ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
T20 World Cup 2026: ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52…