ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ – Kannada News | Dakshina Kannada: Puttur Temple’s 3 Acre Land for Public Road Ignites Debate
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಿವಾದ ಮಂಗಳೂರು, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಮುಂದಾಗಿರುವುದು ಭಕ್ತರ ಹಾಗೂ ಆಡಳಿತ ಮಂಡಳಿಯ ನಡುವೆ ಪರ-ವಿರೋಧದ ತೀವ್ರ ಚರ್ಚೆಗೆ ಕಾರಣವಾಗಿದೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಕ್ಷೇತ್ರ ಅಭಿವೃದ್ಧಿಗೆ ಹಲವು…