ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ – Kannada News | Tumakuru Road Accident Survivor Breaks Down, Reveals Horror After Losing Daughter on Sabarimala Return

ತುಮಕೂರು, ಜನವರಿ 9: ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಾಲ್ವರು ನಿವಾಸಿಗಳು ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಕಾರಣ ಅವಘಡ ಸಂಭವಿಸಿದ್ದು, ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತಪಟ್ಟಿದ್ದಾರೆ. ಸಾಕ್ಷಿ ತಂದೆ ಉಲಗಪ್ಪ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಮಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಅಪಘಾತದ ಭೀಕರತೆ ಬಗ್ಗೆ ಅವರು ನೀಡಿದ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hindu Tradition: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು? – Kannada News | The Spiritual Impact of Speaking Ill of the Deceased: Insights from Hindu Tradition

ಹಿರಿಯರು ಯಾವಾಗಲೂ ಹೇಳುವ ಒಂದು ಪ್ರಮುಖ ಮಾತು ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು. ಈ ವಿಷಯದ ಕುರಿತು ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯು ನೀಡುವ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ಗುರೂಜಿಯವರು ಹೇಳುವಂತೆ, ಮರಣಿಸಿದವರ ಕುರಿತು ಮಾತನಾಡುವಾಗ, ಅವರ ಸದ್ಗುಣಗಳು, ಒಳ್ಳೆಯ ಕಾರ್ಯಗಳು ಮತ್ತು ಅವರು ನಮಗೆ ನೀಡಿದ ನೆರವುಗಳ ಬಗ್ಗೆ ಸ್ಮರಿಸುವುದು ತಪ್ಪಲ್ಲ. ವಾಸ್ತವವಾಗಿ, ಇದು ಶುಭಕರ ಎಂದು ಪರಿಗಣಿಸಲಾಗುತ್ತದೆ. ಆದರೆ, ಅವರ ಬಗ್ಗೆ ಟೀಕೆಗಳು, ನಿಂದನೆ ಅಥವಾ ನಕಾರಾತ್ಮಕ ಮಾತುಗಳನ್ನು ಆಡುವುದು ಶಾಸ್ತ್ರೋಕ್ತವಾಗಿ ಅಶುಭ ಎಂದು ಹೇಳಲಾಗುತ್ತದೆ. ಇದು ನಮ್ಮ ಸಂಬಂಧಿಕರಾಗಲಿ, ನೆರೆಹೊರೆಯವರಾಗಲಿ, ದೇಶದ ಅಥವಾ ಪ್ರಪಂಚದ ಯಾವುದೇ ವ್ಯಕ್ತಿಯಾಗಲಿ, ಯಾರ ಬಗ್ಗೆಯೂ ಮರಣಾನಂತರ ಕೆಟ್ಟದಾಗಿ ಮಾತನಾಡಬಾರದು.

ಮೃತ ವ್ಯಕ್ತಿಗಳ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವುದರಿಂದ, ನಮ್ಮ ಮೇಲೆ, ನಮ್ಮ ಮನಸ್ಸಿನ ಮೇಲೆ, ನಮ್ಮ ನಡವಳಿಕೆಗಳ ಮೇಲೆ, ನಮ್ಮ ಗ್ರಹಗತಿಗಳ ಮೇಲೆ ಹಾಗೂ ನಮ್ಮ ಶುಭ ಸಂದರ್ಭಗಳ ಮೇಲೆ ಋಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು. ಇದನ್ನು ಮನುಸ್ಮೃತಿಯಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ. ಮೃತರು ಭೌತಿಕವಾಗಿ ಇಲ್ಲದಿದ್ದರೂ ಸಹ, ನೀವು ಅವರ ಹೆಸರು ಹೇಳಿದಾಗ ಅಥವಾ ಅವರ ಚಿತ್ರವನ್ನು ನೆನಪಿಸಿಕೊಂಡಾಗ, ನಮ್ಮ ಮನಸ್ಸಿನಲ್ಲಿ ಒಂದು ರೀತಿಯ ‘ವೈ-ಫೈ’ ಸಂಪರ್ಕ ಏರ್ಪಡುತ್ತದೆ. ನಾವು ಅವರ ಬಗ್ಗೆ ಟೀಕಿಸಿದಾಗ, ಈಗಾಗಲೇ ನಮ್ಮನ್ನು ಕಾಡುತ್ತಿರುವ ಪಾಪಗಳು ಮತ್ತು ಕರ್ಮಗಳು ಇನ್ನಷ್ಟು ಹೆಚ್ಚಾಗುತ್ತವೆ. ಇದರಿಂದ ನಮ್ಮ ದೈವಬಲವು ಸ್ವಯಂಚಾಲಿತವಾಗಿ ಕಡಿಮೆಯಾಗಿ, ಪುಣ್ಯ ಕಡಿಮೆಯಾಗಿ ಪಾಪ ಹೆಚ್ಚಾದಾಗ ನಾವು ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಯುಧಿಷ್ಠಿರರು ಭೀಷ್ಮರಿಂದ ಕಲಿತ ಒಂದು ಪ್ರಮುಖ ಪಾಠವೆಂದರೆ, ಸತ್ತವರ ಬಗ್ಗೆ ಕೆಟ್ಟ ಮಾತುಗಳನ್ನಾಡಬಾರದು ಅಥವಾ ಅವರನ್ನು ಅವಮಾನಿಸಬಾರದು ಎಂಬುದು. ಹೀಗೆ ಮಾಡುವುದರಿಂದ ನಮ್ಮ ವಂಶಕ್ಕೆ ಮತ್ತು ಕುಟುಂಬಕ್ಕೆ ಕಷ್ಟಗಳು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮಗ್ರಂಥಗಳಲ್ಲಿಯೂ ಇದರ ಬಗ್ಗೆ ಸ್ಪಷ್ಟ ಉಲ್ಲೇಖಗಳಿವೆ. ವಿಶೇಷವಾಗಿ ಸೂರ್ಯೋದಯ, ಸೂರ್ಯಾಸ್ತ, ಮಧ್ಯಾಹ್ನದಂತಹ ನಿರ್ದಿಷ್ಟ ಸಮಯಗಳಲ್ಲಿ ಅಥವಾ ಮನೆಯಲ್ಲಿ, ದೇವಸ್ಥಾನದಲ್ಲಿ ಅಥವಾ ಪ್ರಯಾಣದ ಸಮಯದಲ್ಲಿ ಸತ್ತವರ ಬಗ್ಗೆ ಧನಾತ್ಮಕವಾಗಿ ಮಾತನಾಡುವುದು ಶುಭಕರ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಮೃತ ವ್ಯಕ್ತಿಗಳು ಪಂಚಭೂತಗಳಲ್ಲಿ ಲೀನವಾಗಿರುತ್ತಾರೆ. ಪಂಚಭೂತಗಳು ವಿಶ್ವದ ಎಲ್ಲೆಡೆಯೂ ಇರುವುದರಿಂದ, ನಾವು ಯಾರನ್ನೂ ಸಹ ಮರಣಾನಂತರ ಟೀಕಿಸಬಾರದು. ಇಂತಹ ನಕಾರಾತ್ಮಕ ಮಾತುಗಳು ತಕ್ಷಣವೇ ನಮ್ಮ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರಬಹುದು. ಇವು ಆರೋಗ್ಯ ಸಮಸ್ಯೆಗಳು, ಆರ್ಥಿಕ ತೊಂದರೆಗಳು, ಅವಮಾನಗಳು, ಆಕಸ್ಮಿಕ ಬದಲಾವಣೆಗಳು ಅಥವಾ ಅಪಘಾತಗಳ ರೂಪದಲ್ಲಿ ವ್ಯಕ್ತವಾಗಬಹುದು. ಎಷ್ಟೋ ಸಾರಿ, ನಾವು ಮೃತಪಟ್ಟವರ ಬಗ್ಗೆ ಕೆಟ್ಟದ್ದನ್ನು ಮಾತನಾಡಿದಾಗ ಇಂತಹ ಅಪಘಾತಗಳು ಸಂಭವಿಸುತ್ತವೆ ಎಂದು ನಂಬಲಾಗಿದೆ.

ಅವರು ನಮಗೆ ತೊಂದರೆ ಕೊಟ್ಟಿದ್ದರೂ ಸಹ, ಮರಣಾನಂತರ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುವ ಪ್ರವೃತ್ತಿಯನ್ನು ತ್ಯಜಿಸುವುದು ಉತ್ತಮ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು, 27 ಮಂದಿ ನಾಪತ್ತೆ – Kannada News | Garbage Mound Collapse in Philippines Leaves One Dead, Dozens Unaccounted For

ಫಿಲಿಪೈನ್ಸ್​, ಜನವರಿ 09: ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರೆದಿದೆ. ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ತ್ಯಾಜ್ಯ ವಿಂಗಡಣೆಯಲ್ಲಿ ನಿರತರಾಗಿದ್ದರು.

ಕಸದ ರಾಶಿ ಹಠಾತ್ತನೆ ಕುಸಿದಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 8 ಜನರನ್ನು ಕಸದ ರಾಶಿಯಿಂದ ಜೀವಂತವಾಗಿ ಹೊರಕ್ಕೆ ಎಳೆಯಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಯಾಚರಣೆ ಮುಂದುವರೆದಿದ್ದು, ಕಾಣೆಯಾದ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಪೊಲೀಸ್ ನಿರ್ದೇಶಕ ಬ್ರಿಗೇಡಿಯರ್ ಜನರಲ್ ರೊಡೆರಿಕ್ ಮಾರನನ್ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಮಿಕರು ಮಾತ್ರ ಇದ್ದಾರೆಯೇ ಅಥವಾ ಹತ್ತಿರದ ನಿವಾಸಿಗಳ ಮೇಲೂ ಸಹ ಪರಿಣಾಮ ಬೀರಿದೆಯೇ ಎಂಬುದಿನ್ನೂ ಸ್ಪಷ್ಟವಾಗಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ.

ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ ಗಡಿ ದಾಟಿರುವುದು ವಿಶೇಷವಾಗಿದೆ. ಹುಲಿಗೆಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆಯನ್ನು ಬಿಗಿ ಪೊಲೀಸ್ ಭದ್ರತೆ ಮತ್ತು ನಿಗಾದಲ್ಲಿ ನಡೆಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಉಪಸ್ಥಿತಿಯಲ್ಲಿ ಪಾರದರ್ಶಕವಾಗಿ ಎಣಿಕೆ ಕಾರ್ಯ ಪೂರ್ಣಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ

ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಸುರಕ್ಷತೆಗೆ ಆದ್ಯತೆ ನೀಡಬೇಕಿದ್ದ ಕಾರ್ಖಾನೆ ಆಡಳಿತ ಮಂಡಳಿ ತೋರಿದ ಬೇಜವಾಬ್ದಾರಿಯಿಂದ ಎಂಟು ಅಮಾಯಕ ಜೀವಗಳು ಬಲಿಯಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಪೊಲೀಸರು ಕೇವಲ ಕಾರ್ಖಾನೆಯ ಜನರಲ್ ಮ್ಯಾನೇಜರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿ, ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಕೈತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಘಟನೆ ನಡೆದು ಎರಡು ದಿನಗಳಾದರೂ ಯಾರನ್ನೂ ಬಂಧಿಸದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕ್ರಮ್ ಇನಾಮದಾರ, ವಿಜಯ ಮೆಟಗುಡ್ಡ ಮತ್ತು ಪ್ರಭಾಕರ್ ಕೋರೆ ಪಾಲುದಾರಿಕೆಯಲ್ಲಿ ನಡೆಯುತ್ತಿರುವ ಈ ಕಾರ್ಖಾನೆಯ ಮೇಲೆ ಪ್ರಭಾವಿಗಳ ಒತ್ತಡದಿಂದ ತನಿಖೆ ದಿಕ್ಕು ತಪ್ಪಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

8ರಲ್ಲಿ ಓರ್ವ ಮೃತರ ಕುಟುಂಬಕ್ಕೆ ಮಾತ್ರ ಪರಿಹಾರ ಘೋಷಣೆ

ಇತ್ತ ಮೃತರ ಕುಟುಂಬಸ್ಥರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಚನ್ನಮ್ಮ ವೃತ್ತದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರೂ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಎಂಟು ಜನರಲ್ಲಿ ಕೇವಲ ಒಬ್ಬ ಮೃತ ಕಾರ್ಮಿಕನ ಕುಟುಂಬಕ್ಕೆ ಮಾತ್ರ 18 ಲಕ್ಷ ರೂ. ಪರಿಹಾರ ಭರವಸೆ ನೀಡಲಾಗಿದೆ. ಉಳಿದ ಕುಟುಂಬಗಳಿಗೆ ಪರಿಹಾರದ ಕುರಿತು ಯಾವುದೇ ಅಧಿಕೃತ ಘೋಷಣೆ ಮಾಡಿರದ ಕಾರಣ ಬಡವರ ಜೀವಕ್ಕೆ ಬೆಲೆ ಇಲ್ಲವೇ ಎಂದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ನನಗೆ ಕಾಮಿಡಿ ಮಾಡೋರು ಇಷ್ಟ ಎಂದು ರಕ್ಷಿತಾ ಆಗಾಗ ಹೇಳಿಕೊಳ್ಳುತ್ತಾರೆ. ಈಗ ಮನೆಗೆ ಬಂದ ಅತಿಥಿಗಳ ಎದುರು ಇದೇ ವಿಷಯ ಪ್ರಸ್ತಾಪ ಮಾಡಿದ್ದಾರೆ ರಕ್ಷಿತಾ ಶೆಟ್ಟಿ. ‘ಕಾಮಿಡಿ ಮಾಡೋರು ಎಂದರೆ ನಂಗೆ ಇಷ್ಟ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ – Kannada News | Kantara: Chapter 1 Enters Oscar Race! Rishab Shetty’s Film in Best Picture Contention

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಇದು ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ಸಿನಿಮಾ ಅಲ್ಲ. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ಸಿನಿಮಾ ರೇಸ್​ಗೆ ಪ್ರವೇಶ ಪಡೆದುಕೊಂಡಿದೆ. ‘ಅತ್ಯುತ್ತಮ ಚಿತ್ರ’ ರೇಸ್​​ನಲ್ಲಿ ರಿಷಬ್ ನಿರ್ದೇಶನದ ಚಿತ್ರ ಇದೆ ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ ಮಾಡಬೇಕಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದು, ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಹೆಚ್ಚಿನ ಬಿಸ್ನೆಸ್ ಮಾಡಿದೆ.ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡಿದೆ. ಹೀಗಿರುವಾಗಲೇ ಸಿನಿಮಾ ಆಸ್ಕರ್​ ರೇಸ್​​ನಲ್ಲಿ ಸ್ಥಾನ ಪಡೆದುಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’. ಈ ಸಂಸ್ಥೆ ಪ್ರಸ್ತುತಪಡಿಸಿದ ‘ಮಹಾವತಾರ ನರಸಿಂಹ’ ಕೂಡ ಸಾಮಾನ್ಯ ಪ್ರವೇಶ ಪಟ್ಟಿ ಮೂಲಕ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಹಲವು ಹಂತಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಎರಡು ಸಿನಿಮಾಗಳ ಪೈಕಿ ಯಾವುದಾದರೂ ಚಿತ್ರಕ್ಕೆ ಗೆಲುವು ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ರಿಷಬ್ ಶೆಟ್ಟಿ

ಈವರೆಗೆ ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಈ ಮೊದಲು ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್​​ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್  ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ – Kannada News | Gilli Nata Hits 1M Instagram Followers: Bigg Boss Fans Fulfill Wish

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ಗಿಲ್ಲಿ ನಟ ಅವರು ಇತ್ತೀಚೆಗೆ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಸೇರುವಾಗ ಇನ್​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷದ 9 ಸಾವಿರ ಹಿಂಬಾಲಕರು. ಈಗ ಈ ಸಂಖ್ಯೆ 1 ಮಿಲಿಯನ್ ದಾಟಿದೆ. ಕ್ಷಣ ಕ್ಷಣಕ್ಕೂ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಬಿಗ್ ಬಾಸ್​ ಪೂರ್ಣಗೊಳ್ಳುವ ವೇಳೆಗೆ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ಕಳೆದ ಕೆಲ ದಿನಗಳಿಂದ ಗಿಲ್ಲಿ ಇನ್​​ಸ್ಟಾ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಲೇ ಇದೆ. ಇದಕ್ಕೆ ಕಾರಣ ಆಗಿದ್ದು, ಗಿಲ್ಲಿ ಅವರ ಒಂದು ಹೇಳಿಕೆ. ಅವರು ಕಾವ್ಯಾ ಬಳಿ ಮಾತನಾಡುವಾಗ, ‘ಒಂದ್ ಮಿಲಿಯನ್ ಫಾಲೋವರ್ಸ್ ಆಗಿದ್ರೆ ಕಾವು’ ಎಂದು ಹೇಳಿಕೊಂಡಿದ್ದರು. ಇದನ್ನು ಆದೇಶ ಎಂಬಂತೆ ಪಾಲಿಸಿದ ಫ್ಯಾನ್ಸ್ ಗಿಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚಿಸಿದ್ದಾರೆ. ತಮ್ಮ ಪರಿಚಯದವರ ಇನ್​ಸ್ಟಾ ಖಾತೆಗಳಿಂದ ಗಿಲ್ಲಿ ಅಕೌಂಟ್​​ಗೆ ಫಾಲೋ ಕೊಟ್ಟಿರಬಹುದು ಎಂದು ಊಹಿಸಲಾಗುತ್ತಿದೆ. ಕೇವಲ 24 ಗಂಟೆಯಲ್ಲಿ ಲಕ್ಷಕ್ಕೂ ಅಧಿಕ ಹಿಂಬಾಲಕರು ಸಿಕ್ಕಿದ್ದಾರೆ.

ರಜತ್ ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೂ ಗಿಲ್ಲಿ ನಟ ಇದೇ ಮಾತನ್ನು ಹೇಳಿದ್ದರು. ‘ನಾನು ಹೊರ ಹೋಗುವಾಗ ಇನ್​​ಸ್ಟಾ ಖಾತೆಗೆ ಒಂದು ಮಿಲಿಯನ್ ಫಾಲೋವರ್ಸ್ ಆಗಬೇಕಿತ್ತು’ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ರಜತ್ ಅವರು, ‘ಹುಡುಗರ ಅಕೌಂಟ್​​ಗೆಲ್ಲ ಯಾರು ಫಾಲೋ ಕೊಡ್ತಾರೆ ಹೋಗೋ’ ಎಂದಿದ್ದರು. ಆದರೆ, ಈ ಕಲ್ಪನೆ ತಪ್ಪು ಎಂಬುದು ಗಿಲ್ಲಿ ಕಟ್ಟಾಭಿಮಾನಿಗಳು ಸುಳ್ಳು ಮಾಡಿ ತೋರಿಸಿದ್ದಾರೆ. 1 ಮಿಲಿಯನ್ ಫಾಲೋವರ್ಸ್ ಆಗಿದ್ದಕ್ಕೆ ಗಿಲ್ಲಿ ಇನ್​​ಸ್ಟಾ ಖಾತೆ ಮೂಲಕ ಧನ್ಯವಾದ ತಿಳಿಸಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್

ಕಲರ್ಸ್ ಕನ್ನಡದ ಯಾವುದೇ ಪ್ರೋಮೋ ಬಿಡುಗಡೆ ಆದರೂ ಅದಕ್ಕೆ ಗಿಲ್ಲಿಯ ಕಮೆಂಟ್ ಇರುತ್ತದೆ. ಸತೀಶ್ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿರೋ ಪೋಸ್ಟ್​​ಗೆ ಗಿಲ್ಲಿ, ಗಿಲ್ಲಿ ಎಂದು ಕಮೆಂಟ್ ಹಾಕಿದ ಉದಾಹರಣೆ ಸಾಕಷ್ಟಿದೆ. ಗಿಲ್ಲಿ ನಟ ಅವರು ಉತ್ತಮವಾಗಿ ಆಡುತ್ತಿದ್ದಾರೆ. ಅವರೇ ಈ ಬಾರಿ ಕಪ್ ಗೆಲ್ಲಬೇಕು ಎಂಬುದು ಅಭಿಮಾನಿಗಳ ಆಶಯ. ಅಶ್ವಿನಿ ಗೌಡ, ಧನುಶ್ ಗಿಲ್ಲಿಗೆ ಸ್ಪರ್ಧೆ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ – Kannada News | Bengaluru temperature: Yellow alert for 7 district of karnataka, light rain in south area

ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಜನವರಿ 09: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಆದರೀಗ ಕೆಲ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್​ ಎಲ್ಲಿ?

ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ಬೆಚ್ಚಗಿನ ಉಡುಪು ಧರಿಸಿ ಸುರಕ್ಷಿತವಾಗಿರುವಂತೆ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ ಮತ್ತು ಒಣಹವೆ?

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

ರಾಜಧಾನಿಯಲ್ಲಿ ಚಳಿ

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉರ್ದುವಿನಲ್ಲಿ ಬರೆದಿರುವ ಬಲೂನ್ ಪತ್ತೆ – Kannada News | Mysterious Balloon Discovery Puts Security Forces on Guard in Jammu and Kashmir

ಶ್ರೀನಗರ, ಜನವರಿ 09: ಜಮ್ಮು ಮತ್ತು ಕಾಶ್ಮೀರ( Jammu and Kashmir) ದ ಸಾಂಬಾದಲ್ಲಿ ಉರ್ದುವಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಬಲೂನ್ ಪತ್ತೆಯಾಗಿದೆ. ಸಾಂಬಾ ಜಿಲ್ಲೆಯ ರಾಮಗಢ ಪ್ರದೇಶದ ಖಾನ್‌ಪುರ ಗ್ರಾಮದ ಹೊಲದಲ್ಲಿ ಗುರುವಾರ ಅನುಮಾನಾಸ್ಪದ ಬಲೂನೊಂದು ಪತ್ತೆಯಾಗಿದ್ದು, ಇದು ಪೊಲೀಸರ ತನಿಖೆಗೆ ಕಾರಣವಾಗಿದೆ.

ಉರ್ದು ಭಾಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದ ಬಲೂನನ್ನು ಸ್ಥಳೀಯ ನಿವಾಸಿಯೊಬ್ಬರು ನೋಡಿದ್ದರು ಕೂಡಲೇ ರಾಮಘಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಲೂನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.
ಬಲೂನ್ ಪ್ರಸ್ತುತ ರಾಮಗಢ ಪೊಲೀಸ್ ಠಾಣೆಯಲ್ಲಿದ್ದು, ಅಧಿಕಾರಿಗಳು ನಿವಾಸಿಗಳು ಜಾಗರೂಕರಾಗಿರಿ ಮತ್ತು ಅಂತಹ ಯಾವುದೇ ವಸ್ತುಗಳು ಕಂಡುಬಂದರೆ ತಕ್ಷಣ ವರದಿ ಮಾಡುವಂತೆ ಸೂಚಿಸಿದ್ದಾರೆ.

ಸಾಂಬಾ ಜಿಲ್ಲೆಯ ಕಟ್ಲಿ ಪ್ರದೇಶದಲ್ಲಿ ಶಂಕಿತ ವ್ಯಕ್ತಿಯೊಬ್ಬ ಶಸ್ತ್ರಾಸ್ತ್ರ ಹೊತ್ತುಕೊಂಡು ಹೋಗುತ್ತಿರುವುದನ್ನು ನೋಡಿರುವುದಾಗಿ ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದರು, ಭದ್ರತಾ ಪಡೆಗಳು ಪ್ರತ್ಯೇಕವಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದು ಆಟಿಕೆಯಲ್ಲ, ಚೀನಾ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಬುಧವಾರ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಬುಧವಾರ ಸಂಜೆ ಬಿಲ್ಲಾವರ್‌ನ ಕಹೋಗ್ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಬಳಿಕ ಎನ್​ಕೌಂಟರ್ ಕೂಡ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version