ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಎರಡೂ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ – Kannada News | Vijayapura MLA Basangouda Patil Yatnal Reacts On Vachanananda Swamiji Expelled And Panchamasali peeta
ವಿಜಯಪುರ, (ಏಪ್ರಿಲ್ 14): ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠಗಳ ಟ್ರಸ್ಟ್ ನಂಬಿಕೆ ಕಳೆದುಕೊಂಡಿದೆ. ಪ್ರಾಮಾಣಿಕವಾಗಿ ಸಮುದಾಯಕ್ಕಾಗಿ ಕೆಲಸ ಮಾಡುವವರು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮಗಳಿಗೆ ಮಾತನಾಡಿದ ಯತ್ನಾಳ್, ಟ್ರಸ್ಟ್ಗಳು ಸರ್ಕಾರವನ್ನು ಬ್ಲ್ಯಾಕ್ಮೇಲ್ ಮಾಡುವುದಕ್ಕೆ ಇವೆ….