ಮಂಡ್ಯಕ್ಕೆ ಬುಧವಾರ ಮೋದಿ ಭೇಟಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ, ಪ್ರಧಾನಿಗಾಗಿ ಸಿದ್ಧವಾಗಿದೆ ಮೈಸೂರು ಪೇಟ! – Kannada News | PM Modi Mandya Visit: Inauguration of Bhairavaikya Mandira at Adichunchanagiri; Special Mysore Peta Ready for PM
ಪ್ರಧಾನಿ ಮೋದಿಗಾಗಿ ಸಿದ್ಧವಾಗಿರುವ ವಿಶೇಷ ಮೈಸೂರು ಪೇಟ ಹಾಗೂ ಮೋದಿ ಸಂಗ್ರಹ ಚಿತ್ರImage Credit source: TV9 Network ಮಂಡ್ಯ, ಏಪ್ರಿಲ್ 14: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ….