim Leaders Fume Over Davanagere South Ticket; Outraged by Removal of Abdul Jabbar, Naseer Ahmed
ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿರ್ಧಾರಗಳು ಮುಸ್ಲಿಂ ಸಮುದಾಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿವೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ ಹಾಗೂ ಮುಸ್ಲಿಂ ಸಮುದಾಯದ ಇತರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ, ಮೃತಪಟ್ಟ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಪಕ್ಷದ ಸಂಪ್ರದಾಯ ಇದೆ. ಆದರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮಗ ಮಲ್ಲಿಕಾರ್ಜುನ ಈಗಾಗಲೇ ಶಾಸಕ ಮತ್ತು…