ಕೋಲ್ಕತ್ತಾದಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಶೂಟಿಂಗ್ ಶುರು; ‘ದಾದಾ’ ಆಟಕ್ಕೆ ಮೈದಾನ ಸಜ್ಜು
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಬಯೋಪಿಕ್ (Biopic) ಚಿತ್ರೀಕರಣ ಭರದಿಂದ ಸಾಗುತ್ತಿದೆ. ‘ದಾದಾ: ದಿ ಸೌರವ್ ಗಂಗೂಲಿ ಸ್ಟೋರಿ’ (Dada: The Sourav Ganguly Story) ಹೆಸರಿನ ಈ ಬಹುನಿರೀಕ್ಷಿತ ಚಿತ್ರದಲ್ಲಿ ಗಂಗೂಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ಬಾಲಿವುಡ್‌ನ ಪ್ರತಿಭಾವಂತ ನಟ ರಾಜ್ಕುಮಾರ್ ರಾವ್ (Rajkummar Rao)ಅವರು ಸದ್ಯ ಕೋಲ್ಕತ್ತಾದಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ‘ಮಿಡ್ ಡೇ’ ವರದಿಯ ಪ್ರಕಾರ, ಈ ಸಿನಿಮಾದ ಮುಂಬೈ ಶೆಡ್ಯೂಲ್ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಚಿತ್ರತಂಡ…